Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ
ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆರೋಪಿ ಶಂಕರ್ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ದೆಹಲಿ: ನವೆಂಬರ್ 26ರಂದು ಏರ್ ಇಂಡಿಯಾ (Air India) ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆರೋಪಿ ಶಂಕರ್ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ಪಟಿಯಾಲ ಹೌಸ್ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಪಟಿಯಾಲ ಹೌಸ್ ಕೋರ್ಟ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಿನ್ನೆ ರಾತ್ರಿ ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಶಂಕರ್ ಮಿಶ್ರಾನನ್ನು ಬಂಧಿಸಿದ್ದಾರೆ. ನವೆಂಬರ್ 26 ರಂದು ಕುಡಿದ ಅಮಲಿನಲ್ಲಿ ವಿಮಾನದಲ್ಲಿ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಮಿಶ್ರಾ ಅವರ ವಕೀಲರು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದರು, ಇದು ಜನವರಿ 11 ರಂದು ವಿಚಾರಣೆಗೆ ಬರಲಿದೆ. ಆರೋಪಿಯ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚಲಾಗಿದೆ ಮತ್ತು ಅವರು ಬೆಂಗಳೂರಿನಲ್ಲಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ. ಮಿಶ್ರಾ ಅವರ ಕೆಲಸದ ಸ್ಥಳದಲ್ಲಿಯೂ ಪತ್ತೆಯಾಗಿಲ್ಲ ಮತ್ತು ಅವರು ಉದ್ದೇಶಪೂರ್ವಕವಾಗಿ ತನಿಖೆಗೆ ಬರುತ್ತಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿತು.
Air India passenger urinating case of Nov 26, 2022 | Delhi’s Patiala House Court sends accused Shankar Mishra to 14 days judicial custody pic.twitter.com/3Kfpl8dTz8
— ANI (@ANI) January 7, 2023
ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಶಂಕರ್ ಮಿಶ್ರಾ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಸಫ್ದರ್ ಜಂಗ್ ಆಸ್ಪತ್ರೆಗೆ ಕರೆತರಲಾಗಿತ್ತು. ಶಂಕರ್ ಪದೇ ಪದೇ ಸ್ಥಳ ಬದಲಾಯಿಸುವ ಮೂಲಕ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ದೆಹಲಿ ಪೊಲೀಸರು ಆತನನ್ನು ಬಂಧಿಸಿದ್ದಲ್ಲದೆ, ಘಟನೆಯ ಬಗ್ಗೆ ಮುಜುಗರಕ್ಕೊಳಗಾದ ನಂತರ ಯುಎಸ್ ಮೂಲದ ಸಂಸ್ಥೆ ವೆಲ್ಸ್ ಫಾರ್ಗೋ ಅವರನ್ನು ಕೆಲಸದಿಂದ ವಜಾಗೊಳಿಸಿದೆ.
ಇದನ್ನು ಓದಿ:Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ವಿಮಾನದಲ್ಲಿ ನಡೆದದ್ದೇನು?
ನ್ಯೂಯಾರ್ಕ್‌ನಿಂದ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತಿನಲ್ಲಿ ಪ್ಯಾಂಟ್ ಅನ್ನು ಬಿಚ್ಚಿ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಪ್ರತ್ಯಕ್ಷದರ್ಶಿಗಳ ವರದಿಗಳು ಮತ್ತು ಹೇಳಿಕೆಗಳ ಪ್ರಕಾರ, ಆ ವ್ಯಕ್ತಿ ಮತ್ತೆ ಅಲ್ಲಿ ನಿಂತಿದ್ದರು, ಅವರನ್ನು ಅಲ್ಲಿಂದ ಇತರ ಪ್ರಯಾಣಿಕರು ಅಲ್ಲಿಂದ ತೆರಳುವಂತೆ ಕೇಳಿಕೊಂಡ ನಂತರ ಅಲ್ಲಿಂದ ಹೋಗಿದ್ದಾರೆ.
ಈ ವಿಷಯವನ್ನು ಸಿಬ್ಬಂದಿಯ ಗಮನಕ್ಕೆ ತಂದರು ಯಾವುದೇ ಪರಿಣಾಮಕಾರಿ ಪ್ರತಿಕ್ರಿಯೆ ಬಂದಿರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ, ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದಿದ್ದಾರೆ. ಜನವರಿ 4ರಂದು ಆಕೆ ಶಂಕರ್ ಮಿಶ್ರಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು, ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಮಿಶ್ರಾ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಆರೋಪ ಹೊರಿಸಲಾಗಿದ್ದು, ಅವರು 30 ದಿನಗಳ ಕಾಲ ವಿಮಾನಯಾನದೊಂದಿಗೆ ಹಾರಾಟ ನಡೆಸದಂತೆ ನಿರ್ಬಂಧಿಸಲಾಗಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಏರ್ ಇಂಡಿಯಾ ಮತ್ತು ಆ ವಿಮಾನದಲ್ಲಿದ್ದ ಸಿಬ್ಬಂದಿಗೆ ನೋಟಿಸ್ ನೀಡಿದೆ ಮತ್ತು ಅವರ ನಡವಳಿಕೆಯನ್ನು ‘ವೃತ್ತಿಪರವಲ್ಲ’ ಎಂದು ಹೇಳಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:15 pm, Sat, 7 January 23