AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾಲೋಪದ ನಂತರ ಮತ್ತೆ ಸಂಸತ್ ಕಲಾಪ ಪ್ರಾರಂಭ; ತನಿಖೆ ನಡೆಸುವುದಾಗಿ ಓಂ ಬಿರ್ಲಾ ಭರವಸೆ

ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ಲೋಪ ಬಗ್ಗೆ ಪ್ರಾಥಮಿಕ ವರದಿ ಬಂದಿದೆ. ವಿವರವಾದ ತನಿಖಾ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು. ಒಳಗೆ ಬಂದ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ, ಕಟ್ಟಡದ ಹೊರಗಿದ್ದ ಇಬ್ಬರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಭದ್ರತಾಲೋಪದ ನಂತರ ಮತ್ತೆ ಸಂಸತ್ ಕಲಾಪ ಪ್ರಾರಂಭ; ತನಿಖೆ ನಡೆಸುವುದಾಗಿ ಓಂ ಬಿರ್ಲಾ ಭರವಸೆ
ಲೋಕಸಭೆಯಲ್ಲಿ ಭದ್ರತಾ ಲೋಪ
ರಶ್ಮಿ ಕಲ್ಲಕಟ್ಟ
|

Updated on:Dec 13, 2023 | 2:43 PM

Share

ದೆಹಲಿ ಡಿಸೆಂಬರ್ 13: ಲೋಕಸಭೆಯಲ್ಲಿ (Lok Sabha) ಇಂದು (ಬುಧವಾರ) ಭದ್ರತಾ ಲೋಪ (security breach) ಸಂಭವಿಸಿದಾಗ ಸ್ಥಗಿತಗೊಳಿಸಿದ್ದ ಕಲಾಪ ಮಧ್ಯಾಹ್ನ 2ಗಂಟೆಗೆ ಮತ್ತೆ ಆರಂಭವಾಗಿದೆ.ಪ್ರಾಥಮಿಕ ವರದಿ ಬಂದಿದೆ. ವಿವರವಾದ ತನಿಖಾ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು. ಒಳಗೆ ನುಗ್ಗಿದ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ, ಕಟ್ಟಡದ ಹೊರಗಿದ್ದ ಇಬ್ಬರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ  ಹೇಳಿದ್ದಾರೆ. ಭದ್ರತಾಲೋಪದ ಬಗ್ಗೆ ವಿವರವಾದ ಪರಿಶೀಲನೆ ನಡೆಯಲಿದೆ ಎಂದು ಬಿರ್ಲಾ ಸದನಕ್ಕೆ ಭರವಸೆ ನೀಡಿದ್ದು ಹೊಗೆಗೆ ಕಾರಣವಾದ ರಾಸಾಯನಿಕವನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

ಶೂನ್ಯ ವೇಳೆಯಲ್ಲಿ ನಡೆದ ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರಿಗೂ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಕೇವಲ ಹೊಗೆ ಎಂದು ಕಂಡುಬಂದಿದ್ದು, ಹೊಗೆಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ

ಬುಧವಾರ ಮಧ್ಯಾಹ್ನ 1.02 ಗಂಟೆಗೆ ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಇಬ್ಬರು ಅಪರಿಚಿತರ ಹಳದಿ ಹೊಗೆಯನ್ನು ಹೊರಸೂಸುವ ಹೊಗೆ ಡಬ್ಬಿಗಳನ್ನು ಹೊತ್ತೊಯ್ದು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಲೋಕಸಭೆಯ ಸಭಾಂಗಣಕ್ಕೆ  ನುಗ್ಗಿದ್ದು ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ದೃಶ್ಯಗಳನ್ನು ನೋಡಿದರೆ  ಒಬ್ಬ ವ್ಯಕ್ತಿ, ಕಡು ನೀಲಿ ಬಣ್ಣದ ಶರ್ಟ್ ಧರಿಸಿದ್ದು  ಡೆಸ್ಕ್‌ಗಳ ಮೇಲೆ ಜಿಗಿಯುತ್ತಿರುವುದು ಮತ್ತು  ಆದರೆ ಎರಡನೆಯವ ಸಂದರ್ಶಕರ ಗ್ಯಾಲರಿಯಲ್ಲಿ ಹೊಗೆಯನ್ನು ಸಿಂಪಡಿಸುತ್ತಿರುವುದು ಕಾಣುತ್ತದೆ. ಇಬ್ಬರನ್ನೂ ಸಂಸದರು ಮತ್ತು ಭದ್ರತಾ ಸಿಬ್ಬಂದಿ ಹಿಡಿದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಭದ್ರತಾ ಲೋಪ: ಕಲಾಪ ವೇಳೆ ನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು ವಶಕ್ಕೆ

ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಪುನರಾರಂಭವಾಗಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಸಂಕ್ಷಿಪ್ತ ಹೇಳಿಕೆ ನೀಡಿದ್ದು,ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ವಿಚಾರಣೆಗೆ ಸೇರಲು ದೆಹಲಿ ಪೊಲೀಸರನ್ನು ಕೇಳಿದ್ದೇವೆ ಎಂದಿದ್ದಾರೆ.

ಭದ್ರತಾ ಲೋಪ ಸಂಭವಿಸಿದ ಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಮತ್ತು ಅನುಪ್ರಿಯಾ ಪಟೇಲ್ ಉಪಸ್ಥಿತರಿದ್ದರು.

ಎನ್‌ಡಿಟಿವಿ ಜತೆ ಮಾತನಾಡಿದ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಅವರು, ಸದನಕ್ಕೆ ನುಗ್ಗಿದ ವ್ಯಕ್ತಿಗಳಿಂದ ಸಂದರ್ಶಕರ ಪಾಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅದನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ನೀಡಲಾಗಿದೆ ಎಂದು ಹೇಳಿದ್ದಾರೆ. ಆದಾಗ್ಯೂ, ಯಾವುದೇ ಸಂಸದರ ಕಚೇರಿಯು ಪಾಸ್ ಅನ್ನು ನೀಡಿದ್ದರೂ, ಯಾವುದೇ ಸಂದರ್ಶಕರು ಸಂಸತ್ತಿನೊಳಗೆ ಪ್ರವೇಶಿಸುವ ಮೊದಲು ಐದು ಹಂತದ ಭದ್ರತೆಯನ್ನು ಕ್ಲಿಯರ್ ಮಾಡಬೇಕು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Wed, 13 December 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ