ಹಿಮಂತ ಬಿಸ್ವ ಶರ್ಮಾಗೆ ಬೀಫ್ ಉಡುಗೊರೆ ನೀಡುವುದಾಗಿ ವಾಟ್ಸ್ಆಪ್ ಸ್ಟೇಟಸ್ ಅಪ್​​ಡೇಟ್ ಮಾಡಿದ ಮಹಿಳೆ ಬಂಧನ

Himanta Biswa Sarma:ಮಹಿಳೆ ಬುಧವಾರ ತನ್ನ ಹಸುವಿನ ಕಳೇಬರ ಫೋಟೋವನ್ನು ತನ್ನ ವಾಟ್ಸ್ಆಪ್ ಸ್ಟೇಟಸ್​​ನಲ್ಲಿ ಅಪ್‌ಲೋಡ್ ಮಾಡಿದ್ದಳು ಮತ್ತು ಎರಡನೇ ಚಿತ್ರದಲ್ಲಿ ಮುಖ್ಯಮಂತ್ರಿಗೆ ಪ್ರಾಣಿಗಳ ಮಾಂಸವನ್ನು ನೀಡುವುದಾಗಿ ಹೇಳಿದ್ದಳು.

ಹಿಮಂತ ಬಿಸ್ವ ಶರ್ಮಾಗೆ ಬೀಫ್ ಉಡುಗೊರೆ ನೀಡುವುದಾಗಿ ವಾಟ್ಸ್ಆಪ್ ಸ್ಟೇಟಸ್ ಅಪ್​​ಡೇಟ್ ಮಾಡಿದ ಮಹಿಳೆ ಬಂಧನ
ಹಿಮಂತ ಬಿಸ್ವ ಶರ್ಮಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 22, 2021 | 7:45 PM

ಗುವಾಹಟಿ: ಅಸ್ಸಾಂನ ನಲ್ಬಾರಿ ಜಿಲ್ಲೆಯ ಹಳ್ಳಿಯ ಮಹಿಳೆಯೊಬ್ಬರನ್ನು “ಆಕ್ಷೇಪಾರ್ಹ ಪೋಸ್ಟ್” ಅಪ್​​ಡೇಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಗೋಮಾಂಸವನ್ನು “ಉಡುಗೊರೆಯಾಗಿ” ನೀಡುತ್ತೇವೆ ಎಂದು ಮಹಿಳೆ ಪೋಸ್ಟ್ ಮಾಡಿದ್ದರು.

“ನಿನ್ನೆ ಮಹಿಳೆಯೊಬ್ಬರು ತನ್ನ ವಾಟ್ಸ್ಆಪ್ ಸ್ಟೇಟಸ್ ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಅಪ್‌ಲೋಡ್ ಮಾಡಿದ್ದಾಳೆ. ನಾವು ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು, ಏಕೆಂದರೆ ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ” ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ದನಗಳ ಅಕ್ರಮ ಸಾಗಣೆ ಮತ್ತು ಗೋಮಾಂಸ ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು 2021 ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯನ್ನು ಮಂಡಿಸಿದ ನಂತರ ಮೊದಲ ಬಾರಿ ಈ ರೀತಿ ಬಂಧನ ನಡೆದಿದೆ. ಹಿಂದೂ, ಜೈನ, ಸಿಖ್ ಮತ್ತು ಇತರ ಗೋಮಾಂಸ ಸೇವಿಸದ ಸಮುದಾಯಗಳು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಅಥವಾ ಯಾವುದೇ ದೇವಾಲಯದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸಲು ಮಸೂದೆಯು ಪ್ರಸ್ತಾಪಿಸಿದೆ.

ಮಹಿಳೆ ಬುಧವಾರ ತನ್ನ ಹಸುವಿನ ಕಳೇಬರ ಫೋಟೋವನ್ನು ತನ್ನ ವಾಟ್ಸ್ಆಪ್ ಸ್ಟೇಟಸ್​​ನಲ್ಲಿ ಅಪ್‌ಲೋಡ್ ಮಾಡಿದ್ದಳು ಮತ್ತು ಎರಡನೇ ಚಿತ್ರದಲ್ಲಿ ಮುಖ್ಯಮಂತ್ರಿಗೆ ಪ್ರಾಣಿಗಳ ಮಾಂಸವನ್ನು ನೀಡುವುದಾಗಿ ಹೇಳಿದ್ದಳು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಗೋಮಾಂಸದ ತುಂಡನ್ನು ಉಡುಗೊರೆಯಾಗಿ ನೀಡುವಂತೆ ಹುಡುಗಿ ತನ್ನ ವಾಟ್ಸ್ಆಪ್ ಸ್ಟೇಟಸ್​​ನಲ್ಲಿ ಉಲ್ಲೇಖಿಸಿದ್ದಾಳೆ. ಬುಧವಾರ, ಮುಸ್ಲಿಂ ಸಮುದಾಯವು ಈದ್ ಉಲ್ ಅಧಾವನ್ನು ಪ್ರಪಂಚದಾದ್ಯಂತ ಆಚರಿಸಿತು. ಸಚಿವ ಹಿಮಂತ ಬಿಸ್ವಾ ಶರ್ಮಾ ಬಗ್ಗೆ ಈ ರೀತಿಯ ‘ಆಕ್ಷೇಪಾರ್ಹ ಪೋಸ್ಟ್’ ಎರಡು ಸಮುದಾಯಗಳಲ್ಲಿ ಸೌಹಾರ್ದತೆ ಕೆದಡಲು ಕಾರಣವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮಾಜಿ ಸ್ಥಳೀಯ ಬಿಜೆಪಿ ಮುಖಂಡರ ಮಗಳು. ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಲ್ಬಾರಿ ಘಟಕವು ಎರಡು ಸಮುದಾಯಗಳ ನಡುವೆ ಕೋಮು ಅಸಮಾನತೆಯನ್ನು ಸೃಷ್ಟಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿತು.

“ಇಂತಹ ವಿವಾದಾತ್ಮಕ ಪೋಸ್ಟ್ ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ. ನಮ್ಮ ಸಂಸ್ಕೃತಿಯನ್ನು ಅವಮಾನಿಸುವ ಇಂತಹ ಪ್ರಯತ್ನಗಳನ್ನು ನಾವು ಸಹಿಸಲಾರೆವು. ಹಿಂದೂಗಳು ಹಸುವನ್ನು ಪವಿತ್ರವೆಂದು ಪರಿಗಣಿಸುತ್ತಾರೆ, ಆಗ ಆಕೆ ತನ್ನ ವಾಟ್ಸ್​​ಆಪ್ ಸ್ಟೇಟಸ್​​ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಹೇಗೆ ಪೋಸ್ಟ್ ಮಾಡುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಥೆಗಳು ಅವುಗಳ ಕೆಲಸ ಮಾಡುತ್ತಿವೆ, ನಮ್ಮ ಹಸ್ತಕ್ಷೇಪ ಇಲ್ಲ: ಮಾಧ್ಯಮಗಳ ವಿರುದ್ಧ ಐಟಿ ದಾಳಿ ಬಗ್ಗೆ ಕೇಂದ್ರ ಪ್ರತಿಕ್ರಿಯೆ

(Woman arrested for Allegedly uploading an objectionable post To Gift Beef To Assam CM Himanta Biswa Sarma)

Published On - 7:45 pm, Thu, 22 July 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?