ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ: ಕಮಲ ಪಕ್ಷದ ಘೋಷಣೆ
ಮಧುರೈನಲ್ಲಿ ಮಾತನಾಡಿದ ಜೆ.ಪಿ. ನಡ್ಡಾ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು ಎಐಎಡಿಎಂಕೆ ಜತೆ ನಾವು ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುತ್ತಿದ್ದೇವೆ. ಈ ಮೂಲಕ ಮತ್ತೊಂದು ಅವಧಿಗೆ ಅವರ ಜತೆ ಕೈ ಜೋಡಿಸುತ್ತಿದ್ದೇವೆ ಎಂದಿದ್ದಾರೆ.

ಮಧುರೈ: ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಾವು ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಮಧುರೈನಲ್ಲಿ ಮಾತನಾಡಿದ ಜೆ.ಪಿ. ನಡ್ಡಾ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು ಎಐಎಡಿಎಂಕೆ ಜತೆ ನಾವು ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುತ್ತಿದ್ದೇವೆ. ಈ ಮೂಲಕ ಮತ್ತೊಂದು ಅವಧಿಗೆ ಅವರ ಜತೆ ಕೈ ಜೋಡಿಸುತ್ತಿದ್ದೇವೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮಿಳು ನಾಡಿಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ರಕ್ಷಣಾ ಕಾರಿಡಾರ್ ಸೇರಿ ಸಾಕಷ್ಟು ಯೋಜನೆಗಳು ಎನ್ಡಿಎ ಅಧಿಕಾರಾವಧಿಯಲ್ಲೇ ಬಂದಿದೆ. ಯುಪಿಎ ಅಧಿಕಾರಾವಧಿಯಲ್ಲಿ ರಾಜ್ಯವನ್ನು ಕಡೆಗಣಿಸಲಾಗಿತ್ತು ಎಂದು ನಡ್ಡಾ ಆರೋಪಿಸಿದ್ದಾರೆ.
ಎಎನ್ಐ ಮಾಡಿದ ಟ್ವೀಟ್
BJP President JP Nadda announces alliance with AIADMK in Tamil Nadu, at a public rally in Madurai.
(file pic) pic.twitter.com/Z70fgxdYoE
— ANI (@ANI) January 30, 2021
ಈಗಾಗಲೇ ತಮಿಳುನಾಡು ಚುನಾವಣೆ ಕಾವು ಜೋರಾಗಿದೆ. ಕಮಲ್ ಹಾಸನ್ ಪಕ್ಷ ಕೂಡ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅವರು ಕೂಡ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ‘ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷಕ್ಕೆ ಬರಲು ಸಾಧ್ಯವೇ ಇಲ್ಲ. ಅವರು ನಮ್ಮ ಪಕ್ಷದಲ್ಲಿ ಇಲ್ಲ’ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಹೇಳಿದ್ದರು.
ಶಶಿಕಲಾನ್ನ ಮತ್ತೆ AIADMK ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇ ಇಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸ್ಪಷ್ಟನೆ