ಸಹಾಯಕ್ಕಾಗಿ ಕರೆ ಮಾಡಿದ್ರೆ, ಮನೆ ಲೂಟಿ ಮಾಡಿ ಮಹಿಳೆಗೆ ಕಿರುಕುಳ ಕೊಟ್ಟ ಪೊಲೀಸ್​ ಅಧಿಕಾರಿ

ಹೈದರಾಬಾದ್‌ನ ವನಸ್ಥಲಿಪುರಂನಲ್ಲಿ ಪೊಲೀಸ್ ಅಧಿಕಾರಿಯ ಕೃತ್ಯಕ್ಕೆ ಇಡೀ ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿದೆ. ಸಹಾಯ ಕೋರಿ ಕರೆ ಮಾಡಿದ್ದ ಮಹಿಳೆಗೆ ಪೊಲೀಸ್​ ಹೆಡ್​ ಕಾನ್​ಸ್ಟೆಬಲ್ ಕಿರುಕುಳ ನೀಡಿದ್ದಷ್ಟೇ ಅಲ್ಲದೆ ಮನೆಯಲ್ಲಿದ್ದ ಚಿನ್ನಾಭರಣಗಳು ದೋಚಿದ್ದಾರೆ.

ಸಹಾಯಕ್ಕಾಗಿ ಕರೆ ಮಾಡಿದ್ರೆ, ಮನೆ ಲೂಟಿ ಮಾಡಿ ಮಹಿಳೆಗೆ ಕಿರುಕುಳ ಕೊಟ್ಟ ಪೊಲೀಸ್​ ಅಧಿಕಾರಿ
ದರೋಡೆImage Credit source: locklatch
Follow us
|

Updated on: Oct 09, 2024 | 11:14 AM

ಪೊಲೀಸ್ ಅಧಿಕಾರಿಯ ಕೃತ್ಯಕ್ಕೆ ಇಡೀ ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿದೆ. ಸಹಾಯ ಕೋರಿ ಕರೆ ಮಾಡಿದ್ದ ಮಹಿಳೆಗೆ ಪೊಲೀಸ್​ ಹೆಡ್​ ಕಾನ್​ಸ್ಟೆಬಲ್ ಕಿರುಕುಳ ನೀಡಿದ್ದಷ್ಟೇ ಅಲ್ಲದೆ ಮನೆಯಲ್ಲಿದ್ದ ಚಿನ್ನಾಭರಣಗಳು ದೋಚಿದ್ದಾರೆ. ಈ ಘಟನೆ ಹೈದರಾಬಾದ್‌ನ ವನಸ್ಥಲಿಪುರಂನಲ್ಲಿ ನಡೆದಿದೆ.

ಆರೋಪಿಯ ಕಪಿಮುಷ್ಠಿಯಿಂದ ಬಿಡಿಸಿಕೊಂಡು ಹೇಗೋ ಓಡಿ ಹೋಗಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ದೂರಿನನ್ವಯ ವನಸ್ಥಲಿಪುರಂ ಠಾಣೆಯ ಪೊಲೀಸರು ಆರೋಪಿ ಹೆಡ್ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಸಾಹೇಬನಗರದ ಗಾಯತ್ರಿನಗರದಲ್ಲಿ ನಡೆದಿದೆ, ಮಹಿಳೆ ತುರ್ತು ಸಂದರ್ಭದಲ್ಲಿ ಪೊಲೀಸ್​ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಸಹಾಯ ಕೋರಿದ್ದರು. ಮಹಿಳೆಗೆ ಸಹಾಯ ಮಾಡಲು ವನಸ್ಥಲಿಪುರಂ ಪೊಲೀಸ್ ಠಾಣೆಯಿಂದ ಹೆಡ್ ಕಾನ್‌ಸ್ಟೆಬಲ್ ಜಗನ್ ಗೌರ್ ಅವರನ್ನು ಕಳುಹಿಸಲಾಗಿತ್ತು.

ಮತ್ತಷ್ಟು ಓದಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಆ್ಯಸಿಡ್​ ಎರಚಿದ ದುಷ್ಕರ್ಮಿಗಳು

ವೇಳೆ ಹೆಡ್ ಕಾನ್‌ಸ್ಟೆಬಲ್ ಜಗನ್, ಪ್ರಕರಣವನ್ನು ಇತ್ಯರ್ಥಪಡಿಸುವ ಹೆಸರಿನಲ್ಲಿ ಸಂತ್ರಸ್ತ ಮಹಿಳೆಯಿಂದ ನಗದು ಮತ್ತು ಚಿನ್ನಾಭರಣ ಪಡೆದಿದ್ದರು, ಇದನ್ನು ವಿರೋಧಿಸಿ ಮಹಿಳೆ ಪ್ರತಿಭಟನೆ ನಡೆಸಿದಾಗ ಆರೋಪಿ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಆರೋಪಿ ಸಂತ್ರಸ್ತೆಯನ್ನು ತನ್ನ ಕಾರಿನಲ್ಲಿ ಕೂರಿಸಿಕೊಂಡು ನಿರ್ಜನ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದು, ಈ ಸಂದರ್ಭ ಸಂತ್ರಸ್ತೆ ತಪ್ಪಿಸಿಕೊಂಡು ಬಂದು ಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿ ಹೆಡ್ ಕಾನ್‌ಸ್ಟೆಬಲ್ ವಿರುದ್ಧ ಪೊಲೀಸರಿಗೆ ಮಹಿಳೆ ಲಿಖಿತ ದೂರು ನೀಡಿದ್ದಾಳೆ.ವನಸ್ಥಲಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ರೆಡ್ಡಿ ಪ್ರಕಾರ, ಸಂತ್ರಸ್ತೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಆರೋಪದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್‌ಸ್ಪೆಕ್ಟರ್ ಪ್ರಕಾರ, ಯಾವುದೇ ಸಂಗತಿಗಳು ಬೆಳಕಿಗೆ ಬಂದರೂ ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್