AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ಪ್ರಕರಣದಲ್ಲಿ ಪತಿಯ ಕಂಪನಿ ಮಾಲೀಕರಿಗೆ ಹೆಂಡತಿ ಪತ್ರ ಬರೆಯುವುದೇಕೆ? ಸುಪ್ರೀಂ ಕೋರ್ಟ್ ತರಾಟೆ

ಪತಿ-ಪತ್ನಿಯ ನಡುವಿನ ಜಗಳ ಅಥವಾ ವಿಚ್ಛೇದನದ ಮಾತುಕತೆ ನಡೆಯುತ್ತಿರುವಾಗ, ಪತಿಯ ಉದ್ಯೋಗದಾತ ಸಂಸ್ಥೆಗೆ ಅಥವಾ ಮೇಲಧಿಕಾರಿಗಳಿಗೆ ದೂರು ನೀಡಿ ಪತ್ರ ಬರೆಯುವ ಪತ್ನಿಯರ ವರ್ತನೆಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ದೂರುಗಳಿಂದ ಪತಿ ತನ್ನ ಕೆಲಸವನ್ನೇ ಕಳೆದುಕೊಳ್ಳಬಹುದು. ಗಂಡನಿಗೆ ಕೆಲಸವೇ ಇಲ್ಲದಿದ್ದರೆ ಅದರಿಂದ ಪತ್ನಿಗೆ ಸಿಗಬೇಕಾದ ಜೀವನಾಂಶಕ್ಕೂ ತೊಂದರೆಯಾಗಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ವಿಚ್ಛೇದನ ಪ್ರಕರಣದಲ್ಲಿ ಪತಿಯ ಕಂಪನಿ ಮಾಲೀಕರಿಗೆ ಹೆಂಡತಿ ಪತ್ರ ಬರೆಯುವುದೇಕೆ? ಸುಪ್ರೀಂ ಕೋರ್ಟ್ ತರಾಟೆ
Supreme Court Of IndiaImage Credit source: Getty Image
ಸುಷ್ಮಾ ಚಕ್ರೆ
| Edited By: |

Updated on:Jul 21, 2026 | 3:40 PM

Share

ನವದೆಹಲಿ, ಜುಲೈ 21: ದಂಪತಿಗಳ ನಡುವಿನ ವೈವಾಹಿಕ ವಿವಾದ ಅಥವಾ ವಿಚ್ಛೇದನ ಪ್ರಕರಣಗಳ ಸಂದರ್ಭದಲ್ಲಿ ಪತಿಯ ಉದ್ಯೋಗದಾತ ಕಂಪನಿ ಅಥವಾ ಮೇಲಧಿಕಾರಿಗಳಿಗೆ ಪತ್ನಿ ದೂರು ಪತ್ರ ಬರೆಯುವ ಇತ್ತೀಚಿನ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ದೂರುಗಳಿಂದ ಪತಿಯ ಕೆಲಸವೇ ಹೊರಟುಹೋಗಬಹುದು. ಇದರಿಂದ ಪತ್ನಿಗೆ ಸಿಗಬೇಕಾದ ಜೀವನಾಂಶದ ಮೇಲೆ ಕೂಡ ತೀವ್ರ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. ಏನಿದು ಪ್ರಕರಣ? ಪತ್ನಿ ದೂರು ನೀಡಿದ್ದೇಕೆ? ಎಂಬ ಕುರಿತಾದ ಮಾಹಿತಿ ಇಲ್ಲಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರಿದ್ದ ಪೀಠವು ಈ ಬಗ್ಗೆ ವಿಚಾರಣೆ ನಡೆಸಿದೆ. ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ನಾಗರತ್ನ ಅವರು, “ವೈವಾಹಿಕ ವಿವಾದಗಳ ಸಂದರ್ಭದಲ್ಲಿ ಪತಿಯ ಉದ್ಯೋಗದಾತರಿಗೆ ದೂರಿನ ಪತ್ರ ಬರೆಯುವುದು ಪತ್ನಿ ಮಾಡುವ ಅತ್ಯಂತ ಕೆಟ್ಟ ಕೆಲಸಗಳಲ್ಲಿ ಒಂದಾಗಿದೆ” ಎಂದು ಹೇಳಿದ್ದಾರೆ. ವಿಚ್ಛೇದನ ಕೋರುವುದು ಕಾನೂನಾತ್ಮಕ ಹಕ್ಕು. ಆದರೆ ಪತಿಯ ಜೀವನೋಪಾಯವನ್ನೇ ಕಸಿದುಕೊಳ್ಳುವುದು ಅಥವಾ ಆತನ ಉದ್ಯೋಗಕ್ಕೆ ಕಂಟಕ ತರುವುದು ಅತ್ಯಂತ ಅಪಾಯಕಾರಿ ನಡವಳಿಕೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್ ಎಚ್ಚರಿಕೆ:

ಪತಿ ಕೆಲಸ ಮಾಡುವ ಕಂಪನಿ ಅಥವಾ ಇಲಾಖೆಗೆ ದೂರು ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ, “ವೈವಾಹಿಕ ವಿವಾದದ ಸಮಯದಲ್ಲಿ ಪತಿಯ ಉದ್ಯೋಗದಾತರಿಗೆ ಪತ್ರ ಬರೆಯುವುದು ಪತ್ನಿ ಮಾಡಬಹುದಾದ ಅತ್ಯಂತ ಕೆಟ್ಟ ಕೆಲಸಗಳಲ್ಲಿ ಒಂದಾಗಿದೆ. ಇದರಿಂದ ಗಂಡ ತನ್ನ ಉದ್ಯೋಗವನ್ನು ಕಳೆದುಕೊಳ್ಳಬೇಕಾಗುತ್ತದೆ. ಗಂಡನಿಗೆ ಕೆಲಸವೇ ಇಲ್ಲದಿದ್ದರೆ ಭವಿಷ್ಯದಲ್ಲಿ ಆತನಿಂದ ಪಡೆಯಬಹುದಾದ ಜೀವನಾಂಶಕ್ಕೂ ಯಾವುದೇ ಆಧಾರ ಉಳಿಯುವುದಿಲ್ಲ. ಇದರಿಂದ ಪತ್ನಿಗೇ ತೊಂದರೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಯಾಲಯದ ದಾರಿ ತಪ್ಪಿಸಬೇಡಿ’; ಕಾಮಿಡಿಯನ್ ಸಮಯ್ ರೈನಾಗೆ 3 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್!

ಇದಕ್ಕೆ ಸ್ಪಷ್ಟನೆ ನೀಡಿದ ಮಹಿಳೆಯ ವಕೀಲರು, “ವಾಯುಪಡೆಗೆ ಸೇರಿದ ಹೆಲ್ಮೆಟ್ ಅನ್ನು ಪತ್ನಿ ಮತ್ತು ಆಕೆಯ ಸಹೋದರ ಕದ್ದಿದ್ದಾರೆ ಎಂದು ಪತಿಯು ಈ ಹಿಂದೆ ಸುಳ್ಳು ದೂರು ನೀಡಿದ್ದನು. ಆ ಹೆಲ್ಮೆಟ್ ಎಲ್ಲಿದೆ ಎಂದು ತಿಳಿಯುವ ಉದ್ದೇಶದಿಂದಷ್ಟೇ ವಾಯುಪಡೆಗೆ ಪತ್ರ ಬರೆಯಲಾಗಿತ್ತು” ಎಂದು ವಾದಿಸಿದರು.

ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದಂಪತಿಯ ನಡುವಿನ ಎಲ್ಲಾ ವಿವಾದಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸಲು ಪ್ರಕರಣವನ್ನು ‘ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೇಂದ್ರಕ್ಕೆ’ ಉಲ್ಲೇಖಿಸಿದೆ. ಅಲ್ಲದೆ, ಎಲ್ಲಾ ಆರೋಪಗಳನ್ನು ಹಿಂಪಡೆದು ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಮಹಿಳೆಗೆ ಸಲಹೆ ನೀಡುವಂತೆ ಆಕೆಯ ಪರ ವಕೀಲರಿಗೆ ನ್ಯಾಯಪೀಠ ಸೂಚಿಸಿದೆ.

ಇದನ್ನೂ ಓದಿ: 9ನೇ ತರಗತಿಯಿಂದಲೇ ಏಕೆ?; ಸಿಬಿಎಸ್​ಇ ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಆಕ್ಷೇಪ

ಈ ಪ್ರಕರಣದ ಹಿನ್ನೆಲೆ ಏನು?:

ಅಸ್ಸಾಂನಲ್ಲಿ ಪತಿಯ ಸ್ನೇಹಿತ ತನ್ನ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ವರ್ಗಾಯಿಸುವಂತೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಪ್ರಸಂಗ ನಡೆಯಿತು. ಅಸ್ಸಾಂನಲ್ಲಿ ಪತಿಯ ಸ್ನೇಹಿತ ತನ್ನ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ವರ್ಗಾಯಿಸುವಂತೆ ಕೋರಿ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತಾನು ಈಗಾಗಲೇ ಗಾಜಿಯಾಬಾದ್‌ನಲ್ಲಿ ಪತಿಯ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಿರುವುದಾಗಿ ಆಕೆ ವಾದಿಸಿದ್ದರು.

ಅರ್ಜಿದಾರ ಮಹಿಳೆಯ ಪತಿ ಭಾರತೀಯ ವಾಯುಪಡೆಯ ಅಧಿಕಾರಿಯಾಗಿದ್ದು, ಅವರು ಸೇವಾ ನಿಯಮಗಳನ್ನು ಉಲ್ಲಂಘಿಸಿ ಸ್ವತಂತ್ರ ಉದ್ಯಮ ನಡೆಸುತ್ತಿದ್ದಾರೆ ಎಂದು ಆ ಮಹಿಳೆಯು ದೆಹಲಿಯ ವಾಯುಪಡೆ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆಕೆಯ ಪತಿಯ ಸಹೋದ್ಯೋಗಿ ಹಾಗೂ ಸ್ನೇಹಿತ ಆ ಮಹಿಳೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:26 pm, Tue, 21 July 26

Follow Us
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ