ವೈನ್ ಮದ್ಯವಲ್ಲ; ಸೂಪರ್ ಮಾರ್ಕೆಟ್ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿದ ಸರ್ಕಾರದ ನಡೆಗೆ ಸಂಜಯ್ ರಾವತ್ ಸಮರ್ಥನೆ
ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಶಿವಸೇನೆ ನೇತೃತ್ವದ ಸರ್ಕಾರ ಮಹಾರಾಷ್ಟ್ರವನ್ನು ಮದ್ಯ-ರಾಷ್ಟ್ರ ಮಾಡಲು ಹೊರಟಿದೆ ಎಂದು ಲೇವಡಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಂಜಯ್ ರಾವತ್ ವೈನ್ ಆಲ್ಕೋಹಾಲ್ ಅಲ್ಲ ಎಂದಿದ್ದಾರೆ.
ಮುಂಬೈ: ಮಹಾರಾಷ್ಟ್ರದಲ್ಲಿನ ಸೂಪರ್‌ಮಾರ್ಕೆಟ್‌ಗಳು ಮತ್ತು ವಾಕ್-ಇನ್ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ರೈತರ ಆದಾಯವನ್ನು ದ್ವಿಗುಣಗೊಳಿಸುತ್ತದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ (Sanjay Raut) ಹೇಳಿದ್ದಾರೆ. ವೈನ್ ಮದ್ಯವಲ್ಲ. ವೈನ್ ಮಾರಾಟ ಹೆಚ್ಚಾದರೆ ರೈತರಿಗೆ ಇದರ ಲಾಭ ಸಿಗಲಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಈ ನಿರ್ಧಾರ ಮಾಡಿದ್ದೇವೆ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ.
ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಕ್ಕಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕೇವಲ ಎಲ್ಲವನ್ನೂ ವಿರೋಧಿಸುತ್ತದೆ. ಆದರೆ, ಅವರು ರೈತರಿಗಾಗಿ ಏನನ್ನೂ ಮಾಡುವುದಿಲ್ಲ ಎಂದು ಸಂಜಯ್ ರಾವತ್ ಟೀಕಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಶಿವಸೇನೆ ನೇತೃತ್ವದ ಸರ್ಕಾರ ಮಹಾರಾಷ್ಟ್ರವನ್ನು ಮದ್ಯ-ರಾಷ್ಟ್ರ ಮಾಡಲು ಹೊರಟಿದೆ ಎಂದು ಲೇವಡಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಂಜಯ್ ರಾವತ್ ವೈನ್ ಆಲ್ಕೋಹಾಲ್ ಅಲ್ಲ ಎಂದಿದ್ದಾರೆ.
ಮಹಾರಾಷ್ಟ್ರ ಸಂಪುಟ ಸೂಪರ್ ಮಾರ್ಕೆಟ್ಗಳು ಮತ್ತು ವಾಕ್-ಇನ್ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ಪ್ರಸ್ತಾಪವನ್ನು ಅಂಗೀಕರಿಸಿತು. ಇದು ರೈತರಿಗೆ ಹೆಚ್ಚುವರಿ ಆದಾಯವನ್ನು ಒದಗಿಸುವ ಹಣ್ಣು ಆಧಾರಿತ ವೈನ್ಗೆ ಉತ್ತೇಜನ ನೀಡುತ್ತದೆ ಎಂದು ಹೇಳಿದೆ.
ಮುಖ್ಯಮಂತ್ರಿಗಳ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, 1,000 ಚದರ ಅಡಿ ಅಥವಾ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣವನ್ನು ಹೊಂದಿರುವ ಮತ್ತು ಮಹಾರಾಷ್ಟ್ರದ ಅಂಗಡಿಗಳು ಮತ್ತು ಸಂಸ್ಥೆಗಳ ಕಾಯ್ದೆಯಡಿ ನೋಂದಾಯಿಸಲ್ಪಟ್ಟಿರುವ ಸೂಪರ್ ಮಾರ್ಕೆಟ್ಗಳು ಮತ್ತು ಮಳಿಗೆಗಳು “ಶೆಲ್ಫ್-ಇನ್-ಶಾಪ್” ವಿಧಾನವನ್ನು ಅಳವಡಿಸಿಕೊಳ್ಳಬಹುದು. ಪೂಜಾ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಮೀಪವಿರುವ ಸೂಪರ್‌ಮಾರ್ಕೆಟ್‌ಗಳಿಗೆ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ. ಮದ್ಯ ನಿಷೇಧ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ವೈನ್ ಮಾರಾಟಕ್ಕೂ ಅವಕಾಶವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿತ್ತು.
ಆದರೆ, ಬಿಜೆಪಿ ಉದ್ಧವ್ ಠಾಕ್ರೆ ಸರ್ಕಾರದ ಈ ನಿರ್ಧಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ಮದ್ಯ ಸೇವನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿತ್ತು. “ಮಹಾರಾಷ್ಟ್ರವನ್ನು ಮದ್ಯ ರಾಷ್ಟ್ರವಾಗಲು ನಾವು ಬಿಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಕಿಡಿ ಕಾರಿದ್ದರು.
ಇದನ್ನೂ ಓದಿ: ‘ಬಾರ್ ವೈನ್ಶಾಪ್ ಮಾಲೀಕರು ಆಕ್ಸಿಜನ್ನಲ್ಲಿ ಇದ್ದೇವೆ, ವೀಕೆಂಡ್ ಕರ್ಫ್ಯೂ ಮುಂದುವರಿದರೆ ವೆಂಟಿಲೇಟರ್ಗೆ ಹೋಗುತ್ತೇವೆ’
ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ: 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ರದ್ದು ಮಾಡಿದ ಸುಪ್ರೀಂಕೋರ್ಟ್