Parliament Winter Session 2022: ಡಿ. 7ರಿಂದ ಸಂಸತ್ ಚಳಿಗಾಲದ ಅಧಿವೇಶನ; ಬೆಲೆ ಏರಿಕೆ, ಹಣದುಬ್ಬರ ಚರ್ಚೆ ಕಾವೇರುವ ಸಾಧ್ಯತೆ

ಬೆಲೆ ಏರಿಕೆ, ಹಣದುಬ್ಬರ ನಿಯಂತ್ರಿಸುವಲ್ಲಿ ವಿಫಲವಾಗಿರುವುದು, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಪ್ತತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ.

Parliament Winter Session 2022: ಡಿ. 7ರಿಂದ ಸಂಸತ್ ಚಳಿಗಾಲದ ಅಧಿವೇಶನ; ಬೆಲೆ ಏರಿಕೆ, ಹಣದುಬ್ಬರ ಚರ್ಚೆ ಕಾವೇರುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Nov 19, 2022 | 1:24 PM

ನವದೆಹಲಿ: ಸಂಸತ್​ನ ಚಳಿಗಾಲದ ಅಧಿವೇಶನ (Parliament Winter Session) ಡಿಸೆಂಬರ್ 7ರಿಂದ 29ರ ವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮಾಹಿತಿ ನೀಡಿದ್ದಾರೆ. ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. 2022ರ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರ ವರೆಗೆ ನಡೆಯಲಿದ್ದು, ಈ 23 ದಿನಗಳ ಅವಧಿಯಲ್ಲಿ 17 ಕಲಾಪಗಳು ನಡೆಯಲಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತಾದ ಚರ್ಚೆಗಳನ್ನು ಅಮೃತ ಕಾಲವು ಎದುರು ನೋಡುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಜಗದೀಪ್ ಧನ್​ಕರ್ ಅವರು ಉಪ ರಾಷ್ಟ್ರಪತಿಯಾದ ಬಳಿಕ ನಡೆಯುತ್ತಿರುವ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅವರು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅಧಿವೇಶನದ ಮೊದಲ ದಿನ ಸಂತಾಪ ಸೂಚಕ ಸಭೆ ನಡೆಯಲಿದ್ದು, ದಿನದ ಮಟ್ಟಿಗೆ ಕಲಾಪ ಮುಂದೂಡಿಕೆಯಾಗಲಿದೆ. ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಸೇರಿದಂತೆ ಕೆಲವು ಸಂಸದರು ಇತ್ತೀಚೆಗೆ ಅಸುನೀಗಿದ್ದಾರೆ.

ಪ್ರತಿಪಕ್ಷಗಳ ಚರ್ಚೆ ಕಾವೇರುವ ನಿರೀಕ್ಷೆ

ಅಧಿವೇಶನದಲ್ಲಿ ಮಂಡಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿದೆ. ಆದರೆ, ಪ್ರತಿಪಕ್ಷಗಳು ಮಸೂದೆಗಳ ಬಗ್ಗೆ ಚರ್ಚೆಗೆ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಇಷ್ಟೇ ಅಲ್ಲದೆ ಬೆಲೆ ಏರಿಕೆ, ಹಣದುಬ್ಬರ ನಿಯಂತ್ರಿಸುವಲ್ಲಿ ವಿಫಲ, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಪ್ತತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಮುಂಗಾರು ಅಧಿವೇಶನ ಜುಲೈ 18ರಿಂದ ಆಗಸ್ಟ್ 8ರ ವರೆಗೆ ನಡೆದಿತ್ತು. 22 ದಿನಗಳ ಅವಧಿಯಲ್ಲಿ 16 ಕಲಾಪಗಳು ನಡೆದಿದ್ದವು. ಅಧಿವೇಶನದಲ್ಲಿ ಆರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. 7 ಮಸೂದೆಗಳಿಗೆ ಲೋಕಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದರೆ, ರಾಜ್ಯಸಭೆಯಲ್ಲಿ 5 ಮಸೂದೆಗಳಿಗೆ ಅನುಮೋದನೆ ದೊರೆತಿತ್ತು. ಒಂದು ಮಸೂದೆಯನ್ನು ವಾಪಸ್ ಪಡೆಯಲಾಗಿತ್ತು. ಎರಡೂ ಸದನಗಳಲ್ಲಿ 5 ಮಸೂದೆಗಳಿಗೆ ಅನುಮೋದನೆ ದೊರೆತಿತ್ತು.

ಕೋವಿಡ್ ವಿರುದ್ಧ ಮುನ್ನೆಚ್ಚರಿಕೆ

ಕೋವಿಡ್ ಸಾಂಕ್ರಾಮಿಕದ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಸದಸ್ಯರಿಗೆ ಲಸಿಕೆ ಪಡೆದಿದ್ದಾರೆ. ಯಾವುದೇ ಪ್ರಮುಖ ಕೋವಿಡ್-ಪ್ರೇರಿತ ನಿರ್ಬಂಧಗಳಿಲ್ಲದೆ ಅಧಿವೇಶನವನ್ನು ಕರೆಯುವ ಸಾಧ್ಯತೆಯಿದೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Sat, 19 November 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್