Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ

ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲೋಕಸಭೆಯಲ್ಲಿ ಮಂಡಿಸಿದ ನಂತರ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕರಿಸಲಾಗಿದೆ.

Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ  ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ
ನರೇಂದ್ರ ಸಿಂಗ್ ತೋಮರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 29, 2021 | 12:49 PM

ದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ( Farm Laws Repeal Bill 2021) ಮಂಡಿಸಿದರು. ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲೋಕಸಭೆಯಲ್ಲಿ ಮಂಡಿಸಿದ ನಂತರ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕರಿಸಲಾಗಿದೆ. ಏತನ್ಮಧ್ಯೆ, ಸದನದಲ್ಲಿ ಮಸೂದೆಯನ್ನು ಚರ್ಚಿಸಲು ಕಾಂಗ್ರೆಸ್ ಒತ್ತಾಯಿಸಿದೆ. ಲೋಕಸಭೆ ಕಲಾಪಗಳನ್ನು ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲಾಗಿದೆ. 2021 ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸುವ ಮೊದಲು ಯಾವುದೇ ಚರ್ಚೆಗೆ ಅವಕಾಶ ಮಾಡಿಕೊಡಲು ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸಂಸದರಿಗೆ ಮನವಿ ಮಾಡಿದ್ದರು. 2021 ರ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಚರ್ಚಿಸಲು ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಸಂಸದರು ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು. ಟಿಎಂಸಿ ಕೃಷಿ ಕಾನೂನುಗಳ ರದ್ದತಿ ಮಸೂದೆಯ ಮೇಲೆ ಚರ್ಚೆ ಮಾಡಬೇಕೆಂದು ಬಯಸಿದೆ. ಆದರೆ ಸರ್ಕಾರವು ರೈತರ ಪರಿಸ್ಥಿತಿಗಳನ್ನು ಚರ್ಚಿಸಲು ಹೆದರುತ್ತಿದೆ. ರೈತರ ಪರವಾಗಿ ಮಾತನಾಡಲು ಪ್ರತಿಪಕ್ಷಗಳಿಗೆ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಸಂಸತ್ತಿನಲ್ಲಿ ಹೇಳಿದರು. ರಾಜ್ಯಸಭೆಯನ್ನು ಮಧ್ಯಾಹ್ನ 12:20ಕ್ಕೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು. ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಇಂದು ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕೃಷಿ ಕಾನೂನು  ರದ್ದತಿ ಮಸೂದೆ, 2021 ಲೋಕಸಭೆಯಿಂದ ಅಂಗೀಕರಿಸಲ್ಪಟ್ಟಿದ್ದು ಇದು  ಆಂದೋಲನದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ 750 ರೈತರಿಗೆ ಗೌರವವಾಗಿದೆ. ಎಂಎಸ್‌ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ ಎಂದು  ಉತ್ತರ ಪ್ರದೇಶದ  ಕೌಶಂಬಿಯಲ್ಲಿ ಮಾತನಾಡಿದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: Farm Laws Repeal ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ: ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ, ಎಂಎಸ್​ಪಿ ಕಾಯ್ದೆಗೆ ವಿಪಕ್ಷ ಆಗ್ರಹ

Published On - 12:22 pm, Mon, 29 November 21

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್