Rs 6 Cr Alimony: ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ -ಪತ್ನಿಯ ವಿರುದ್ಧ ಬೆದರಿಸುವಿಕೆ ಪ್ರಕರಣ ದಾಖಲಿಸಿದ ಪೊಲೀಸರು

Madhya Pradesh Divorce Case: ಇತ್ತೀಚೆಗೆ ರಾಮ್ ರಜಪೂತ್ ಅವರ ಪತ್ನಿ ಆರು ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507, 509 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ - ಭನ್ವಾರ್​​ಕುವಾ ಪೊಲೀಸ್ ಠಾಣೆಯ ಡಿಸಿಪಿ ರಾಜೇಶ್ ಸಿಂಗ್

Rs 6 Cr Alimony: ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ -ಪತ್ನಿಯ ವಿರುದ್ಧ ಬೆದರಿಸುವಿಕೆ ಪ್ರಕರಣ ದಾಖಲಿಸಿದ ಪೊಲೀಸರು
ವಿಚ್ಛೇದನಕ್ಕಾಗಿ ಪತಿಗೆ ಬೆದರಿಕೆ, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆ
Follow us
ಸಾಧು ಶ್ರೀನಾಥ್​
|

Updated on:Jun 12, 2023 | 1:38 PM

ಇತ್ತೀಚೆಗೆ ಪತಿ-ಪತ್ನಿಯರ ಸಂಬಂಧ ಬಿಗಡಾಯಿಸಿ, ಸಣ್ಣಪುಟ್ಟ ಕಾರಣಗಳಿಗಾಗಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರುತ್ತಿದೆ. ವೈವಾಹಿಕ ಸಂಬಂಧವು ಸುಲಭವಾಗಿ ಮುರಿದುಹೋಗುತ್ತಿದೆ. ಈ ಪ್ರಕರಣದಲ್ಲೂ ಹಾಗೆಯೇ ಪತಿ-ಪತ್ನಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಈ ಪ್ರಕರಣ ನ್ಯಾಯಾಲಯದ ವ್ಯಾಪ್ತಿಗೆ ಬಂದಾಗ ಪತ್ನಿ ಒಂದು ಹೆಜ್ಜೆ ಮುಂದಿಟ್ಟು, 6 ಕೋಟಿ ರೂ ಜೀವನಾಂಶಕ್ಕೆ ಬೇಡಿಕೆಯಿಟ್ಟು (alimony) ಪತಿಯಿಂದ ವಿಚ್ಛೇದನಕ್ಕೆ ಯತ್ನಿಸಿದ್ದಾಳೆ. ಕೋಟಿಗಟ್ಟಲೆ ಜೀವನಾಂಶ ನೀಡುವಂತೆ ಬೆದರಿಕೆ ಹಾಕಿದ್ದಾಳೆ ಎಂದು ಹೆಂಡತಿಯ ವಿರುದ್ಧ ಗಂಡ ಪೊಲೀಸ್ ದೂರು ದಾಖಲಿಸಿದ್ದಾರೆ. ವಿವರಗಳನ್ನು ನೋಡುವುದಾದರೆ…

ಪತಿಯಿಂದ ವಿಚ್ಛೇದನಕ್ಕೆ ರೂ. 6 ಕೋಟಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಪತ್ನಿಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಸಿರುವ ಪ್ರಕರಣ (Intimidation) ದಾಖಲಿಸಿಕೊಂಡಿದ್ದಾರೆ. ಇಬ್ಬರ ನಡುವಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಏತನ್ಮಧ್ಯೆ, ಜೀವನಾಂಶಕ್ಕಾಗಿ ಪತ್ನಿ ತನ್ನ ಪತಿಗೆ ಬೆದರಿಕೆ ಹಾಕಿದ್ದಾಳೆ ಎಂಬ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ನಾನಾ ಸೆಕ್ಷನ್ ಅಡಿಯಲ್ಲಿ ಪತ್ನಿ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

Also Read: ಉಚಿತ ಯೋಜನೆಗಳ ಖುಷಿಯಲ್ಲಿ ಕಳೆದು ಹೋಗಬೇಡಿ, ಪಂಜಾಬ್​ನ ಸ್ಥಿತಿ ಒಮ್ಮೆ ನೋಡಿ

ಈ ಬಗ್ಗೆ ಭನ್ವಾರ್​​ಕುವಾ ಪೊಲೀಸ್ ಠಾಣೆಯ (Bhanwarkuwa police station) ಡಿಸಿಪಿ ರಾಜೇಶ್ ಸಿಂಗ್ ಮಾತನಾಡಿ, ಲಲಿತ್‌ಪುರದಲ್ಲಿ ವಾಸಿಸುವ ರಾಮ್ ರಜಪೂತ್ ದಂಪತಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ ಇತ್ತೀಚೆಗೆ ರಾಮ್ ರಜಪೂತ್ ಅವರ ಪತ್ನಿ ಆರು ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507, 509 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:36 pm, Mon, 12 June 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್