
ನೋಯ್ಡಾ, ಡಿಸೆಂಬರ್ 29: ನೋಯ್ಡಾದ ಕಸದ ತೊಟ್ಟಿಯಲ್ಲಿ ಯುವತಿಯ ಶವ(Dead Body) ಪತ್ತೆಯಾಗಿದೆ. ಆಕೆಯನ್ನು ಬೇರೆ ಕಡೆ ಕೊಲೆ ಮಾಡಿ ನಂತರ ಅಲ್ಲಿ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕೈಕಾಲುಗಳನ್ನು ಕಟ್ಟಲಾಗಿತ್ತು, ಮುಖದಲ್ಲಿ ಸುಟ್ಟ ಗುರುತುಗಳಿದ್ದವು. ಕಸದ ರಾಶಿಯ ನಡುವೆ ಚೀಲದೊಳಗೆ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಲಾಗಿತ್ತು ಮತ್ತು ಮುಖದ ಮೇಲೆ ಸುಟ್ಟ ಗುರುತುಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಚೀಲವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸ್ ಠಾಣೆಯ ತಂಡವೊಂದು ಸ್ಥಳಕ್ಕೆ ತಲುಪಿತು. ವಿಧಿವಿಜ್ಞಾನ ತಂಡ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಹ ಸ್ಥಳಕ್ಕೆ ಕರೆಸಲಾಯಿತು. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.
ಪೊಲೀಸರ ಪ್ರಕಾರ, ಮೃತ ಮಹಿಳೆ ಸುಮಾರು 22 ರಿಂದ 25 ವರ್ಷ ವಯಸ್ಸಿನವರಾಗಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಆಕೆಯ ಗುರುತು ಇನ್ನೂ ದೃಢಪಟ್ಟಿಲ್ಲ. ಮೃತದೇಹವನ್ನು ಎಲ್ಲಿಂದ ತರಲಾಯಿತು ಮತ್ತು ಯಾವ ಸಂದರ್ಭಗಳಲ್ಲಿ ಸ್ಥಳದಲ್ಲಿ ಎಸೆಯಲಾಯಿತು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಮತ್ತಷ್ಟು ಓದಿ: ವರದಕ್ಷಿಣೆಗಾಗಿ ಮಗಳ ಕೊಲೆ, ಆಕೆಯ ಶವ ನೋಡಿ ಪ್ರಾಣಬಿಟ್ಟ ತಾಯಿ
ಡಂಪಿಂಗ್ ಯಾರ್ಡ್ ಒಳಗೆ ಶನಿವಾರ ಅಪರಿಚಿತ ಮಹಿಳೆಯ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಮಹಿಳೆಯ ಗುರುತನ್ನು ಸ್ಥಾಪಿಸಲು ತಂಡವನ್ನು ರಚಿಸಲಾಗಿದೆ. ಅದಕ್ಕೆ ಅನುಗುಣವಾಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ತನಿಖೆಯ ಭಾಗವಾಗಿ ಹತ್ತಿರದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಕಾಣೆಯಾದ ವ್ಯಕ್ತಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಸಂಭಾವ್ಯ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ