Winter Session 2021: ನ. 29ರಿಂದ ಸಂಸತ್​ನ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆ

| Updated By: ಸುಷ್ಮಾ ಚಕ್ರೆ

Updated on: Oct 26, 2021 | 4:05 PM

Parliament Winter Session 2021: ಕೊವಿಡ್ ಹಿನ್ನೆಲೆಯಲ್ಲಿ 2020ರ ಚಳಿಗಾಲದ ಅಧಿವೇಶನವನ್ನು ನಡೆಸಿರಲಿಲ್ಲ. ಈ ಬಾರಿ ಕೊರೊನಾ ಅಟ್ಟಹಾಸ ಕೊಂಚ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನವೆಂಬರ್ 29ರಿಂದ ಸಂಸತ್ ಅಧಿವೇಶನ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ.

Winter Session 2021: ನ. 29ರಿಂದ ಸಂಸತ್​ನ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆ
ಸಂಸತ್
Follow us on

ನವದೆಹಲಿ: ನವೆಂಬರ್ 29ರಿಂದ ಡಿಸೆಂಬರ್ 23ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ (Winter Session) ನಡೆಯುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ಈಗಾಗಲೇ ಪ್ರಸ್ತಾವನೆಯನ್ನು ಅಂತಿಮಗೊಳಿಸಿದೆ. ಕೊವಿಡ್ (COVID Pandemic) ಹಿನ್ನೆಲೆಯಲ್ಲಿ 2020ರ ಚಳಿಗಾಲದ ಅಧಿವೇಶನವನ್ನು ನಡೆಸಿರಲಿಲ್ಲ. ಈ ಬಾರಿ ಕೊರೊನಾ ಅಟ್ಟಹಾಸ ಕೊಂಚ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನವೆಂಬರ್ 29ರಿಂದ ಸಂಸತ್ ಅಧಿವೇಶನ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ.

ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಸಂಸತ್​ನ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಗಿತ್ತು. ಹಾಗೇ, ಬಜೆಟ್ ಮತ್ತು ಮುಂಗಾರು ಅಧಿವೇಶನವನ್ನು ಮೊಟಕುಗೊಳಿಸಲಾಗಿತ್ತು. ಈ ಬಾರಿ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಧಿವೇಶನಗಳು ಏಕಕಾಲಕ್ಕೆ ನಡೆಯಲಿದೆ ಎಂದು ವರದಿಯಾಗಿದೆ. ಸಂಸತ್ ಕಲಾಪದ ವೇಳೆ ಸದಸ್ಯರು ಸಾಮಾಜಿಕ ಅಂತರದ ನಿಯಮಗಳನ್ನು ಅನುಸರಿಸಲಿದ್ದಾರೆ.

ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಸಾರ್ವತ್ರಿಕ ಪಿಂಚಣಿ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು PFRDAಯಿಂದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ (NPS) ಅನ್ನು ಪ್ರತ್ಯೇಕಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಕಾಯ್ದೆ 2013ಕ್ಕೆ ತಿದ್ದುಪಡಿಗಳನ್ನು ತರುವ ಸಾಧ್ಯತೆಯಿದೆ. ಹಾಗೇ, ಅಧಿವೇಶನದಲ್ಲಿ ಸರ್ಕಾರವು ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣಕ್ಕೆ ಅವಕಾಶ ನೀಡುವ ಉದ್ದೇಶಿತ ಕಾನೂನು ಸೇರಿದಂತೆ ಎರಡು ಪ್ರಮುಖ ಹಣಕಾಸು ಮಸೂದೆಗಳನ್ನು ಪರಿಚಯಿಸಬಹುದು ಎನ್ನಲಾಗಿದೆ.

ಭಾರತದಲ್ಲಿ ಕೊರೊನಾ ಅಲೆ ಶುರುವಾದ ನಂತರ ಇದು ನಾಲ್ಕನೇ ಅಧಿವೇಶನವಾಗಿದೆ. ಸಾಂಕ್ರಾಮಿಕ ರೋಗದ ನಂತರದ ಮೊದಲ ಅಧಿವೇಶನವು 2020ರ ಸೆಪ್ಟೆಂಬರ್ ತಿಂಗಳಲ್ಲಿ ನಡೆದಿತ್ತು.

ಇದನ್ನೂ ಓದಿ: PM Narendra Modi: ವಾರಾಣಸಿಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್​ಗೆ ಪ್ರಧಾನಿ ಮೋದಿ ಚಾಲನೆ

‘ನನ್ನ ಹೆಸರು ದಾವೂದ್ ವಾಂಖೆಡೆಯಲ್ಲ’; ನವಾಬ್ ಮಲಿಕ್ ಆರೋಪಕ್ಕೆ ಸಮೀರ್ ವಾಂಖೆಡೆ ತಂದೆ ಸ್ಪಷ್ಟನೆ

Published On - 4:04 pm, Tue, 26 October 21