7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ: ಬಂಗಾಳದಲ್ಲಿ ಕೇಂದ್ರ ಸಚಿವ ಶಾಂತನು ಠಾಕೂರ್ ಗ್ಯಾರಂಟಿ
ಕಳೆದ ವರ್ಷ ಡಿಸೆಂಬರ್ 27 ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಇದು ದೇಶದ ಕಾನೂನು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾ ಆರೋಪಿಸಿದ್ದರು.
ಕೊಲ್ಕತ್ತಾ ಜನವರಿ 29: ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆ (CAA) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ (Shantanu Thakur) ಹೇಳಿದ್ದಾರೆ. ಭಾನುವಾರ ಪಶ್ಚಿಮ ಬಂಗಾಳದ (West Bengal) ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಂಗಾಂವ್‌ನ ಬಿಜೆಪಿಯ ಲೋಕಸಭಾ ಸಂಸದ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ. ಮುಂದಿನ ಏಳು ದಿನಗಳಲ್ಲಿ ದೇಶಾದ್ಯಂತ ಸಿಎಎ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎ ಒಂದು ವಾರದೊಳಗೆ ಜಾರಿಗೆ ಬರಲಿದೆ ಎಂದಿದ್ದಾರೆ.
ನರೇಂದ್ರ ಮೋದಿ ಸರ್ಕಾರ ತಂದ ವಿವಾದಾತ್ಮಕ ಸಿಎಎ ಅಡಿಯಲ್ಲಿ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್31, 2014ವರೆಗೆ ಭಾರತಕ್ಕೆ ಬಂದಿರುವ ಹಿಂದೂಗಳು, ಸಿಖ್‌ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡಲಾಗುವುದು.
ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ ಅಂಗೀಕರಿಸಿ, ರಾಷ್ಟ್ರಪತಿ ಅಂಕಿತ ಹಾಕಿದ ನಂತರ ದೇಶದ ಕೆಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು. ಕಳೆದ ವರ್ಷ ಡಿಸೆಂಬರ್ 27 ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಇದು ದೇಶದ ಕಾನೂನು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾ ಆರೋಪಿಸಿದ್ದರು.
VIDEO | “Ram Mandir has been inaugurated (in Ayodhya), and within the next seven days, the CAA – Citizenship (Amendment) Act – will be implemented across the country. This is my guarantee. Not just in West Bengal, the CAA would be implemented in every state of India within a… pic.twitter.com/f5Ergu5TG3
— Press Trust of India (@PTI_News) January 29, 2024
ಕೋಲ್ಕತ್ತಾದಲ್ಲಿ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಸಿಎಎ ಜಾರಿಗೊಳಿಸುವುದು ಬಿಜೆಪಿಯ ಬದ್ಧತೆಯಾಗಿದೆ ಎಂದು ಹೇಳಿದರು. ಅಂದಹಾಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸಿಎಎಯನ್ನು ವಿರೋಧಿಸುತ್ತಿದೆ.
ವಿವಾದಾತ್ಮಕ ಸಿಎಎ ಜಾರಿಗೆ ತರುವ ಭರವಸೆಯು ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಯೋಜನೆಯಾಗಿತ್ತು. ಇದು ರಾಜ್ಯದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ತೋರಿಕೆಯ ಅಂಶ ಎಂದು ಬಿಜೆಪಿ ನಾಯಕರು ಪರಿಗಣಿಸಿದ್ದಾರೆ.
ಸಂಸದೀಯ ಕಾರ್ಯವಿಧಾನಗಳ ಕೈಪಿಡಿಯ ಪ್ರಕಾರ, ಯಾವುದೇ ಶಾಸನದ ನಿಯಮಗಳನ್ನು ರಾಷ್ಟ್ರಪತಿಗಳ ಒಪ್ಪಿಗೆಯ ಆರು ತಿಂಗಳೊಳಗೆ ರಚಿಸಬೇಕು ಅಥವಾ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಧೀನ ಶಾಸನಗಳ ಸಮಿತಿಗಳಿಂದ ವಿಸ್ತರಣೆಯನ್ನು ಕೋರಬೇಕು.
2020 ರಿಂದ ಗೃಹ ಸಚಿವಾಲಯವು ನಿಯಮಗಳ ರಚನೆಗಾಗಿ ಸಂಸದೀಯ ಸಮಿತಿಗಳಿಂದ ನಿಯಮಿತ ಮಧ್ಯಂತರಗಳಲ್ಲಿ ವಿಸ್ತರಣೆಗಳನ್ನು ತೆಗೆದುಕೊಳ್ಳುತ್ತಿದೆ. ಸಂಸತ್ ಕಾನೂನನ್ನು ಅಂಗೀಕರಿಸಿದ ನಂತರ ಪ್ರತಿಭಟನೆಗಳು ನಡೆದಿದ್ದು, ಪ್ರತಿಭಟನೆಗಳನ್ನು ಹತ್ತಿಕ್ಕುವ ಪೊಲೀಸ್ ಕ್ರಮದ ಸಮಯದಲ್ಲಿ ನೂರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು.
ಇದನ್ನೂ ಓದಿ: Pariksha Pe Charcha 2024: ನಿಮಗಿಂತ ಹೆಚ್ಚು ಪ್ರತಿಭಾವಂತರ ಬಳಿ ಸ್ನೇಹ ಬೆಳೆಸಿ, ಅಸೂಯೆ ಬಿಟ್ಟುಬಿಡಿ: ಮೋದಿ ಸಲಹೆ
ಏತನ್ಮಧ್ಯೆ, ಕಳೆದ ಎರಡು ವರ್ಷಗಳಲ್ಲಿ, 1955ರಪೌರತ್ವ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವ ಅಧಿಕಾರವನ್ನು ಒಂಬತ್ತು ರಾಜ್ಯಗಳ 30 ಕ್ಕೂ ಹೆಚ್ಚು ಜಿಲ್ಲಾಧಿಕಾರಿಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ನೀಡಲಾಗಿದೆ.
2021-22 ರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಏಪ್ರಿಲ್ 1, 2021 ರಿಂದ ಡಿಸೆಂಬರ್ 31, 2021 ರವರೆಗೆ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಭಾರತೀಯರನ್ನು ನೀಡಲಾಗಿದೆ. ಅಂದಹಾಗೆ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾಗಿರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಯಾವುದೇ ಜಿಲ್ಲೆಗಳ ಅಧಿಕಾರಿಗಳಿಗೆ ಇದುವರೆಗೆ ಅಧಿಕಾರ ನೀಡಲಾಗಿಲ್ಲ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ