AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಸಜೀವವಾಗಿ ದಹಿಸಿದ ಕ್ರೂರ ಮಕ್ಕಳು

ಸಂಬಂಧಗಳ ಬೆಲೆ ಅರಿಯದ ಮಕ್ಕಳು ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಸಜೀವವಾಗಿ ದಹಿಸಿರುವ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಸಜೀವವಾಗಿ ದಹಿಸಿದ ಕ್ರೂರ ಮಕ್ಕಳು
ಬೆಂಕಿImage Credit source: India Today
ನಯನಾ ರಾಜೀವ್
|

Updated on: Sep 30, 2024 | 8:03 AM

Share

ಸಂಬಂಧಗಳ ಬೆಲೆ ಅರಿಯದ ಮಕ್ಕಳು ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಸಜೀವವಾಗಿ ದಹಿಸಿರುವ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುತ್ರರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದು, ಕೌಟುಂಬಿಕ ಕಲಹವೇ ಭೀಕರ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಚಂಪಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಮರ್ಬರಿಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲಾದಲ್ಲಿ ವಾಸಿಸುತ್ತಿದ್ದ.

ಪೊಲೀಸ್ ತಂಡವು ಅಲ್ಲಿಗೆ ಧಾವಿಸಿತು ಮತ್ತು ಮರಕ್ಕೆ ಕಟ್ಟಿದ ಸುಟ್ಟ ದೇಹವನ್ನು ಕಂಡು ನಾವು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತೋಟದಲ್ಲಿ ನಿರ್ಮಿಸಿದ್ದ ಶೆಡ್​ಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು; ತಾಯಿ-ಮಗಳು ಸಜೀವ ದಹನ, ಇಬ್ಬರಿಗೆ ಗಾಯ

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾವು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಕೋರಲಾಗಿದೆ. ಕೌಟುಂಬಿಕ ಕಲಹ ಘಟನೆಗೆ ಕಾರಣವಾಗಿರಬಹುದು. ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ