ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ.

ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ
ಸಾಂದರ್ಭಿಕ ಚಿತ್ರ
Follow us
| Updated By: Lakshmi Hegde

Updated on:Aug 25, 2021 | 12:39 PM

ದೆಹಲಿ: ಆಗಸ್ಟ್​ 27ರವರೆಗೆ ದೇಶಾದ್ಯಂತ ಅನೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಅದರಲ್ಲೂ ಪಶ್ಚಿಮ ಬಂಗಾಳ, ಸಿಕ್ಕಿಂ, ಮೇಘಾಲಯ, ಅಸ್ಸಾಂ, ಬಿಹಾರ್​, ಉತ್ತರಾಖಂಡ್​, ಉತ್ತರಪ್ರದೇಶ, ಕೇರಳ, ತಮಿಳುನಾಡು ಪುದುಚೇರಿಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ನೀಡಿದೆ.

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ. ಈ ಕಾರಣದಿಂದ ಇಂದು ಮತ್ತು ನಾಳೆ (ಆಗಸ್ಟ್​ 25) ಮೇಘಾಲಯ-ಅಸ್ಸಾಂಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಹಾಗೇ, ಈಶಾನ್ಯ ಭಾರತ ಮತ್ತು ಪಶ್ಚಿಮ ಬಂಗಾಳ, ಸಿಕ್ಕಿಂಗಳಲ್ಲಿ ಆಗಸ್ಟ್​ 27ರವರೆಗೂ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ.

ಪೂರ್ವ ಭಾರತದಲ್ಲೂ ಕೂಡ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಸಹಿತ ಮಳೆಯಾಗಬಹುದು. ಮುಂದಿನ 5 ದಿನಗಳ ಕಾಲ ವಾಯುವ್ಯ, ಮಧ್ಯ ಭಾರತ ಹಾಗೂ ಪಶ್ಚಿಮ ಕರಾವಳಿಯಲ್ಲಿ ಮಳೆ ಕಡಿಮೆಯಾಗಲಿದೆ ಎಂದೂ ಐಎಂಡಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಕಾಲೇಜಿನ ಬಳಿ 2 ದಿನದ ಹೆಣ್ಣು ಶಿಶು ಬಿಟ್ಟುಹೋಗಿರುವ ದುರುಳರು

ಮತ್ತೊಮ್ಮೆ ಮದುವೆಯಾದ ನಟ ಪ್ರಕಾಶ್​ ರಾಜ್​ !-ಎಲ್ಲವೂ ಮಗನಿಗಾಗಿಯಂತೆ

Published On - 12:38 pm, Wed, 25 August 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ