WITT Summit 2026: ಬಂಗಾಳದಲ್ಲಿ ಡಬಲ್ ಎಂಜಿನ್ ಸರ್ಕಾರ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ

TV9 ನೆಟ್​ವರ್ಕ್ ಆಯೋಜಿಸಿರುವ WITT ಶೃಂಗಸಭೆಯಲ್ಲಿ ಇಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಭಾಗವಹಿಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಕುರಿತು ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ. ಕೇಂದ್ರ ಸರ್ಕಾರ ಕಲ್ಲಿದ್ದಲು ಭದ್ರತೆಗೆ ಒತ್ತು ನೀಡುವುದರ ಜೊತೆಗೆ ನಿರ್ಣಾಯಕ ಖನಿಜಗಳ ಮೇಲೆ ಸ್ವಾವಲಂಬಿಯಾಗಲು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು. ನಿನ್ನೆ ಆರಂಭವಾದ ಈ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಭಾಷಣ ಮಾಡಿದ್ದರು.

WITT Summit 2026: ಬಂಗಾಳದಲ್ಲಿ ಡಬಲ್ ಎಂಜಿನ್ ಸರ್ಕಾರ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ
Kishan Reddy In WITT Summit
Image Credit source: TV9

Updated on: Mar 24, 2026 | 7:22 PM

ನವದೆಹಲಿ, ಮಾರ್ಚ್ 24: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT Summit 2026)ಯಲ್ಲಿ ಮಾತನಾಡಿದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ, ಮುಂದಿನ ತಿಂಗಳು 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ಬಂಗಾಳದಲ್ಲಿ ಮತ್ತೆ ಟಿಎಂಸಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಅಲ್ಲಿನ ಜನರು ಬೇಸತ್ತಿದ್ದಾರೆ. ಕೊಲೆಗಳು ಬಹಿರಂಗವಾಗಿ ನಡೆಯುತ್ತಿವೆ. ಬಂಗಾಳವು ಪ್ರತಿಯೊಂದು ಕ್ಷೇತ್ರದಲ್ಲೂ ಹಿಂದುಳಿದಿದೆ. ಅಲ್ಲಿನ ಜನರು ಡಬಲ್ ಎಂಜಿನ್ ಸರ್ಕಾರವನ್ನು ಬಯಸುತ್ತಿದ್ದಾರೆ. ಅಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ತಮಿಳುನಾಡಿನಲ್ಲೂ ಇದೇ ಪರಿಸ್ಥಿತಿ ಇದೆ. ಪ್ರತಿ ಐದು ವರ್ಷಗಳಿಗೊಮ್ಮೆ ಅಲ್ಲಿ ಸರ್ಕಾರ ಬದಲಾಗುತ್ತದೆ. ಡಿಎಂಕೆ ಸರ್ಕಾರ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ. ಅಲ್ಲಿ ಸ್ವಜನಪಕ್ಷಪಾತವಿದೆ. ಅಲ್ಲಿಯೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕೇರಳದಲ್ಲಿ ನಾವು ನಮ್ಮ ಸ್ಥಾನವನ್ನು ಸುಧಾರಿಸುತ್ತೇವೆ. ಪುದುಚೇರಿ ಮತ್ತು ಅಸ್ಸಾಂನಲ್ಲಿಯೂ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕಿಶನ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: PM Modi in WITT Summit 2026: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಭಾರತದ ಇಂಧನ ವಲಯವು ಪ್ರಸ್ತುತ ಕಠಿಣ ಪರಿಸ್ಥಿತಿಗಳನ್ನು ಎದುರಿಸುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಎಲ್ಲಾ ವಲಯಗಳಲ್ಲಿ ಸ್ವಾವಲಂಬನೆ ಸಾಧಿಸಲು ಪ್ರಯತ್ನಗಳು ನಡೆಯುತ್ತಿವೆ. 2014ಕ್ಕಿಂತ ಮೊದಲು ಕಲ್ಲಿದ್ದಲಿನ ಪೂರೈಕೆಯಲ್ಲಿ ಸಮಸ್ಯೆಗಳಿದ್ದವು. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಕಲ್ಲಿದ್ದಲು ಹಂಚಿಕೆಯ ಬಗ್ಗೆ ಯಾವುದೇ ಆರೋಪಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಓವೈಸಿಗೆ ತಿರುಗೇಟು:

ಭಾರತದಲ್ಲಿ ಈದ್ ಆಚರಿಸಲು ಸ್ವಾತಂತ್ರ್ಯವಿಲ್ಲ ಎಂಬ ಓವೈಸಿ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವ ಕಿಶನ್ ರೆಡ್ಡಿ, “ಇದು ಸಂಪೂರ್ಣವಾಗಿ ತಪ್ಪು. ಸ್ವಾತಂತ್ರ್ಯವಿಲ್ಲದೆ ಇರುವುದಕ್ಕೆ ಇದು ಪಾಕಿಸ್ತಾನವೇ? ಭಾರತದಲ್ಲಿ ಎಲ್ಲರೂ ಸ್ವತಂತ್ರರು. ಇಲ್ಲಿ ಯಾವುದೇ ಧರ್ಮದ ಸಮಸ್ಯೆ ಇಲ್ಲ. ಓವೈಸಿ ಇದನ್ನು ಅರ್ಥ ಮಾಡಿಕೊಳ್ಳಬೇಕು. ಆದರೆ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂಬುದನ್ನು ಕೂಡ ಅರ್ಥ ಮಾಡಿಕೊಳ್ಳಬೇಕು” ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us