ದೆಹಲಿ ಡಿಸೆಂಬರ್ 13: ಲೋಕಸಭೆಯಲ್ಲಿ (Lok Sabha) ಇಂದು (ಬುಧವಾರ) ಭದ್ರತಾ ಲೋಪ (security breach) ಸಂಭವಿಸಿದಾಗ ಸ್ಥಗಿತಗೊಳಿಸಿದ್ದ ಕಲಾಪ ಮಧ್ಯಾಹ್ನ 2ಗಂಟೆಗೆ ಮತ್ತೆ ಆರಂಭವಾಗಿದೆ.ಪ್ರಾಥಮಿಕ ವರದಿ ಬಂದಿದೆ. ವಿವರವಾದ ತನಿಖಾ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು. ಒಳಗೆ ನುಗ್ಗಿದ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ, ಕಟ್ಟಡದ ಹೊರಗಿದ್ದ ಇಬ್ಬರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಭದ್ರತಾಲೋಪದ ಬಗ್ಗೆ ವಿವರವಾದ ಪರಿಶೀಲನೆ ನಡೆಯಲಿದೆ ಎಂದು ಬಿರ್ಲಾ ಸದನಕ್ಕೆ ಭರವಸೆ ನೀಡಿದ್ದು ಹೊಗೆಗೆ ಕಾರಣವಾದ ರಾಸಾಯನಿಕವನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.
ಶೂನ್ಯ ವೇಳೆಯಲ್ಲಿ ನಡೆದ ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರಿಗೂ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಕೇವಲ ಹೊಗೆ ಎಂದು ಕಂಡುಬಂದಿದ್ದು, ಹೊಗೆಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ
#WATCH | Lok Sabha security breach | Lok Sabha speaker Om Birla says “A thorough investigation of the incident that took place during zero hour, is being done. Essential instructions have also been given to Delhi Police. In the primary investigation, it has been found that it was… pic.twitter.com/GPMPAoyeLk
— ANI (@ANI) December 13, 2023
ಬುಧವಾರ ಮಧ್ಯಾಹ್ನ 1.02 ಗಂಟೆಗೆ ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಇಬ್ಬರು ಅಪರಿಚಿತರ ಹಳದಿ ಹೊಗೆಯನ್ನು ಹೊರಸೂಸುವ ಹೊಗೆ ಡಬ್ಬಿಗಳನ್ನು ಹೊತ್ತೊಯ್ದು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಲೋಕಸಭೆಯ ಸಭಾಂಗಣಕ್ಕೆ ನುಗ್ಗಿದ್ದು ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ದೃಶ್ಯಗಳನ್ನು ನೋಡಿದರೆ ಒಬ್ಬ ವ್ಯಕ್ತಿ, ಕಡು ನೀಲಿ ಬಣ್ಣದ ಶರ್ಟ್ ಧರಿಸಿದ್ದು ಡೆಸ್ಕ್‌ಗಳ ಮೇಲೆ ಜಿಗಿಯುತ್ತಿರುವುದು ಮತ್ತು ಆದರೆ ಎರಡನೆಯವ ಸಂದರ್ಶಕರ ಗ್ಯಾಲರಿಯಲ್ಲಿ ಹೊಗೆಯನ್ನು ಸಿಂಪಡಿಸುತ್ತಿರುವುದು ಕಾಣುತ್ತದೆ. ಇಬ್ಬರನ್ನೂ ಸಂಸದರು ಮತ್ತು ಭದ್ರತಾ ಸಿಬ್ಬಂದಿ ಹಿಡಿದಿದ್ದಾರೆ.
ಇದನ್ನೂ ಓದಿ: ಲೋಕಸಭೆಯಲ್ಲಿ ಭದ್ರತಾ ಲೋಪ: ಕಲಾಪ ವೇಳೆ ನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು ವಶಕ್ಕೆ
ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಪುನರಾರಂಭವಾಗಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಸಂಕ್ಷಿಪ್ತ ಹೇಳಿಕೆ ನೀಡಿದ್ದು,ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ವಿಚಾರಣೆಗೆ ಸೇರಲು ದೆಹಲಿ ಪೊಲೀಸರನ್ನು ಕೇಳಿದ್ದೇವೆ ಎಂದಿದ್ದಾರೆ.
ಭದ್ರತಾ ಲೋಪ ಸಂಭವಿಸಿದ ಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಮತ್ತು ಅನುಪ್ರಿಯಾ ಪಟೇಲ್ ಉಪಸ್ಥಿತರಿದ್ದರು.
ಎನ್‌ಡಿಟಿವಿ ಜತೆ ಮಾತನಾಡಿದ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಅವರು, ಸದನಕ್ಕೆ ನುಗ್ಗಿದ ವ್ಯಕ್ತಿಗಳಿಂದ ಸಂದರ್ಶಕರ ಪಾಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅದನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ನೀಡಲಾಗಿದೆ ಎಂದು ಹೇಳಿದ್ದಾರೆ. ಆದಾಗ್ಯೂ, ಯಾವುದೇ ಸಂಸದರ ಕಚೇರಿಯು ಪಾಸ್ ಅನ್ನು ನೀಡಿದ್ದರೂ, ಯಾವುದೇ ಸಂದರ್ಶಕರು ಸಂಸತ್ತಿನೊಳಗೆ ಪ್ರವೇಶಿಸುವ ಮೊದಲು ಐದು ಹಂತದ ಭದ್ರತೆಯನ್ನು ಕ್ಲಿಯರ್ ಮಾಡಬೇಕು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:28 pm, Wed, 13 December 23