ಮುಂಬೈ ಡ್ರಗ್ಸ್ ಕೇಸ್ಗೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಎನ್ಸಿಪಿ ಸಚಿವ ನವಾಬ್ ಮಲಿಕ್ ಇಂದು ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೆಸರನ್ನು ಎಳೆದುತಂದಿದ್ದಾರೆ. ಮಾದಕ ದ್ರವ್ಯ ಸಾಗಣೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ಡ್ರಗ್ ಪೆಡ್ಲರ್ ಜೈದೀಪ್ ರಾಣಾ ಅವರೊಂದಿಗೆ ದೇವೇಂದ್ರ ಫಡ್ನವೀಸ್ ಮತ್ತು ಅವರ ಪತ್ನಿ ಅಮೃತಾ ಫಡ್ನವೀಸ್ ನಿಂತಿರುವ ಒಂದೆರಡು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದು ಇದೀಗ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಆದರೆ ಅದರ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ನವಾಬ್ ಮಲಿಕ್ಗೆ ತಿರುಗೇಟು ನೀಡಿದ್ದು, ನವಾಬ್ ಮಲಿಕ್ಗೂ, ಭೂಗತ ಜಗತ್ತಿಗೂ ಇರುವ ಸಂಪರ್ಕವನ್ನು ದೀಪಾವಳಿ ನಂತರ ನಾವು ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದಾರೆ.
ನವಾಬ್ ಮಲಿಕ್ ಅನಗತ್ಯವಾಗಿ ಡ್ರಗ್ಸ್ ಕೇಸ್ನಲ್ಲಿ ನನ್ನ ಮತ್ತು ಪತ್ನಿ ಅಮೃತಾಳ ಹೆಸರನ್ನು ಎಳೆದುತಂದಿದ್ದಾರೆ. ಇದು ಆಧಾರ ರಹಿತವಾದ ಆರೋಪ. ಆದರೇನು ಈಗ ನವಾಬ್ ಮಲಿಕ್ ಆಟ ಶುರು ಮಾಡಿದ್ದಾರೆ..ಪಟಾಕಿ ಹಚ್ಚಿದ್ದಾರೆ. ಇದಕ್ಕೊಂದು ಲಾಜಿಕಲ್ ಅಂತ್ಯವನ್ನು ನಾನು ಕೊಡುತ್ತೇನೆ. ದೀಪಾವಳಿಯ ನಂತರ ನಾನು ಬಾಂಬ್ ಸ್ಫೋಟಿಸುತ್ತೇನೆ ಎಂದು ಹೇಳಿದ್ದಾರೆ. ಮುಂಬೈ ಭೂಗತ ಜಗತ್ತಿಗೂ, ನವಾಬ್ ಮಲಿಕ್ಗೂ ಇರುವ ಸಂಪರ್ಕವನ್ನು ನಾನು ಸಾರ್ವಜನಿಕರ ಎದುರು, ದಾಖಲೆ ಸಮೇತ ಪ್ರಸ್ತುತ ಪಡಿಸುತ್ತೇನೆ ಎಂದು ಹೇಳಿದ್ದಾರೆ.
ಈ ಜೈದೀಪ್ ರಾಣಾನೊಂದಿಗೆ ಫೋಟೋ ತೆಗೆಸಿಕೊಂಡಾಕ್ಷಣ ಅವನೊಂದಿಗೆ ಸಂಬಂಧ ಇದೆ ಎಂದು ಭಾವಿಸಬೇಕಾಗಿಲ್ಲ. ನದಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ತಂಡವೊಂದು ನಮ್ಮನ್ನು ಭೇಟಿಯಾಗಿತ್ತು. ಆಗ ತೆಗೆಸಿಕೊಂಡ ಫೋಟೋ ಇದಾಗಿದೆ. ಆ ತಂಡದೊಂದಿಗೆ ಇರುವವರೆಲ್ಲರೊಂದಿಗೂ ಫೋಟೋ ಇದೆ. ಆದರೆ ಈ ಫೋಟೋವನ್ನಷ್ಟೇ ಹಾಕುವ ಮೂಲಕ ನವಾಬ್ ಮಲಿಕ್ ಬೇರೇನೋ ಹೇಳಲು ಹೊರಟಿದ್ದಾರೆ ಎಂದು ಫಡ್ನವೀಸ್ ಹೇಳಿದ್ದಾರೆ. ಮುಂಬೈ ಡ್ರಗ್ ಕೇಸ್ಗೆ ಸಂಬಂಧಪಟ್ಂತೆ ನವಾಬ್ ಮಲಿಕ್ ಫಡ್ನವೀಸ್ ವಿರುದ್ಧ ಆರೋಪ ಮಾಡಿದ್ದಲ್ಲದೆ, ಅವರ ಆಡಳಿತ ಅವಧಿಯಲ್ಲೇ ಅಂದರೆ, 2014-2018ರ ಅವಧಿಯಲ್ಲೇ ಮುಂಬೈನಲ್ಲಿ ಮಾದಕ ದ್ರವ್ಯದ ಪ್ರಮಾಣ ಹೆಚ್ಚಾಗಿದೆ ಎಂದೂ ಪ್ರತಿಪಾದಿಸಿದ್ದಾರೆ.
चलो आज BJP और ड्रग्स पेडलर के रिश्तों पे चर्चा करते है pic.twitter.com/FVjbOQ8jvf
— Nawab Malik نواب ملک नवाब मलिक (@nawabmalikncp) November 1, 2021
Photograph of Jaideep Rana with Ex Maharashtra CM Devendra Fadnavis pic.twitter.com/Sxo1diTalX
— Nawab Malik نواب ملک नवाब मलिक (@nawabmalikncp) November 1, 2021
Published On - 3:31 pm, Mon, 1 November 21