ಮಹಾರಾಷ್ಟ್ರ: ಚಂದ್ರಾಪುರ ಜಿಲ್ಲೆಯಲ್ಲಿ ಹುಲಿ ದಾಳಿಗೆ 60 ವರ್ಷದ ಮಹಿಳೆ ಸಾವು

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಬ್ರಹ್ಮಪುರಿ ಅರಣ್ಯದಲ್ಲಿ ಹುಲಿ ದಾಳಿಗೆ 60 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಬ್ರಹ್ಮಪುರಿ ಅರಣ್ಯ ವಿಭಾಗದ ದಕ್ಷಿಣ ಅರಣ್ಯ ವ್ಯಾಪ್ತಿಗೆ ಒಳಪಡುವ ಹಲ್ದಾ ಗ್ರಾಮದಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಮೃತರನ್ನು ಸಾವಿತ್ರಿಬಾಯಿ ಕಾಂಬಳೆ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಚಂದ್ರಾಪುರ ಜಿಲ್ಲೆಯಲ್ಲಿ ಹುಲಿ ದಾಳಿಗೆ 60 ವರ್ಷದ ಮಹಿಳೆ ಸಾವು
ಹುಲಿ
Image Credit source: BBC

Updated on: Nov 02, 2023 | 9:52 AM

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಬ್ರಹ್ಮಪುರಿ ಅರಣ್ಯದಲ್ಲಿ ಹುಲಿ ದಾಳಿ(Tiger Attack)ಗೆ 60 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಬ್ರಹ್ಮಪುರಿ ಅರಣ್ಯ ವಿಭಾಗದ ದಕ್ಷಿಣ ಅರಣ್ಯ ವ್ಯಾಪ್ತಿಗೆ ಒಳಪಡುವ ಹಲ್ದಾ ಗ್ರಾಮದಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಮೃತರನ್ನು ಸಾವಿತ್ರಿಬಾಯಿ ಕಾಂಬಳೆ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆ ತನ್ನ ಜಮೀನಿಗೆ ಹೋಗಿದ್ದಾಗ ಪೊದೆಗಳಲ್ಲಿ ಅವಿತುಕೊಂಡಿದ್ದ ಹುಲಿ ಅವರ ಮೇಲೆ ದಾಳಿ ಮಾಡಿದೆ, ಸ್ಥಳದಲ್ಲೇ ಅವರನ್ನು ಕೊಂದು ಹಾಕಿತ್ತು, ಹುಲಿ ಮಹಿಳೆಯ ದೇಹವನ್ನು ಸುಮಾರು 100 ಮೀಟರ್ ಎಳೆದೊಯ್ದಿದೆ ಎಂದು ಅವರು ಹೇಳಿದರು.

ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೆಲವು ವ್ಯಕ್ತಿಗಳು ಕೂಗಲಾರಂಭಿಸಿದರು, ನಂತರ ಹುಲಿ ಮಹಿಳೆಯ ದೇಹವನ್ನು ಅಲ್ಲೇ ಬಿಟ್ಟು ಸ್ಥಳದಿಂದ ಓಡಿಹೋಗಿದೆ. ನಂತರ ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬ್ರಹ್ಮಪುರಿ ಗ್ರಾಮಾಂತರ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮೈಸೂರು ಹುಲಿ ದಾಳಿ ಪ್ರಕರಣ: ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಮಾಡಿಸುವುದಾಗಿ ಭರವಸೆ ಕೊಟ್ಟ ಶಾಸಕ ದರ್ಶನ್ ಧ್ರುವನಾರಾಯಣ್

2019 ಮತ್ತು 2021 ರ ನಡುವೆ ಹುಲಿ ದಾಳಿಯಿಂದ ದೇಶದಲ್ಲಿ ಒಟ್ಟು 108 ಜನರು ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಹುಲಿ ದಾಳಿಯಿಂದ ಮನುಷ್ಯರು ಸಾಯುವ ಪ್ರಮಾಣ ಕಡಿಮೆಯಾಗಿದೆ. 2021ರಲ್ಲಿ 14 ಮಂದಿ ಸಾವನ್ನಪ್ಪಿದ್ದರು, 2019ರಲ್ಲಿ 50 ಮಂದಿ ಹುಲಿ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದರು.

2019ರಿಂದ 2021ರ ನಡುವೆ ಮಹಾರಾಷ್ಟ್ರದಲ್ಲಿ ಹುಲಿ ದಾಳಿಯಿಂದ 56 ಮಂದಿ ಮೃತಪಟ್ಟಿದ್ದಾರೆ, 2019ರಲ್ಲಿ 26, 2020ರಲ್ಲಿ 25, 2021ರಲ್ಲಿ ಐವರು ಮೃತಪಟ್ಟಿದ್ದರು. ಉತ್ತರ ಪ್ರದೇಶದಲ್ಲಿ 2019ರಲ್ಲಿ 8, 2020ರಲ್ಲಿ ನಾಲ್ಕು ಹಾಗೂ 2021ರಲ್ಲಿ ಐದು , ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ, ಅರುಣಾಚಲ ಪ್ರದೇಶ ಹಾಗೂ ಆಂಧ್ರಪ್ರದೇಶದಲ್ಲಿ ಹುಲಿ ದಾಳಿಯಿಂದ ಯಾವುದೇ ಸಾವು ಸಂಭವಿಸಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us