‘ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ’; ಮಹಾರಾಷ್ಟ್ರ ಚುನಾವಣೆಗೂ ಮುನ್ನ ಶರದ್ ಪವಾರ್ ಮಹತ್ವದ ಘೋಷಣೆ

ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಶರದ್ ಪವಾರ್ ಅವರು ಹೊಸ ಪೀಳಿಗೆಗೆ ಜವಾಬ್ದಾರಿಯನ್ನು ಹಸ್ತಾಂತರಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಜನರ ಸೇವೆಯನ್ನು ಮುಂದುವರಿಸಲು ಯಾವುದೇ ಚುನಾವಣೆಯಲ್ಲಿ ಗೆಲ್ಲುವ ಅಗತ್ಯವಿಲ್ಲ ಎಂದಿರುವ ಅವರು ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

'ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ'; ಮಹಾರಾಷ್ಟ್ರ ಚುನಾವಣೆಗೂ ಮುನ್ನ ಶರದ್ ಪವಾರ್ ಮಹತ್ವದ ಘೋಷಣೆ
ಶರದ್ ಪವಾರ್
Follow us
ಸುಷ್ಮಾ ಚಕ್ರೆ
|

Updated on: Nov 05, 2024 | 6:14 PM

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮಹತ್ವದ ಘೋಷಣೆ ಮಾಡಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ರಾಜ್ಯಸಭೆಯಲ್ಲಿ ತಮ್ಮ ಅಧಿಕಾರಾವಧಿಯು ಅಂತ್ಯಗೊಳ್ಳುತ್ತಿರುವ ಕಾರಣ ಭವಿಷ್ಯದಲ್ಲಿ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. “ನಾನು 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನನ್ನ ರಾಜ್ಯಸಭಾ ಅಧಿಕಾರಾವಧಿ ಪೂರ್ಣಗೊಂಡ ನಂತರ ನಾನು ನನ್ನ ಸಂಸದೀಯ ಸ್ಥಾನದಿಂದ ಬೇರ್ಪಡಬೇಕೇ ಅಥವಾ ಬೇಡವೇ ಎಂದು ಯೋಚಿಸುತ್ತೇನೆ” ಎಂದು ಶರದ್ ಪವಾರ್ ಹೇಳಿದ್ದಾರೆ.

ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬೇರೆ ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ, ನಾನು ಇಲ್ಲಿಯವರೆಗೆ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ ಮತ್ತು ಯಾವುದೇ ಚುನಾವಣೆಯ ಸಮಯದಲ್ಲಿ ನೀವು ನನ್ನನ್ನು ಸೋಲಲು ಬಿಡಲಿಲ್ಲ. ಪ್ರತಿ ಬಾರಿ ನೀವು ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದೀರಿ. ಒಂದು ಹೊಸ ಪೀಳಿಗೆಯನ್ನು ಅಧಿಕಾರಕ್ಕೆ ತರಬೇಕು. ನಾನು ಸಮಾಜಸೇವೆಯನ್ನು ಬಿಟ್ಟಿಲ್ಲ, ನನಗೆ ಅಧಿಕಾರ ಬೇಡ. ಆದರೆ, ನಾನು ಜನರ ಸೇವೆಯನ್ನು ನಿಲ್ಲಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: Fact Check: ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕಿರುವ ವಿಡಿಯೋ ಕರ್ನಾಟಕದ್ದು ಎಂದು ವೈರಲ್

ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶರದ್ ಪವಾರ್, ತಮ್ಮ ಸಂಸದೀಯ ಸ್ಥಾನದಿಂದ ತಮ್ಮ ನಿರ್ಲಿಪ್ತತೆಯನ್ನು ಒತ್ತಿ ಹೇಳಿದರು, “ನಾನು ಅಧಿಕಾರದಲ್ಲಿ ಇಲ್ಲ, ನಾನು ರಾಜ್ಯಸಭೆಯಲ್ಲಿದ್ದೇನೆ. ಒಂದೂವರೆ ವರ್ಷ ಉಳಿದಿದೆ. ನಾನು ಈಗಾಗಲೇ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ, ಇನ್ನೂ ಎಷ್ಟೋ ಮಂದಿ ಸ್ಪರ್ಧಿಸುವವರಿದ್ದಾರೆ. ನಾನು ಈಗ ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ಭಾವಿಸುತ್ತೇನೆ. ವಿಶೇಷವಾಗಿ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಈ ಕೆಲಸವನ್ನು ಮುಂದುವರಿಸಲು ನನಗೆ ಯಾವುದೇ ಚುನಾವಣೆ ಅಗತ್ಯವಿಲ್ಲ ಎಂದಿದ್ದಾರೆ.

ಶರದ್ ಪವಾರ್ ಅವರ ರಾಜ್ಯಸಭಾ ಅಧಿಕಾರಾವಧಿಯು 2026ರಲ್ಲಿ ಪೂರ್ಣಗೊಳ್ಳಲಿದೆ. ಅವರ ರಾಜಕೀಯ ಅಧಿಕಾರಾವಧಿಯನ್ನು ನೆನಪಿಸಿಕೊಂಡ ಶರದ್ ಪವಾರ್, 30 ವರ್ಷಗಳ ಹಿಂದೆ, ನಾನು ರಾಷ್ಟ್ರ ರಾಜಕಾರಣವನ್ನು ಮಾತ್ರ ಮಾಡಲು ನಿರ್ಧರಿಸಿದೆ. ರಾಜ್ಯದ ಜವಾಬ್ದಾರಿ ಅವರ ಮೇಲಿದೆ. ಈಗ ಮುಂದಿನ 30 ವರ್ಷಗಳವರೆಗೆ ವ್ಯವಸ್ಥೆ ಮಾಡಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ; ಉದ್ಧವ್ ಠಾಕ್ರೆಯನ್ನು ಎಂವಿಎ ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಲು ಶರದ್ ಪವಾರ್ ನಕಾರ

ಶರದ್ ಪವಾರ್ ಕುಟುಂಬದ ಬಹುಕಾಲದ ಭದ್ರಕೋಟೆಯಾಗಿರುವ ಬಾರಾಮತಿ ಮತ್ತೆ ಕೌಟುಂಬಿಕ ಕದನಕ್ಕೆ ಸಾಕ್ಷಿಯಾಗಲಿದ್ದು, 7 ಬಾರಿ ಶಾಸಕರಾಗಿರುವ ಅಜಿತ್ ಪವಾರ್ ಅವರ ಸೋದರಳಿಯ ಯುಗೇಂದ್ರ ಪವಾರ್ ಅವರನ್ನು ಎದುರಿಸಲಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಜಿತ್ ತಮ್ಮ ಪತ್ನಿ ಸುನೇತ್ರಾ ಪವಾರ್ ಅವರನ್ನು ಸಹೋದರಿ ಸುಪ್ರಿಯಾ ಸುಳೆ ವಿರುದ್ಧ ಕಣಕ್ಕಿಳಿಸಿದ ನಂತರ ಈ ವರ್ಷ ಎರಡನೇ ಬಾರಿಗೆ ಪವಾರ್ Vs ಪವಾರ್ ಸ್ಪರ್ಧೆಗೆ ಹೈ-ಪ್ರೊಫೈಲ್ ಸ್ಥಾನ ಸಾಕ್ಷಿಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ