AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ

ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ.

ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ
ಆರೋಪಿ ಮಹಿಳೆ Image Credit source: India Today
ನಯನಾ ರಾಜೀವ್
|

Updated on: May 26, 2026 | 10:38 AM

Share

ಬಿಲಾಸ್‌ಪುರ, ಮೇ 26: ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾಜೇಶ್ ಕೌಶಿಕ್ ಮತ್ತು ಆತನ ಪತ್ನಿ ದ್ರೌಪದಿ ಬಾಯಿ ನಡುವೆ ದೀರ್ಘಕಾಲದಿಂದ ಕೌಟುಂಬಿಕ ಜಗಳಗಳು ನಡೆಯುತ್ತಿದ್ದವು. ರಾಜೇಶ್‌ಗೆ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ದ್ರೌಪದಿ ಅನುಮಾನಿಸುತ್ತಿದ್ದಳು. ಘಟನೆ ನಡೆದ ರಾತ್ರಿ ಕೂಡ ಇಬ್ಬರೂ ಒಟ್ಟಿಗೆ ಊಟ ಮಾಡಿ ಮಲಗಿದ್ದರು. ಆದರೆ, ತಡರಾತ್ರಿ ಪತಿ ರಾಜೇಶ್ ಗಾಢ ನಿದ್ದೆಯಲ್ಲಿದ್ದಾಗ, ದ್ರೌಪತಿ ಕತ್ತಿಯಿಂದ ಆತನ ಖಾಸಗಿ ಭಾಗಗಳನ್ನು ಕತ್ತರಿಸಿ ಕ್ರೂರತೆ ಮೆರೆದಿದ್ದಾಳೆ.

ಮತ್ತಷ್ಟು ಓದಿ: ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು

ದಾಳಿಯ ಭೀಕರತೆಗೆ ತತ್ತರಿಸಿದ ರಾಜೇಶ್ ತೀವ್ರ ರಕ್ತಸ್ರಾವದ ನಡುವೆಯೂ ಕಿರುಚುತ್ತಾ ಕೋಣೆಯಿಂದ ಹೊರಗೆ ಓಡಿಬಂದಿದ್ದಾರೆ. ತಂದೆಯ ಕಿರುಚಾಟ ಕೇಳಿ ಎಚ್ಚರಗೊಂಡ ಅಪ್ರಾಪ್ತ ಮಗ ತಕ್ಷಣವೇ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಕುಟುಂಬಸ್ಥರು ರಾಜೇಶ್ ಮತ್ತು ಆತನ ಕತ್ತರಿಸಿದ ದೇಹದ ಭಾಗವನ್ನು ಹಿಡಿದುಕೊಂಡು ತಕ್ಷಣವೇ ಆಸ್ಪತ್ರೆಗೆ ಧಾವಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮಹಿಳೆ ದ್ರೌಪದಿ ಬಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ ಅನೈತಿಕ ಸಂಬಂಧದ ಅನುಮಾನ ಮತ್ತು ನಿರಂತರ ಕೌಟುಂಬಿಕ ಕಲಹವೇ ಈ ಘೋರ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಮಹಿಳೆಯ ವಿರುದ್ಧ ಕಠಿಣ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್