‘ಸಂಸತ್ತಿನ ಒಳಗೂ-ಹೊರಗೂ ನಾವು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ..ಆದರೆ..’-ಒಂದು ಷರತ್ತು ಹಾಕಿದ ಮಾಯಾವತಿ

ಜಾತಿ ಆಧಾರಿತ ಜನಗಣತಿ ನಡೆಸುವುದರಿಂದ ಎದುರಾಗಬಹುದಾದ ಸೂಕ್ಷ್ಮ ಸಮಸ್ಯೆಗಳನ್ನು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಆಪಾಯಿಂಟ್​ಮೆಂಟ್ ಕೇಳಿದ್ದಾರೆ.

‘ಸಂಸತ್ತಿನ ಒಳಗೂ-ಹೊರಗೂ ನಾವು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ..ಆದರೆ..’-ಒಂದು ಷರತ್ತು ಹಾಕಿದ ಮಾಯಾವತಿ
ಮಾಯಾವತಿ
Follow us
TV9 Web
| Updated By: Lakshmi Hegde

Updated on: Aug 06, 2021 | 4:04 PM

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆ (Uttar Pradesh Assembly Election 2022)ಗೆ ಈಗಿನಿಂದಲೇ ಸಿದ್ಧತೆ ನಡೆಸುತ್ತಿರುವ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ (Mayawati) ಇದೀಗ ತಾವು ಕೇಂದ್ರಸರ್ಕಾರಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಇದು ಅಚ್ಚರಿಯೆನಿಸಿದರೂ ಸತ್ಯ..ಆದರೆ ಮಾಯಾವತಿ ಒಂದು ಷರತ್ತು ಹಾಕಿದ್ದಾರೆ. ಇತರ ಹಿಂದುಳಿದ ವರ್ಗ(OBC)ಗಳ ಜನಗಣತಿ ನಡೆಸಲು ಕೇಂದ್ರ ಸರ್ಕಾರ ರಚನಾತ್ಮಕ ಕ್ರಮಗಳನ್ನು ತೆಗೆದುಕೊಂಡರೆ, ನಾವು ಸಂಸತ್ತಿನ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ಜನಗಣತಿ ನಡೆಸಲು ಕೇಂದ್ರ ಸರ್ಕಾರ ಪಸ್ತಾವನೆ ಮುಂದಿಟ್ಟಿದೆ. ಹೀಗೆ ಜಾತಿ ಆಧಾರಿತ ಜನಗಣತಿ ನಡೆಸುವುದರಿಂದ ಎದುರಾಗಬಹುದಾದ ಸೂಕ್ಷ್ಮ ಸಮಸ್ಯೆಗಳನ್ನು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಆಪಾಯಿಂಟ್​ಮೆಂಟ್ ಕೇಳಿದ್ದಾರೆ. ಇದರ ಬೆನ್ನಲ್ಲೇ ಮಾಯಾವತಿ ಹೀಗೆ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಇತರ ಹಿಂದುಳಿದ ವರ್ಗ (OBS)ದವರು ಎಷ್ಟು ಮಂದಿ ಇದ್ದಾರೆ ಎಂಬುದನ್ನೂ ಜನಗಣತಿ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಧನಾತ್ಮಕ ನಿರ್ಧಾರ ತೆಗೆದುಕೊಂಡರೂ ನಾವು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ. ಸಂಸತ್ತಿನ ಒಳಗೂ -ಹೊರಗೂ ಕೇಂದ್ರ ಸರ್ಕಾರಕ್ಕೆ ನಾವು ಸದಾ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: MS Dhoni: ಒಲಿಂಪಿಕ್ಸ್‌ನಲ್ಲಿ ಹಾಕಿ ತಂಡದ ಐತಿಹಾಸಿಕ ಸಾಧನೆ: 7 ವರ್ಷಗಳ ನಂತರ ವೈರಲ್ ಆಯ್ತು ಧೋನಿಯ ಅದೊಂದು ಟ್ವೀಟ್

Will Support Centre In Parliament And Outside Said Mayawat