ಕೃಷಿ ತಿದ್ದುಪಡಿ ಕಾಯ್ದೆಗೆ ವಿರೋಧ: ಪ್ರಧಾನಿ ಮೋದಿ ವಿಷಾದ
ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುವುದು. ರೈತರ ಸ್ಥಿತಿ ಸುಧಾರಿಸಲು 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಯ್ದೆ ಜಾರಿ ಮಾಡಲಾಗಿತ್ತು. ಸಣ್ಣ ರೈತರ ಒಳಿತಿಗಾಗಿಯೇ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿವೆ. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿಯಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದ್ರೆ ಕೆಲವು ರೈತರು ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಅವರು ಸಲಹೆ ಒಪ್ಪಿಕೊಂಡರೂ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಇದೇ ವೇಳೆ ವಿಷಾದಿಸಿದರು.
ಕೇಂದ್ರ ದ ನಿರ್ಧಾರ ಸ್ವಾಗತಿಸಿದ ಅಕಾಲಿ ದಳ:
ಮೂರೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಹಿಂಪಡೆದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಅಕಾಲಿ ದಳ ಸ್ವಾಗತಿಸಿದೆ. ಈ ಹೋರಾಟದಲ್ಲಿ ನೂರಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದು ಎಲ್ಲ ರೈತರಿಗೆ ಸಿಕ್ಕ ಗೆಲುವು ಎಂದು ಆಲ್ ಇಂಡಿಯಾ ಕಿಸಾನ್ ಸಭಾ ಸ್ವಾಗತಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 9 ಗಂಟೆಗೆ (ನವೆಂಬರ್ 19) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ನಂತರ ಝಾನ್ಸಿಯಲ್ಲಿ ‘ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ’ನಲ್ಲಿ ಭಾಗವಹಿಸಿದ್ದಾರೆ (PM Modi Announcement). ಈ ವೇಳೆ ಅವರು ಭಾರತದಲ್ಲೇ ತಯಾರಿಸಲಾದ ರಕ್ಷಣಾ ಸಾಮಗ್ರಿಗಳನ್ನು ಸೇನೆಗೆ ಹಸ್ತಾಂತರಿಸಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮುನ್ನ ಪ್ರಧಾನಿ ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದೇ ವೇಳೆ ಗುರು ನಾನಕ್ ಅವರ ಜಯಂತಿ ಆಚರಣೆಯೂ ನಡೆದಿದೆ.
PM Modi withdraws three farm laws | 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆದ ಕೇಂದ್ರ