AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲೇ ಅಡಗಿದ್ದರೂ ಬಿಡುವುದಿಲ್ಲ; ಅಮಿತ್ ಶಾ ಎಚ್ಚರಿಕೆ

ದೆಹಲಿ ಕಾರು ಸ್ಫೋಟದ ಅಪರಾಧಿಗಳನ್ನು ಶಿಕ್ಷಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದ ಆಳದಲ್ಲಿದ್ದರೂ ಅವರನ್ನು ಬೇಟೆಯಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಬಲಿಪಶುಗಳು ಸಾವನ್ನಪ್ಪಿದ ನಂತರ ನವೆಂಬರ್ 10ರಂದು ನಡೆದ ಕಾರು ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲೇ ಅಡಗಿದ್ದರೂ ಬಿಡುವುದಿಲ್ಲ; ಅಮಿತ್ ಶಾ ಎಚ್ಚರಿಕೆ
Amit Shah In Faridabad
ಸುಷ್ಮಾ ಚಕ್ರೆ
|

Updated on:Nov 17, 2025 | 10:42 PM

Share

ನವದೆಹಲಿ, ನವೆಂಬರ್ 17: ದೆಹಲಿ ಕಾರು ಸ್ಫೋಟದ (Delhi Car Blast Case) ಅಪರಾಧಿಗಳನ್ನು ಪಾತಾಳದಲ್ಲಿಡಗಿದ್ದರೂ ಹುಡುಕಿ ಬೇಟೆಯಾಡಲಾಗುವುದು. ಅವರು ಮಾಡಿದ ಅಪರಾಧಕ್ಕೆ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ ಮಂಡಳಿಯ (NZC) 32ನೇ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಯೋತ್ಪಾದನೆಯನ್ನು ಅದರ ಬೇರುಗಳಿಂದ ನಿರ್ಮೂಲನೆ ಮಾಡುವುದು ನಮ್ಮ ಸರ್ಕಾರದ ಸಾಮೂಹಿಕ ಬದ್ಧತೆಯಾಗಿದೆ ಎಂದು ಹೇಳಿದರು.

ಈ ಸಭೆಯ ಆರಂಭದಲ್ಲಿ, ಕೆಂಪು ಕೋಟೆ ಬಳಿ ಕಾರು ಸ್ಫೋಟ ಮತ್ತು ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಇದನ್ನೂ ಓದಿ: ಅಪ್ಪಾ ಹೋಗ್ಬೇಡಿ ಎಂದು ಮಗಳು ಹೇಳಿದ್ರೂ ಕೇಳಿಲ್ಲ, ಪೊಲೀಸ್ ಠಾಣೆಯೊಳಗೆ ಸಂಭವಿಸಿದ ಸ್ಫೋಟದಲ್ಲಿ ಟೈಲರ್ ಸಾವು

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ಜಮ್ಮು ಮತ್ತು ಕಾಶ್ಮೀರದ ಮತ್ತೊಬ್ಬ ನಿವಾಸಿಯನ್ನು ಬಂಧಿಸಿದೆ. ಡ್ಯಾನಿಶ್ ಎಂದೂ ಕರೆಯಲ್ಪಡುವ ಜಾಸಿರ್ ಬಿಲಾಲ್ ವಾನಿ ಎಂದು ಗುರುತಿಸಲಾದ ಆರೋಪಿಯು ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿ ಅವರೊಂದಿಗೆ ನಿಕಟವಾಗಿ ಸಹಕರಿಸಿದ್ದಾನೆ ಮತ್ತು ತಾಂತ್ರಿಕ ಬೆಂಬಲವನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ದೆಹಲಿ ಸ್ಫೋಟ ಪ್ರಕರಣ; ಶ್ರೀನಗರದಲ್ಲಿ ಮತ್ತೋರ್ವ ಆರೋಪಿಯ ಬಂಧನ

ನವೆಂಬರ್ 10ರ ಸಂಜೆ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿ ನಿಧಾನವಾಗಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ 15 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡರು. ಈ ಸ್ಫೋಟವು ಹತ್ತಿರದ ಹಲವಾರು ವಾಹನಗಳನ್ನು ಸಹ ಆವರಿಸಿತು, ಇದರಿಂದಾಗಿ ವ್ಯಾಪಕ ಹಾನಿಯಾಯಿತು. ಇದೊಂದು ಭಯೋತ್ಪಾದಕ ದಾಳಿಯೆಂಬುದು ಖಚಿತವಾಗಿದೆ. ಹಲವಾರು ಶಂಕಿತರನ್ನು ಈಗಾಗಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 pm, Mon, 17 November 25