AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯನ್ನು ಹೊಗಳಿ ಮತ್ತೆ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್

ಶಶಿ ತರೂರ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ರಾಮನಾಥ್ ಗೋಯೆಂಕಾ ಉಪನ್ಯಾಸವು ಆರ್ಥಿಕ ದೃಷ್ಟಿಕೋನ ಮತ್ತು ಕ್ರಿಯೆಗೆ ಸಾಂಸ್ಕೃತಿಕ ಕರೆಯಾಗಿ ಕಾರ್ಯನಿರ್ವಹಿಸಿತು ಎಂದು ಹೇಳಿದ್ದರು. ಹೀಗೆ ಆಗಾಗ ಪ್ರಧಾನಿ ಮೋದಿಯನ್ನು ಹೊಗಳುವ ಮೂಲಕ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್​ ಪಕ್ಷದವರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇರುತ್ತಾರೆ. ಈ ಬಾರಿ ಕೂಡ ಹಲವು ಕಾಂಗ್ರೆಸ್ ನಾಯಕರು ಶಶಿ ತರೂರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ, ನೀವೇಕೆ ಇನ್ನೂ ಕಾಂಗ್ರೆಸ್​​ನಲ್ಲಿದ್ದೀರಿ? ಬಿಜೆಪಿಗೆ ಸೇರಬಹುದಲ್ಲ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿಯನ್ನು ಹೊಗಳಿ ಮತ್ತೆ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್
Shashi Tharoor
ಸುಷ್ಮಾ ಚಕ್ರೆ
|

Updated on: Nov 20, 2025 | 4:18 PM

Share

ನವದೆಹಲಿ, ನವೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಭಾಷಣವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಶ್ಲಾಘಿಸಿರುವುದು ಕಾಂಗ್ರೆಸ್ ಪಕ್ಷದೊಳಗೆ ಹೊಸ ಉದ್ವಿಗ್ನತೆ ಮತ್ತು ಚರ್ಚೆಗೆ ಕಾರಣವಾಗಿದೆ. ಶಶಿ ತರೂರ್ ಅವರು ಮೋದಿ ಅವರ ಭಾಷಣದ ಅಂಶಗಳನ್ನು ಎಕ್ಸ್​​ನಲ್ಲಿ ಪೋಸ್ಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತವನ್ನು ‘ಉದಯೋನ್ಮುಖ ಮಾದರಿ’ ಎಂದು ಚಿತ್ರಿಸಿದ್ದಕ್ಕಾಗಿ ಶಶಿ ತರೂರ್ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದರು. ಈ ಕಾರಣದಿಂದಾಗಿ ಹಲವಾರು ಕಾಂಗ್ರೆಸ್ ನಾಯಕರು ಶಶಿ ತರೂರ್ ಅವರನ್ನು ಬಹಿರಂಗವಾಗಿ ಟೀಕಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು ಶಶಿ ತರೂರ್ ಅವರ ಪಕ್ಷದ ನಿಷ್ಠೆಯನ್ನು ಪ್ರಶ್ನಿಸಿದ್ದಾರೆ. ಶಶಿ ತರೂರ್ ಅವರನ್ನು ಕಪಟ ಎಂದು ಕರೆದಿರುವ ಅವರು “ನೀವು ಕಾಂಗ್ರೆಸ್‌ನಲ್ಲಿ ಏಕೆ ಇದ್ದೀರಿ?” ಎಂದು ಕೇಳಿದ್ದಾರೆ. ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇಟ್ ಕೂಡ ಶಶಿ ತರೂರ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮೋದಿಯವರ ಭಾಷಣವನ್ನು ಕ್ಷುಲ್ಲಕವೆಂದು ಟೀಕಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನಿಗಳು ರೈತರ ಹೊಲಗಳನ್ನೇ ಪ್ರಯೋಗಾಲಯವಾಗಿ ಪರಿವರ್ತಿಸಬೇಕು; ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ಕರೆ

ಜಾಗತಿಕ ಸವಾಲುಗಳ ನಡುವೆಯೂ ಭಾರತವನ್ನು “ಉದಯೋನ್ಮುಖ ಮಾರುಕಟ್ಟೆ”ಯಿಂದ “ಉದಯೋನ್ಮುಖ ಮಾದರಿ”ಯಾಗಿ ಪರಿವರ್ತಿಸುವ ಪ್ರಧಾನಿ ಮೋದಿ ಅವರ ದೃಷ್ಟಿಕೋನದ ಮೇಲೆ ಶಶಿ ತರೂರ್ ಅವರ ಹೊಗಳಿಕೆ ಕೇಂದ್ರೀಕೃತವಾಗಿತ್ತು. ವಸಾಹತುಶಾಹಿ ಗುಲಾಮ ಮನಸ್ಥಿತಿಯನ್ನು ತೆಗೆದುಹಾಕುವ ಮತ್ತು ಭಾಷೆ, ಸಂಸ್ಕೃತಿ, ಪರಂಪರೆಯ ಮೂಲಕ ರಾಷ್ಟ್ರೀಯ ಹೆಮ್ಮೆಯನ್ನು ಉತ್ತೇಜಿಸುವತ್ತ ಪಿಎಂ ಮೋದಿ ಅವರ ಗಮನವನ್ನು ಅವರು ಶ್ಲಾಘಿಸಿದ್ದರು. ಹಾಗೇ, ಶಶಿ ತರೂರ್ ಕಾಂಗ್ರೆಸ್ ತೊರೆಯುವ ಯೋಜನೆಗಳನ್ನು ನಿರಾಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!