ಭಾರತದಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಕ ಮಾಡಲು 8 ವಾರಗಳ ಸಮಯ ಬೇಕು; ದೆಹಲಿ ಹೈಕೋರ್ಟ್​ಗೆ ಟ್ವಿಟರ್​​ನಿಂದ ಮಾಹಿತಿ

Twitter: ಭಾರತದ ಹೊಸ ಐಟಿ ನಿಯಮಗಳನ್ನು ಪಾಲಿಸಲು ಟ್ವಿಟರ್​ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿತ್ತು. ಅದರ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಕೂಡ ಟ್ವಿಟರ್​ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.

ಭಾರತದಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಕ ಮಾಡಲು 8 ವಾರಗಳ ಸಮಯ ಬೇಕು; ದೆಹಲಿ ಹೈಕೋರ್ಟ್​ಗೆ ಟ್ವಿಟರ್​​ನಿಂದ ಮಾಹಿತಿ
ದೆಹಲಿ ಹೈಕೋರ್ಟ್
Follow us
TV9 Web
| Updated By: Lakshmi Hegde

Updated on: Jul 08, 2021 | 2:03 PM

ಭಾರತ ಸರ್ಕಾರ ಹೊಸ ಐಟಿ ರೂಲ್ಸ್​ಗಳನ್ನು ಪಾಲಿಸುವಲ್ಲಿ ಒಂದಲ್ಲ ಒಂದು ಕ್ಯಾತೆ ತೆಗೆಯುತ್ತಲೇ ಬಂದಿರುವ ಟ್ವಿಟರ್​, ಇದೀಗ ಇನ್ನು 8 ವಾರಗಳಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡುವುದಾಗಿ ದೆಹಲಿ ಹೈಕೋರ್ಟ್​ಗೆ ತಿಳಿಸಿದೆ. ಭಾರತದ ಹೊಸ ಐಟಿ ನಿಯಮಗಳನ್ನು ಪಾಲಿಸಲು ಟ್ವಿಟರ್​ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿತ್ತು. ಅದರ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಕೂಡ ಟ್ವಿಟರ್​ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ಸರಿಯಾದ ಮಾಹಿತಿ ನೀಡದೆ, ನೀವು ನಮ್ಮನ್ನೇ ತಪ್ಪುದಾರಿಗೆ ಎಳೆಯುತ್ತಿದ್ದೀರಿ ಎಂದು ಹೈಕೋರ್ಟ್ ಹೇಳಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಟ್ವಿಟರ್​, ನಮಗೆ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲು ಇನ್ನು 8ವಾರಗಳು ಬೇಕು ಎಂದು ಹೇಳಿದೆ.

ಕೇಂದ್ರದ ನೂತನ ಐಟಿ ನಿಯಮಗಳ ಪಾಲನೆ ಸಂಬಂಧ ಭಾರತದಲ್ಲಿ ಸಂಪರ್ಕ ಕಚೇರಿ ಸ್ಥಾಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಈ ಕಚೇರಿ ಶಾಶ್ವತವಾಗಿ ಇರಲಿದ್ದು, ಇಲ್ಲಿಗೆ ನಮ್ಮ ಗ್ರಾಹಕರು ಬಂದು ದೂರು ನೀಡಬಹುದು. ಕುಂದುಕೊರತೆ, ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ಟ್ವಿಟರ್​ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ಮಧ್ಯಂತರವಾಗಿ ನೇಮಕ ಮಾಡಲಾಗವುದು ಎಂದು ಟ್ವಿಟರ್ ಮಾಹಿತಿ ನೀಡಿರಲಿಲ್ಲ. ಭಾರತದಿಂದ ಬಂದ ಕುಂದುಕೊರತೆಯನ್ನು ಯುಎಸ್​ನಲ್ಲಿ ಅಲ್ಲಿನ ಅಧಿಕಾರಿ ಪರಿಶೀಲನೆ ಮಾಡುವಂತೆ ಯೋಜನೆ ರೂಪಿಸಲಾಗಿದೆ. ಆದರೆ ಇದು ಭಾರತದ 2021ರ ಹೊಸ ಐಟಿ ನಿಯಮಗಳ ಅನುಸರಣೆ ಆದಂತೆ ಆಗಲಿಲ್ಲ. ಹೊಸದಾದ ಐಟಿ ನಿಯಮಗಳು ಈ ನೆಲದ ಕಾನೂನುಗಳಾಗಿದ್ದು ಅದನ್ನು ಪಾಲನೆ ಮಾಡುವುದು ಟ್ವಿಟರ್​ ಸೇರಿ ಎಲ್ಲ ಸಾಮಾಜಿಕ ಮಾಧ್ಯಮಗಳಿಗೆ ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿತ್ತು. ಅದಾದ ಬಳಿಕ ಹೈಕೋರ್ಟ್ ಕೂಡ ಟ್ವಿಟರ್​ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕನಕದಾಸ ವೃತ್ತ ನಿರ್ಮಾಣ ವಿರೋಧಿಸಿ ಸಂಸದ ಕರಡಿ ಸಂಗಣ್ಣ ಪತ್ರ; ಸಂಗಣ್ಣ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಕುರುಬ ಸಮುದಾಯ

Will Appoint Grievance redressal Officer in 8 Weeks Twitter told to Delhi Highcourt

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!