Lok Sabha Session: ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಎಂದರೆ ಹಿಂದೂ ಸಮಾಜವಲ್ಲ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

Rahul Gandhi: ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಸೋಮವಾರ) ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಗಲಿರುಳು ಹಿಂಸಾಚಾರ ಮತ್ತು ದ್ವೇಷದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆಡಳಿತ ಪಕ್ಷದ ನಾಯಕರಿಂದ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Lok Sabha Session: ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಎಂದರೆ ಹಿಂದೂ ಸಮಾಜವಲ್ಲ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ Image Credit source: PTI
Follow us
|

Updated on: Jul 01, 2024 | 4:58 PM

ನವದೆಹಲಿ: ವಿರೋಧ ಪಕ್ಷದ ನಾಯಕರಾಗಿ ತಮ್ಮ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ, ಹಿಂದೂ ಧರ್ಮ, ಇಸ್ಲಾಂ ಮತ್ತು ಸಿಖ್ ಧರ್ಮ ಸೇರಿದಂತೆ ಎಲ್ಲಾ ಧರ್ಮಗಳು ಧೈರ್ಯ ಮತ್ತು ನಿರ್ಭೀತರಾಗಿರುವುದರ ಮಹತ್ವವನ್ನು ಒತ್ತಿಹೇಳುತ್ತವೆ ಎಂದು ಗಾಂಧಿ ಪುನರುಚ್ಚರಿಸಿದರು. ಈ ವೇಳೆ ಮಾತನಾಡಿದ ಅವರು, ತಮ್ಮನ್ನು ತಾವು ಹಿಂದೂಗಳು ಎಂದು ಹೇಳಿಕೊಳ್ಳುವವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪಿಎಂ ಮೋದಿ, ರಾಹುಲ್ ಗಾಂಧಿ ಹಿಂದೂ ಸಮಾಜವನ್ನೇ ಹಿಂಸಾಚಾರಿಗಳು ಎಂದು ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ನಾನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಗ್ಗೆ ಮಾತನಾಡುತ್ತಿದ್ದೇನೆಯೇ ಹೊರತು ಇಡೀ ಹಿಂದೂ ಸಮಾಜದ ಬಗ್ಗೆಯಲ್ಲ ಎಂದು ತಿರುಗೇಟು ನೀಡಿದರು. ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅಥವಾ ಮೋದಿ ಇಡೀ ಹಿಂದೂ ಸಮಾಜವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: Rahul Gandhi: ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ನೀವು ಹಿಂದೂಗಳಲ್ಲ. ಸತ್ಯದ ಜೊತೆಗೆ ನಿಲ್ಲಬೇಕು ಮತ್ತು ಅಹಿಂಸೆಯನ್ನು ಆಚರಿಸಬೇಕು ಎಂದು ಹಿಂದೂ ಧರ್ಮ ಹೇಳುತ್ತದೆ. ನರೇಂದ್ರ ಮೋದಿ ಎಂದರೆ ಇಡೀ ಹಿಂದೂ ಸಮುದಾಯವಲ್ಲ. ಬಿಜೆಪಿ ಅಥವಾ ಆರ್‌ಎಸ್‌ಎಸ್ ಎಂದರೆ ಹಿಂದೂ ಸಮುದಾಯದ ಪ್ರತಿತಿನಿಧಿ ಅಲ್ಲ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಲೋಕಸಭೆಯಲ್ಲಿ ಶಿವನ ಫೋಟೋವನ್ನು ತೋರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವನ ಸಂದೇಶವು ನಿರ್ಭಯತೆ ಮತ್ತು ಅಹಿಂಸೆಯನ್ನು ಸೂಚಿಸುತ್ತದೆ ಎಂದು ಹೇಳಿದರು. ಆದರೆ, ಬಿಜೆಪಿಯು ಎಲ್ಲರೂ ಹಿಂದೂಗಳನ್ನು ಪ್ರತಿನಿಧಿಸುವುದಿಲ್ಲ ಅಥವಾ ಆರ್​ಎಸ್​ಎಸ್​ ಎಂದರೆ ಹಿಂದೂಗಳ ಪ್ರತಿನಿಧಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: Robert Vadra: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಸವಾಲು ಹಾಕುತ್ತಾರೆ; ರಾಬರ್ಟ್ ವಾದ್ರಾ

ಎಲ್ಲಾ ಧರ್ಮಗಳು ಧೈರ್ಯದ ಬಗ್ಗೆ ಮಾತನಾಡುತ್ತವೆ. ಇಸ್ಲಾಂ, ಕ್ರಿಶ್ಚಿಯನ್ ಧರ್ಮ, ಬೌದ್ಧ ಧರ್ಮ, ಜೈನ ಮತ್ತು ಸಿಖ್ ಧರ್ಮಗಳನ್ನು ಉಲ್ಲೇಖಿಸಿ ಇದು ನಿರ್ಭಯತೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತವೆ ಎಂದು ರಾಹುಲ್ ಗಾಂಧಿಯವರು ಒತ್ತಿ ಹೇಳಿದ್ದಾರೆ.

ನನ್ನ ಮೇಲೆ ಆರೋಪ ಮಾಡಿದ್ದ ಬಿಜೆಪಿಯವರು ಈಗ ‘ಜೈ ಸಂವಿಧಾನ’ ಎಂದು ಹೇಳುತ್ತಿರುವುದು ನನಗೆ ಸಂತಸ ತಂದಿದೆ. ನಾನು ವಿರೋಧ ಪಕ್ಷದಲ್ಲಿರುವುದಕ್ಕೆ ನನಗೆ ಹೆಮ್ಮೆ ಮತ್ತು ತೃಪ್ತಿಯಿದೆ. ನಮಗೆ ಈ ದೇಶದ ಜನರ ಒಳಿತು ಅಧಿಕಾರಕ್ಕಿಂತಲೂ ಹೆಚ್ಚಿನದ್ದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ