ತಮಿಳುನಾಡಿನ ಪಳನಿಯಲ್ಲಿ ಕೇರಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ‘ನಿರ್ಭಯಾ’ ಪ್ರಕರಣದಂತೆ ಪೈಶಾಚಿಕ ಕೃತ್ಯವೆಸಗಿದ ದುಷ್ಕರ್ಮಿಗಳು

ಘಟನೆ ನಡೆದಾಗ ದಂಪತಿಗಳು ದಿಂಡಿಗಲ್ ಜಿಲ್ಲೆಯ ಪಳನಿ ಪ್ರದೇಶದ ಲಾಡ್ಜ್‌ನಲ್ಲಿ ತಂಗಿದ್ದರು ಎಂದು ವರದಿಯಾಗಿದೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹೇಳಿದ್ದಾರೆ. ಆದರೆ ನಮಗೆ ಈ ರೀತಿಯ ಯಾವುದೇ ದೂರು ಸಿಕ್ಕಿಲ್ಲ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ತಮಿಳುನಾಡಿನ ಪಳನಿಯಲ್ಲಿ ಕೇರಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ‘ನಿರ್ಭಯಾ’ ಪ್ರಕರಣದಂತೆ ಪೈಶಾಚಿಕ ಕೃತ್ಯವೆಸಗಿದ ದುಷ್ಕರ್ಮಿಗಳು
ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳನ್ನ ಬಂಧಿಸಿದ ಬಾಣಸವಾಡಿ ಪೊಲೀಸರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 12, 2021 | 4:07 PM

ತಿರುವನಂತಪುರಂ: ಕೇರಳದ 40 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ವರದಿಯಾಗಿದೆ . ಜೂನ್ 30 ರಂದು ಮಹಿಳೆ ಮತ್ತು ಆಕೆಯ ಪತಿ ತಮಿಳುನಾಡಿನ ಪ್ರಸಿದ್ಧ ಪಳನಿಯ ಬೆಟ್ಟದ ದೇಗುಲಕ್ಕೆ ಭೇಟಿ ನೀಡಿದ್ದಾಗ ಈ ದುಷ್ಕೃತ್ಯ ನಡೆದಿದೆ.

ಘಟನೆ ನಡೆದಾಗ ದಂಪತಿಗಳು ದಿಂಡಿಗಲ್ ಜಿಲ್ಲೆಯ ಪಳನಿ ಪ್ರದೇಶದ ಲಾಡ್ಜ್‌ನಲ್ಲಿ ತಂಗಿದ್ದರು ಎಂದು ವರದಿಯಾಗಿದೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹೇಳಿದ್ದಾರೆ. ಆದರೆ ನಮಗೆ ಈ ರೀತಿಯ ಯಾವುದೇ ದೂರು ಸಿಕ್ಕಿಲ್ಲ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತ ಮಹಿಳೆ ಮತ್ತು ಆಕೆಯ ಪತಿ ತಮಿಳುನಾಡು ಮೂಲದವರಾಗಿದ್ದು, ಈ ದಂಪತಿ ಉದ್ಯೋಗ ನಿಮಿತ್ತ ಕಣ್ಣೂರಿನಲ್ಲಿ ವಾಸವಾಗಿದ್ದಾರೆ. ಪತಿ ಆಹಾರ ತರಲು ಹೊರಟಿದ್ದಾಗ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ದೂರು ನೀಡಿದ್ದಾರೆ. ಆರಂಭಿಕ ತನಿಖೆಯ ಪ್ರಕಾರ ಮಹಿಳೆ ಮತ್ತು ಪತಿ ಪಳನಿಗೆ ತೀರ್ಥಯಾತ್ರೆ ಮಾಡುತ್ತಿದ್ದರು. ಮಹಿಳೆಯ ಪತಿ ಆಹಾರ ತರಲು ಹೊರಟಿದ್ದಾಗ ಲಾಡ್ಜ್ನ ವ್ಯವಸ್ಥಾಪಕ ಸೇರಿದಂತೆ ಪುರುಷರ ಗುಂಪು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ, ಆರೋಪಿ ಮಹಿಳೆಯನ್ನು ಹಿಂಸಿಸಿದ್ದಾನೆ ಮತ್ತು ಅವಳ ಖಾಸಗಿ ಭಾಗಗಳಲ್ಲಿ ಬಿಯರ್ ಬಾಟಲಿಗಳನ್ನು ತುರುಕಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪತಿ ಲಾಡ್ಜ್‌ಗೆ ಹಿಂತಿರುಗಿದಾಗ ಆತನನ್ನು ಆರೋಪಿಗಳು ಥಳಿಸಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿದೆ. ಈ ಪ್ರಕರಣದ ತನಿಖಾಧಿಕಾರಿಯಾಗಿರುವ ತಲಶ್ಶೇರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) “ನಾನು ಕಣ್ಣೂರಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವರದಿ ಪರಿಶೀಲಿಸಿದ್ದೇನೆ. ಆದರೆ ಅದರ ಆಧಾರದ ಮೇಲೆ ಯಾವುದೇ ಗಾಯಗಳಿಲ್ಲ. ದೂರುದಾರರ ಪ್ರಕಾರ, ಜೂನ್ 20 ರಂದು ಆಪಾದಿತ ಘಟನೆ ನಡೆದಿದ್ದರಿಂದ, ಗಾಯಗಳು ಸಹ ಗುಣವಾಗಬಹುದಿತ್ತು.

ಕಣ್ಣೂರಿನಲ್ಲಿ ಪೊಲೀಸರನ್ನು ಸಂಪರ್ಕಿಸಿದ್ದೇನೆ ಆದರೆ ಅವರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಪರಿಯಾರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ದ ಬಿಎಂಆರ್ಸಿಎಲ್ ದಂಡಾಸ್ತ್ರ ಪ್ರಯೋಗ: ನಿತ್ಯ ಎಷ್ಟೆಷ್ಟು ದಂಡ ಸಂಗ್ರಹ?

(Woman from Kerala was allegedly gang-raped and brutalised by a group of men in Palani Tamil Nadu)

Published On - 4:05 pm, Mon, 12 July 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ