ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು

| Updated By: ganapathi bhat

Updated on: Dec 24, 2021 | 11:16 PM

ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು
Mig-21 (ಸಾಂದರ್ಭಿಕ ಚಿತ್ರ)
Follow us on

ದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಇಂದು (ಡಿಸೆಂಬರ್ 24) ಪತನಗೊಂಡಿದ್ದು ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿದ್ದಾರೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಸ್ಯಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ನೇಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್​ಪಿ ಅಜಯ್ ಸಿಂಗ್ ತಿಳಿಸಿದ್ದರು. ಸ್ಥಳೀಯ ಪೊಲೀಸರು ಈಗಾಗಲೇ ವಿಮಾನ ಅಪಘಾತ ಪ್ರದೇಶಕ್ಕೆ ಭೇಟಿ ನೀಡಿದ್ದರು.

ವಿಮಾನ ಅಪಘಾತ ಆಗಿರುವ ಬಗ್ಗೆ ಭಾರತೀಯ ವಾಯುಸೇನೆಯ ಟ್ವಿಟರ್ ಹ್ಯಾಂಡಲ್ ಕೂಡ ದೃಢಪಡಿಸಿತ್ತು. ಇಂದು ರಾತ್ರಿ ಸುಮಾರು 8.30 ರ ವೇಳೆಗೆ ಮಿಗ್-21 ಏರ್ ಕ್ರಾಫ್ಟ್ ಪತನವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದೆ ಎಂದು ಈ ಮೊದಲು ಟ್ವೀಟ್ ಮಾಡಿತ್ತು. ಇದೀಗ ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

ಇದನ್ನೂ ಓದಿ: ಪಾಕ್ ಫೈಟರ್ ಜೆಟ್ ಹೊಡೆದುರುಳಿಸಿದ ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್​​ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

Published On - 11:10 pm, Fri, 24 December 21