AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಯ್ತು, ಮರುದಿನವೇ ರದ್ದಾಯ್ತು, ಗಂಡನ ಬಿಟ್ಟು ಪ್ರೇಮಿಯನ್ನು ಆರಿಸಿಕೊಂಡ ನವ ವಧು

ಮದುವೆಯಾದ ಮರುದಿನವೇ ಹಮೀರ್‌ಪುರದಲ್ಲಿ ಮಹಿಳೆಯೊಬ್ಬರು ತನ್ನ ಗಂಡನನ್ನು ಬಿಟ್ಟು ಪ್ರೇಮಿಯೊಂದಿಗೆ ಬದುಕಲು ನಿರ್ಧರಿಸಿದ ಆಘಾತಕಾರಿ ಘಟನೆ ಇದು. ಕುಟುಂಬದ ಒತ್ತಡದಿಂದ ಮದುವೆಯಾಗಿದ್ದರೂ, ಪೊಲೀಸ್ ಠಾಣೆಗೆ ತೆರಳಿ ತನ್ನ ಪ್ರೇಮಿಯೊಂದಿಗೆ ಬದುಕುವುದಾಗಿ ತಿಳಿಸಿದ್ದಾರೆ. ಎರಡೂ ಕುಟುಂಬಗಳ ಕೌನ್ಸೆಲಿಂಗ್ ನಂತರ, ವಿವಾಹವನ್ನು ಪರಸ್ಪರ ಒಪ್ಪಿಗೆಯ ಮೂಲಕ ರದ್ದುಪಡಿಸಲಾಯಿತು, ವಧು ತನ್ನ ಕುಟುಂಬದೊಂದಿಗೆ ಮರಳಿದರು.

ಮದುವೆ ಆಯ್ತು, ಮರುದಿನವೇ ರದ್ದಾಯ್ತು, ಗಂಡನ ಬಿಟ್ಟು ಪ್ರೇಮಿಯನ್ನು ಆರಿಸಿಕೊಂಡ ನವ ವಧು
ಉತ್ತರ ಪ್ರದೇಶ ದಂಪತಿ
ನಯನಾ ರಾಜೀವ್
|

Updated on: Feb 25, 2026 | 8:06 AM

Share

ಹಮೀರ್​ಪುರ, ಫೆಬ್ರವರಿ 25: ಮದುವೆ ಎಂಬುದು ಮಕ್ಕಳಾಟವಲ್ಲ, ಇತ್ತೀಚಿನ ದಿನಗಳಲ್ಲಿ ಯಾರನ್ನೋ ಇಷ್ಟ ಪಟ್ಟು ಇನ್ಯಾರನ್ನೋ ಮದುವೆ(Marriage)ಯಾಗಿ, ಬಳಿಕ ಗಂಡನನ್ನು ಕೊಲೆ ಮಾಡಿಸುವ ಪ್ರಕರಣಗಳು ಸಾಕಷ್ಟು ನಮ್ಮ ಕಣ್ಣಮುಂಣದಿವೆ. ಇಲ್ಲೊಬ್ಬ ಮಹಿಳೆ ಮದುವೆಯ ಮರುದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪತಿ ಬಿಟ್ಟು ಪ್ರೇಮಿಯೊಂದಿಗೆ ಬದುಕುವುದಾಗಿ ಹೇಳಿದ್ದಾಳೆ.

ಮದುವೆಯಾದ ಮರುದಿನವೇ ಮಹಿಳೆ ಗಂಡನ ಬಿಟ್ಟು ಪ್ರೇಮಿಯ ಜತೆ ಬದುಕುವುದಾಗಿ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ನಡೆದಿದೆ. ಮದುವೆಯಾದ ಮರುದಿನ ಬೆಳಿಗ್ಗೆ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ಬದಲು ತನ್ನ ಪ್ರೇಮಿಯೊಂದಿಗೆ ವಾಸಿಸಲು ಬಯಸುವುದಾಗಿ ಹೇಳಿದ್ದು, ಕೆಲವೇ ಗಂಟೆಗಳಲ್ಲಿ ವಿವಾಹ ಕೊನೆಗೊಂಡಿತ್ತು.

ಮಂಗಳವಾರ ತಡರಾತ್ರಿ ವಿವಾಹವಾದ ಮಹಿಳೆಯನ್ನು ಪತಿಯ ಮನೆಗೆ ಕರೆದೊಯ್ಯಲಾಯಿತು, ಆದರೆ ಮದುವೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿ ಬೆಳಗಿನ ಜಾವ ಪೊಲೀಸ್ ಠಾಣೆಗೆ ತೆರಳಿದ್ದರು ಎನ್ನಲಾಗಿದೆ. ಅಲ್ಲಿ, ಕುಟುಂಬದ ಒತ್ತಡದಿಂದ ತನ್ನ ಮೇಲೆ ಬಲವಂತವಾಗಿ ಮದುವೆ ಮಾಡಲಾಗಿದೆ ಮತ್ತು ಬದಲಿಗೆ ತನ್ನ ಪ್ರೇಮಿಯೊಂದಿಗೆ ವಾಸಿಸಲು ಬಯಸಿರುವುದಾಗಿ ಆಕೆ ಅಧಿಕಾರಿಗಳಿಗೆ ಹೇಳಿದ್ದಾಳೆ.

ಪೊಲೀಸರು ಎರಡೂ ಕುಟುಂಬಗಳನ್ನು ಠಾಣೆಗೆ ಕರೆಸಿ ಹಲವಾರು ಗಂಟೆಗಳ ಕಾಲ ಕೌನ್ಸೆಲಿಂಗ್ ನಡೆಸಿದರು. ರಾಜಿ ಮಾಡಿಕೊಳ್ಳುವ ಪ್ರಯತ್ನಗಳ ಬಿಟ್ಟು, ಮಹಿಳೆ ತನ್ನ ನಿರ್ಧಾರದ ಬಗ್ಗೆ ದೃಢವಾಗಿ ನಿಂತಿದ್ದಳು. ಯಾವುದೇ ಹಿಂದಿನ ಸಂಬಂಧದ ಬಗ್ಗೆ ತಿಳಿದಿರಲಿಲ್ಲ ಮತ್ತು ಅವಳ ಇಚ್ಛೆ ಮೊದಲೇ ತಿಳಿದಿದ್ದರೆ ಈ ಮದುವೆಯೇ ಆಗುತ್ತಿರಲಿಲ್ಲ ಎಂದು ವರ ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಸೆಮಣೆ ಏರಬೇಕಿದ್ದ ದಿನವೇ ಇಬ್ಬರು ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ

ಒಟ್ಟಿಗೆ ಬಾಳುವ  ಯಾವುದೇ ಸಾಧ್ಯತೆ ಇಲ್ಲದ ಕಾರಣ, ಎರಡೂ ಕಡೆಯವರು ಅದೇ ದಿನ ಪರಸ್ಪರ ಒಪ್ಪಿಗೆಯ ಮೂಲಕ ಬೇರೆಯಾಗಲು ಒಪ್ಪಿಕೊಂಡರು. ಮಹಿಳೆ ತನ್ನ ಕುಟುಂಬದೊಂದಿಗೆ ಹಿಂತಿರುಗಿದಳು, ಆದರೆ ವರನ ಕುಟುಂಬವು ಔಪಚಾರಿಕವಾಗಿ ಮದುವೆ ರದ್ದು ಮಾಡಲು ಕ್ರಮಗಳನ್ನು ಪ್ರಾರಂಭಿಸಿತು. ಎರಡೂ ಕಡೆಯವರು ಬೇರೆಯಾಗಲು ಒಪ್ಪಿಕೊಂಡಿದ್ದಾರೆ. ಮಹಿಳೆ ತನ್ನ ಕುಟುಂಬದೊಂದಿಗೆ ಹಿಂತಿರುಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!