AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಮೇಲೆ ಅನುಮಾನ, ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಹೆಂಡತಿ ತನ್ನ ಪತಿಯ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಘಟನೆ ನಡೆದಿದೆ. ಪತಿ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿ ಹೆಂಡತಿ ಈ ಕೃತ್ಯ ಎಸಗಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಹೀನಾ ಕೃತ್ಯ ಎಸೆದ ಮಹಿಳೆಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಪತಿಯ ಮೇಲೆ ಅನುಮಾನ, ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ
Boiling Oil
ಅಕ್ಷತಾ ವರ್ಕಾಡಿ
|

Updated on:May 31, 2025 | 1:54 PM

Share

ಚೆನ್ನೈ: ಕೋಪದ ಭರದಲ್ಲಿ ಹೆಂಡತಿಯೊಬ್ಬಳು ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೃಷ್ಣಪುರಂನ ಆಟೋ ಚಾಲಕ ಬಾಲಸುಬ್ರಮಣಿಯನ್ (42). ಆತನ ಪತ್ನಿ ಮುತ್ತುಲಕ್ಷ್ಮಿ (34). ಈ ದಂಪತಿಗೆ 3 ಹೆಣ್ಣು ಮತ್ತು ಒಬ್ಬ ಗಂಡು ಮಗ ಇದ್ದಾರೆ. ಗಂಡ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಮುತ್ತುಲಕ್ಷ್ಮಿ ಆತನೊಂದಿಗೆ ಈ ಹಿಂದೆ ಹಲವು ಬಾರಿ ಜಗಳ ಮಾಡಿದ್ದಾಳೆ. ಇತ್ತೀಚಿಗಷ್ಟೇ 25 ದಿನಗಳ ಹಿಂದೆಯೂ ಮುತ್ತುಲಕ್ಷ್ಮಿ ಜಗಳವಾಡಿ ತನ್ನ ಮಕ್ಕಳೊಂದಿಗೆ ತವರು ಮನೆ ಸೇರಿದ್ದಳು.

ಈ ಸಂಬಂಧ ನೆಲ್ಲೈ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಾದ ನಂತರ, ಪೊಲೀಸರು ಇಬ್ಬರನ್ನೂ ಕರೆಸಿ ರಾಜಿ ಮಾತುಕತೆ ಮಾಡಿಸಿದ್ದಾರೆ. ಅದರಂತೆ ಮುತ್ತುಲಕ್ಷ್ಮಿ ನಾಲ್ಕು ದಿನಗಳ ಹಿಂದೆ ತನ್ನ ಗಂಡನ ಮನೆಗೆ ಹೋಗಿದ್ದಾಳೆ. ಈ ಪರಿಸ್ಥಿತಿಯಲ್ಲಿ, ನಿನ್ನೆ ಬೆಳಿಗ್ಗೆ, ಮೇ 30 ರಂದು ಮತ್ತೆ ಗಂಡ ಹೆಂಡತಿ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ತಾರಕಕ್ಕೇರಿದ್ದು, ಏಕಾಏಕಿ ಅಡುಗೆ ಮನೆಗೆ ಹೋದ ಮುತ್ತುಲಕ್ಷ್ಮಿ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ತದ್ದು ಸುಬ್ರಮಣಿಯನ್ ಮೇಲೆ ಹಾಕಿದ್ದಾಳೆ.

ಇದನ್ನೂ ಓದಿ: ಹೆಂಡ್ತಿಗೆ ಹೆರಿಗೆ ನೋವು : ಪತ್ನಿ ನೋವು ಅನುಭವಿಸುವುದನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತ ಪತಿ

ಪರಿಣಾಮವಾಗಿ, ನೋವಿನಿಂದ ಕಿರುಚುತ್ತಿದ್ದ ಬಾಲಸುಬ್ರಮಣಿಯನ್​​ಯನ್ನು ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಂತಿಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುತ್ತುಲಕ್ಷ್ಮಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಆರಂಭಿಕ ತನಿಖೆಯಲ್ಲಿ, ಬಾಲಸುಬ್ರಮಣಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಮುತ್ತುಲಕ್ಷ್ಮಿ ಹೇಳಿಕೊಂಡಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:21 pm, Sat, 31 May 25

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?