AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಕಠಿಣ ನಿಲುವು ತಳೆಯಿರಿ; ಕಪ್ಪು ಸಮುದ್ರದ ದಾಳಿ ಬೆನ್ನಲ್ಲೇ ಭಾರತಕ್ಕೆ ಉಕ್ರೇನ್ ಸಲಹೆ

ಕಪ್ಪು ಸಮುದ್ರದಲ್ಲಿ ಸಿವಿಲ್ ಹಡಗುಗಳು ಮತ್ತು ಬಂದರು ಮೂಲಸೌಕರ್ಯಗಳ ಮೇಲೆ ರಷ್ಯಾ ನಡೆಸುತ್ತಿರುವ ನಿರಂತರ ದಾಳಿಗಳು ಭಾರತೀಯ ನಾವಿಕರ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿವೆ ಎಂದು ಆರೋಪಿಸಿರುವ ಉಕ್ರೇನ್, ರಷ್ಯಾ ವಿರುದ್ಧ ಕಠಿಣ ನಿಲುವು ತಳೆಯುವಂತೆ ಭಾರತಕ್ಕೆ ಬಹಿರಂಗವಾಗಿ ಮನವಿ ಮಾಡಿದೆ. ಉಕ್ರೇನ್ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಹಿಂದೆ ಭಾರತೀಯ ನಾವಿಕರು ಮೃತಪಟ್ಟ ಘಟನೆಯ ನಂತರ ರಷ್ಯಾದ ಪ್ರತಿನಿಧಿಯನ್ನು ಕರೆಸಿಕೊಂಡಂತೆ ಭಾರತ ಈಗ ಮತ್ತೆ ರಷ್ಯಾದ ಪ್ರತಿನಿಧಿಗೆ ಸಮನ್ಸ್ ನೀಡಲಿದೆಯೇ? ಎಂದು ಪ್ರಶ್ನಿಸಿದೆ.

ರಷ್ಯಾ ಕಠಿಣ ನಿಲುವು ತಳೆಯಿರಿ; ಕಪ್ಪು ಸಮುದ್ರದ ದಾಳಿ ಬೆನ್ನಲ್ಲೇ ಭಾರತಕ್ಕೆ ಉಕ್ರೇನ್ ಸಲಹೆ
Ukraine President Zelensky
ಸುಷ್ಮಾ ಚಕ್ರೆ
|

Updated on: Jul 29, 2026 | 10:33 PM

Share

ಕೈವ್, ಜುಲೈ 29: ಉಕ್ರೇನ್ ಬಳಿಯ ಕಪ್ಪು ಸಮುದ್ರದಲ್ಲಿ ಹಡಗುಗಳು ಮತ್ತು ಬಂದರು ಮೂಲಸೌಕರ್ಯಗಳ ಮೇಲೆ ರಷ್ಯಾ ನಿರಂತರವಾಗಿ ನಡೆಸುತ್ತಿರುವ ದಾಳಿಗಳು ಭಾರತೀಯ ನಾವಿಕರ ಜೀವಕ್ಕೆ ಅಪಾಯವನ್ನು ಉಂಟುಮಾಡುತ್ತಿವೆ ಎಂದು ಆರೋಪಿಸಿ ಉಕ್ರೇನ್ (Ukraine) ತೀವ್ರ ವಾಗ್ದಾಳಿ ನಡೆಸಿದೆ. ಕಪ್ಪು ಸಮುದ್ರದಲ್ಲಿ ಭಾರತೀಯ ನಾವಿಕರಿಗೆ ಅಪಾಯವನ್ನುಂಟುಮಾಡುತ್ತಿರುವ ದಾಳಿಗಳ ಕುರಿತು ವಿವರಣೆ ಕೋರಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ಪ್ರತಿನಿಧಿಯನ್ನು ಮತ್ತೊಮ್ಮೆ ಕರೆಸಿಕೊಂಡು ಸಮನ್ಸ್ ನೀಡಲಿದೆಯೇ? ಎಂದು ಉಕ್ರೇನ್ ಎಕ್ಸ್​ ಪೋಸ್ಟ್‌ನಲ್ಲಿ ಪ್ರಶ್ನಿಸಿದೆ.

ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿಯು ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ರಷ್ಯಾದ ಕ್ಷಿಪಣಿ ಮತ್ತು ಡ್ರೋನ್ ದಾಳಿಯ ಭೀತಿಯ ನಡುವೆಯೂ ಉಕ್ರೇನ್‌ನ ಚೊರ್ನೊಮೊರ್ಸ್ಕ್ ಬಂದರಿನಲ್ಲಿರುವ ‘ಎಂ.ವಿ. ಅಮೀರ್ 1’ (MV AMIR 1) ಹಡಗಿನಲ್ಲಿ 13 ಭಾರತೀಯ ಸಿಬ್ಬಂದಿ ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ.

ಇದನ್ನೂ ಓದಿ: ಉಕ್ರೇನ್ ಬಳಿ ಕಪ್ಪು ಸಮುದ್ರದ ಬಂದರಿನಲ್ಲಿ ದಾಳಿ; ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಸಂಕಷ್ಟಕ್ಕೆ ಸಿಲುಕಿರುವ ನಾವಿಕರಿಗೆ ಸಂಬಂಧಿಸಿದಂತೆ ಉಕ್ರೇನ್ ಅಧಿಕಾರಿಗಳು ಸಾಧ್ಯವಿರುವ ಎಲ್ಲಾ ನೆರವು ನೀಡುತ್ತಿದ್ದು, ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಭಾರತದ ಮೌನಕ್ಕೆ ಉಕ್ರೇನ್ ಅಸಮಾಧಾನ:

ಕಪ್ಪು ಸಮುದ್ರದ ಭದ್ರತೆಗೆ ಸಂಬಂಧಿಸಿದಂತೆ ಉಕ್ರೇನ್ ವಿದೇಶಾಂಗ ಸಚಿವರು ಹಾಗೂ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ನಡುವೆ ದೂರವಾಣಿ ಸಂಭಾಷಣೆ ನಡೆಸಲು ಕೋರಿದ್ದ ಮನವಿಗೆ ಯಾವುದೇ ಪ್ರತಿಕ್ರಿಯೆ ಬಾರದಿರುವ ಬಗ್ಗೆ ಉಕ್ರೇನ್ ಅಸಮಾಧಾನ ವ್ಯಕ್ತಪಡಿಸಿದೆ. “ಭಾರತೀಯ ನಾವಿಕರನ್ನು ಅಪಾಯಕ್ಕೆ ಸಿಲುಕಿಸುವ ರಷ್ಯಾದ ದಾಳಿಗಳು ಮುಂದುವರಿದಿರುವುದರಿಂದ, ಭಾರತದ ವಿದೇಶಾಂಗ ಸಚಿವಾಲಯವು ಹೆಚ್ಚಿನ ವಿವರಣೆಗಳಿಗಾಗಿ ರಷ್ಯಾದ ಪ್ರತಿನಿಧಿಯನ್ನು ಮತ್ತೊಮ್ಮೆ ಕರೆಸಿಕೊಳ್ಳಲಿದೆಯೇ?” ಎಂದು ಉಕ್ರೇನ್ ರಾಯಭಾರ ಕಚೇರಿ ನೇರವಾಗಿ ಪ್ರಶ್ನಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ