AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಬಿಲಿ ಹಿಲ್ಸ್ ​​ನಲ್ಲಿ ಗ್ರಾಹಕರ ಸೆಳೆಯಲು ಹೀಗಾ ಮಾಡೋದು!? ಪಬ್ ನಲ್ಲಿ ವನ್ಯಜೀವಿ ಪ್ರದರ್ಶನಕ್ಕೆ ನೆಟಿಜನ್‌ಗಳಿಂದ ಆಕ್ರೋಶ

ಜುಬಿಲಿ ಹಿಲ್ಸ್ ಪಬ್​​ನಲ್ಲಿ ಸಿಗರೇಟು ಹೊಗೆ, ಮದ್ಯ ಸಮಾರಾಧನೆ ಮಧ್ಯೆ ವನ್ಯ ಜೀವಿಗಳ ಪ್ರದರ್ಶಿಸಿ, ಹಿಂಸೆ! ನೆಟಿಜನ್‌ಗಳ ತೀವ್ರ ಆಕ್ರೋಶ

ಜುಬಿಲಿ ಹಿಲ್ಸ್ ​​ನಲ್ಲಿ ಗ್ರಾಹಕರ ಸೆಳೆಯಲು ಹೀಗಾ ಮಾಡೋದು!? ಪಬ್ ನಲ್ಲಿ ವನ್ಯಜೀವಿ ಪ್ರದರ್ಶನಕ್ಕೆ ನೆಟಿಜನ್‌ಗಳಿಂದ ಆಕ್ರೋಶ
ಪಬ್ ನಲ್ಲಿ ವನ್ಯಜೀವಿ ಪ್ರದರ್ಶನಕ್ಕೆ ನೆಟಿಜನ್‌ಗಳಿಂದ ಆಕ್ರೋಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 30, 2023 | 11:48 AM

Share

ಜುಬಿಲಿ ಹಿಲ್ಸ್‌ನಲ್ಲಿರುವ (Jubilee Hills) ಗ್ಸೋರಾ ನೈಟ್ ಪಬ್ ನಲ್ಲಿ ಮೊನ್ನೆ ಭಾನುವಾರ (ಮೇ 28) ವನ್ಯಜೀವಿ ಪ್ರದರ್ಶನ ಏರ್ಪಾಡಾಗಿತ್ತು. ಗ್ರಾಹಕರನ್ನು ಸೆಳೆಯಲು ಪಬ್ ನಿರ್ವಾಹಕರು ‘ವೈಲ್ಡ್ ಜಂಗಲ್ ಪಾರ್ಟಿ’ ಎಂಬ ಕಾರ್ಯಕ್ರಮಕ್ಕೆ ಕಾಡು ಪ್ರಾಣಿಗಳನ್ನು (Wild animals) ಕರೆತಂದಿದ್ದಾರೆ. ಈ ಘಟನೆಯ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಕ್ಲಬ್ ಆವರಣದಲ್ಲಿ ನಾಗರಹಾವು, ಹಲ್ಲಿಯಂತಹ ಹಲವು ಪ್ರಾಣಿಗಳಿವೆ. ಈ ವಿಡಿಯೋ ನೋಡಿದ ನೆಟ್ಟಿಗರು ಪಾರ್ಟಿ ಹೆಸರಿನಲ್ಲಿ ಕಾಡುಪ್ರಾಣಿಗಳಿಗೆ ಹಿಂಸೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಾಟೆ, ಸಿಗರೇಟು ಹೊಗೆ, ಮದ್ಯ ಸೇವಿಸುವ ವಾತಾವರಣದಲ್ಲಿ ಮೂಕ ಜೀವಿಗಳನ್ನು ತೋರಿಸಿ ಹಿಂಸಿಸುತ್ತಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಶಿಶ್ ಚೌಧರಿ ಎಂಬ ಯುವಕ ಈ ಸಂಬಂಧ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾನೆ. ಆ ಟ್ವೀಟ್ ನೋಡಿದ ಪೌರಾಡಳಿತ ಮತ್ತು ನಗರಾಭಿವೃದ್ಧಿ (MA & UD) ವಿಶೇಷ ಮುಖ್ಯ ಕಾರ್ಯದರ್ಶಿ ಅರವಿಂದ್ ಕುಮಾರ್ ಪ್ರತಿಕ್ರಿಯಿಸಿ, ಈ ವಿಷಯವನ್ನು ತೆಲಂಗಾಣ ಡಿಜಿಪಿ, ಸಿಪಿಗೆ ತಿಳಿಸುವುದಾಗಿ ಟ್ವೀಟ್ ಮಾಡಿದ್ದಾರೆ. ಇಂತಹ ಕ್ರಮಗಳು ನಾಚಿಕೆಗೇಡಿನ ಸಂಗತಿ ಎಂದು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ. ಈ ಬಗ್ಗೆ ಜುಬ್ಲಿ ಹಿಲ್ಸ್ ಪೊಲೀಸರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು ಕೂಡ ಸೈಬರಾಬಾದ್‌ನ ಪಬ್‌ನ ವ್ಯವಸ್ಥಾಪಕರು ಪ್ರಾಣಿಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಹಳೆಪೇಟೆ ಪ್ರದೇಶದ ವ್ಯಕ್ತಿಯೊಬ್ಬರಿಂದ ಪ್ರಾಣಿಗಳನ್ನು ತಂದು ಪ್ರದರ್ಶನಕ್ಕೆ ಇಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಗ್ರಾಹಕರನ್ನು ಸೆಳೆಯಲು ಇಷ್ಟು ಕೀಳು ಮಟ್ಟಕ್ಕೆ ಇಳಿಯಬೇಕಾ?’ ಎಂದು ಜುಬಿಲಿ ಹಿಲ್ಸ್ ಪಬ್ಲೋ ವನ್ಯಜೀವಿ ಪ್ರದರ್ಶನಕ್ಕೆ ನೆಟಿಜನ್‌ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?