WITT 2024: ದೇಶದ ಪ್ರಗತಿಗೆ ಮುಂಬರುವ ಮೂರನೇ ಅವಧಿ ನಿರ್ಣಾಯಕ: ಪ್ರಧಾನಿ ಮೋದಿ

ಟಿವಿ9 ನೆಟ್‌ವರ್ಕ್‌ನ 'ವಾಟ್ ಇಂಡಿಯಾ ಟುಡೇ ಥಿಂಕ್ಸ್' ಜಾಗತಿಕ ಶೃಂಗಸಭೆಯಲ್ಲಿ ಭಾರತದ ಭವಿಷ್ಯದ ಬಗ್ಗೆ ತಮ್ಮ ದೃಷ್ಟಿಕೋನವನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಮೂರನೇ ಅವಧಿಯು ದೇಶದ ಪ್ರಗತಿಗೆ ನಿರ್ಣಾಯಕ ಕ್ಷಣವಾಗಿದೆ ಎಂದರು. ಮುಂದಿನ ಐದು ವರ್ಷಗಳಲ್ಲಿ ಭಾರತದ ಸಾಮರ್ಥ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ವ್ಯಕ್ತಪಡಿಸಿದರು.

WITT 2024: ದೇಶದ ಪ್ರಗತಿಗೆ ಮುಂಬರುವ ಮೂರನೇ ಅವಧಿ ನಿರ್ಣಾಯಕ: ಪ್ರಧಾನಿ ಮೋದಿ
ದೇಶದ ಪ್ರಗತಿಗೆ ಮುಂಬರುವ ಮೂರನೇ ಅವಧಿ ನಿರ್ಣಾಯಕ ಎಂದ ಪ್ರಧಾನಿ ಮೋದಿ
Follow us
Rakesh Nayak Manchi
|

Updated on:Feb 26, 2024 | 11:04 PM

ನವದೆಹಲಿ, ಫೆ.26: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಟುಡೇ ಥಿಂಕ್ಸ್’ ಜಾಗತಿಕ ಶೃಂಗಸಭೆಯಲ್ಲಿ ಭಾರತದ ಭವಿಷ್ಯದ ಬಗ್ಗೆ ತಮ್ಮ ದೃಷ್ಟಿಕೋನವನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಮುಂದಿನ 5 ವರ್ಷಗಳು ಬಹಳ ಮಹತ್ವದ್ದಾಗಿದೆ. ಮುಂಬರುವ ಮೂರನೇ ಅವಧಿಯು ದೇಶದ ಪ್ರಗತಿಗೆ ನಿರ್ಣಾಯಕ ಕ್ಷಣವಾಗಿದೆ ಎಂದರು. ಅಲ್ಲದೆ, ಹಿಂದಿನ ಸರ್ಕಾರಗಳ ದೃಷ್ಟಿಕೋನದ ಕೊರತೆಯನ್ನು ಟೀಕಿಸಿದ ಅವರು, ಮುಂದಿನ ಐದು ವರ್ಷಗಳಲ್ಲಿ ಭಾರತದ ಸಾಮರ್ಥ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ವ್ಯಕ್ತಪಡಿಸಿದರು.

ನಮ್ಮ 3ನೇ ಅವಧಿಯಲ್ಲಿ, ನಾವು ಭಾರತದ ಸಾಮರ್ಥ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು. ಭಾರತವೇ ಭವಿಷ್ಯ ಎಂದು ಎಲ್ಲರೂ ಹೇಳುತ್ತಿದ್ದಾರೆ. ಮುಂಬರುವ ಐದು ವರ್ಷಗಳು ಭಾರತದ ವಿಕ್ಷಿತ್ ಭಾರತ್ ಪಯಣಕ್ಕೆ ಬಹಳ ನಿರ್ಣಾಯಕವಾಗಿದೆ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ಪ್ರತಿಯೊಬ್ಬ ಭಾರತೀಯನಿಗೂ ದೇಶವು ಮುಂದೆ ಸಾಗುತ್ತಿದೆ ಎಂಬ ನಂಬಿಕೆಯಿದೆ. ಇಂದು ಭಾರತೀಯರು ದೇಶದ ಮೇಲೆ ಹೊಂದಿರುವ ಈ ನಂಬಿಕೆ, ಅವರು ತಮ್ಮ ಆತ್ಮದಲ್ಲಿಯೂ ಹೊಂದಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Modi in WITT 2024: ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ದೇಶವನ್ನು ಮುನ್ನಡೆಸಬೇಕಿದೆ: ಪ್ರಧಾನಿ ಮೋದಿ

ಕಳೆದ 10 ವರ್ಷಗಳಿಂದ ಇದೇ ನಮ್ಮ ಮಂತ್ರ, ಇದೇ ನಮ್ಮ ಚಿಂತನೆ. ಇದು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಎಂದು ಹೇಳಿದ ಪ್ರಧಾನಿ ಮೋದಿ, ಹಿಂದಿನ ಸರ್ಕಾರ ರಿವರ್ಸ್​ ಗೇರ್​ನಲ್ಲಿತ್ತು. ಆದರೆ ಈಗ ಗೇರ್ ಬದಲಾಯಿಸಿ ಭಾರತದ ಅಭಿವೃದ್ಧಿ ಪಥವನ್ನು ವೇಗಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಭಾರತೀಯರ ಕೆಲಸದ ನೀತಿಯ ಬಗ್ಗೆ ಮಾಡಿದ ಟೀಕೆಗಳನ್ನು ಉಲ್ಲೇಖಿಸಿದ ಮೋದಿ, ಹಿಂದಿನ ಸರ್ಕಾರಗಳು ದೇಶ ಮತ್ತು ಜನರ ಸಾಮರ್ಥ್ಯದ ಬಗ್ಗೆ ನಂಬಿಕೆ ಹೊಂದಿರಲಿಲ್ಲ. ಆದರೆ, ಕಳೆದ 10 ವರ್ಷಗಳಲ್ಲಿ ಬದಲಾದ ಭಾರತದಲ್ಲಿ ಜನರು ಸರ್ಕಾರದ ವ್ಯವಸ್ಥೆ ಮೇಲೆ ನಂಬಿಕೆ ಹೊಂದಿದ್ದಾರೆ. ಮಾತ್ರವಲ್ಲದೆ, ನಾನು ಏನು ಬೇಕಾದರೂ ಮಾಡಬಲ್ಲೆ, ನನಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಪ್ರತಿಯೊಬ್ಬ ಭಾರತೀಯ ಯೋಚಿಸಲು ಆರಂಭಿಸಿದ್ದಾನೆ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Mon, 26 February 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ