Winter Session of Parliament: ಬಂಗಾಳದಲ್ಲಿ ಭ್ರಷ್ಟಾಚಾರ; ಟಿಎಂಸಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಸೋಮವಾರ ಸಂಸತ್​​ನ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಂಗಾಳ ಸರ್ಕಾರವು ಇತರ ರಾಜ್ಯಗಳ ಸರ್ಕಾರಗಳಿಗಿಂತ ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸುತ್ತದೆ. ಅವರು ಕೇಂದ್ರ ಸರ್ಕಾರದಿಂದ ಪಶ್ಚಿಮ ಬಂಗಾಳದ ಬಡ ಜನರಿಗೆ ಮೀಸಲಾದ ಹಣವನ್ನು ತೆಗೆದುಕೊಳ್ಳುತ್ತಾರೆ, ದೇಶದ ಎಲ್ಲಾ ರಾಜ್ಯಗಳು ಹಣಕಾಸು ವ್ಯವಸ್ಥೆಯಲ್ಲಿಯೇ ಉಳಿದಿವೆ, ಬಂಗಾಳವು ಮೇಲಿದೆ ಎಂದು ಭಾವಿಸುತ್ತದೆ ಎಂದಿದ್ದಾರೆ.

Winter Session of Parliament: ಬಂಗಾಳದಲ್ಲಿ ಭ್ರಷ್ಟಾಚಾರ; ಟಿಎಂಸಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ
ಧರ್ಮೇಂದ್ರ ಪ್ರಧಾನ್
Follow us
|

Updated on: Dec 05, 2023 | 7:43 PM

ದೆಹಲಿ ಡಿಸೆಂಬರ್05: ಲೋಕಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಪಶ್ಚಿಮ ಬಂಗಾಳದಲ್ಲಿ (West Bengal) ಭ್ರಷ್ಟಾಚಾರ ಆರೋಪದ ಕುರಿತು ತೃಣಮೂಲ ಕಾಂಗ್ರೆಸ್ (TMC) ಸಂಸದ ಸುದೀಪ್ ಬಂಡೋಪಾಧ್ಯಾಯ (Sudip Bandyopadhyay) ವಿರುದ್ಧ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತೀವ್ರ ವಾಗ್ದಾಳಿ ನಡೆಸಿದ್ದಾರೆ. 18,000 ಕೋಟಿ ಮೊತ್ತದ MGNREGA ಮತ್ತು PM Awas Yojana ನಂತಹ ಯೋಜನೆಗಳಿಗೆ ಹಣವನ್ನು ನಿರ್ಬಂಧಿಸುವ ಮೂಲಕ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರವು ಆರ್ಥಿಕ ದಿಗ್ಬಂಧನವನ್ನು ವಿಧಿಸಿದೆ ಎಂದು ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಆರೋಪಿಸಿದ್ದರು.

ಟಿಎಂಸಿ ಸಂಸದರಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪಶ್ಚಿಮ ಬಂಗಾಳ ಸರ್ಕಾರದ ಕಡೆಯಿಂದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

ಬಂಗಾಳ ಸರ್ಕಾರವು ಇತರ ರಾಜ್ಯಗಳ ಸರ್ಕಾರಗಳಿಗಿಂತ ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸುತ್ತದೆ. ಅವರು ಕೇಂದ್ರ ಸರ್ಕಾರದಿಂದ ಪಶ್ಚಿಮ ಬಂಗಾಳದ ಬಡ ಜನರಿಗೆ ಮೀಸಲಾದ ಹಣವನ್ನು ತೆಗೆದುಕೊಳ್ಳುತ್ತಾರೆ, ದೇಶದ ಎಲ್ಲಾ ರಾಜ್ಯಗಳು ಹಣಕಾಸು ವ್ಯವಸ್ಥೆಯಲ್ಲಿಯೇ ಉಳಿದಿವೆ, ಬಂಗಾಳವು ಮೇಲಿದೆ ಎಂದು ಭಾವಿಸುತ್ತದೆ, ರಾಜ್ಯ ಸರ್ಕಾರವು ಅದಕ್ಕಿಂತ ಮೇಲಿದೆ ಎಂದು ಭಾವಿಸುತ್ತದೆ ಎಂದು ಪ್ರಧಾನ್ ಹೇಳಿದರು.

ಪ್ರಧಾನ ಮಂತ್ರಿ ಪೋಷಣ್ ಯೋಜನೆ, ಮಿಡ್ ಡೇ ಮೀಲ್, ಅವರು 4,000 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಭಾರತ ಸರ್ಕಾರವು ಸಿಬಿಐಗೆ ತನಿಖೆಯನ್ನು ನೀಡಿದೆ, ಎಲ್ಲವೂ ಹೊರಬರುತ್ತದೆ ಎಂದಿದ್ದಾರೆ. ಅವರು ಬಡವರ ಹಣವನ್ನು ಲೂಟಿ ಮಾಡುತ್ತಾರೆ. ಅವರ ಅರ್ಧದಷ್ಟು ಮಂತ್ರಿಗಳು ಜೈಲಿನಲ್ಲಿದ್ದಾರೆ. ತಮ್ಮ ನಾಯಕರು ಜೈಲಿಗೆ ಹೋಗುವ ಭಯ ಅವರಿಗಿದೆ ಎಂದು ಪ್ರಧಾನ್ ಹೇಳಿದ್ದಾರೆ.

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನಿವಾಸದಿಂದ ಇಡಿ 21.20 ಕೋಟಿ ರೂಪಾಯಿ ನಗದು, 79 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು 54 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡ ನಂತರ ಅವರನ್ನು ಬಂಧಿಸಲಾಯಿತು.

ಇದನ್ನೂ ಓದಿ: ಭಾರತ ಆಸ್ಟ್ರೇಲಿಯಾ ಮೊದಲ ಎಐಇಎಸ್​ಸಿ ಸಭೆ; ಧರ್ಮೇಂದ್ರ ಪ್ರಧಾನ್ ಜೊತೆ ಆಸ್ಟ್ರೇಲಿಯಾ ಸಚಿವರ ಭೇಟಿ

ಮತ್ತೊಬ್ಬ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳುವುದಕ್ಕಾಗಿ ಪ್ರಮುಖ ಉದ್ಯಮಿಯೊಬ್ಬರಿಂದ ಹಣ ಪಡೆದ ಆರೋಪ ಎದುರಿಸುತ್ತಿದ್ದಾರೆ.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ನೈತಿಕ ಸಮಿತಿಯ ವರದಿಯನ್ನು ಸಲ್ಲಿಸಿದ ನಂತರ ಮಹುವಾ ಮೊಯಿತ್ರಾ ಅವರ ಲೋಕಸಭಾ ಸದಸ್ಯತ್ವವನ್ನು ಅಮಾನತುಗೊಳಿಸಲು ಸರ್ಕಾರ ಪ್ರಯತ್ನಿಸುವ ಸಾಧ್ಯತೆಯಿದೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ‘ಪ್ರಶ್ನೆಗಾಗಿ ನಗದು ಆರೋಪದ ಕುರಿತು ತನಿಖೆ ನಡೆಸಿದ ನೈತಿಕ ಸಮಿತಿಯು ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿ ಲೋಕಸಭೆಯಲ್ಲಿ ತನ್ನ ವರದಿಯನ್ನು ಸಲ್ಲಿಸಲು ನಿರ್ಧರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ