AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶ: ಹನಿಮೂನ್​​​ಗೆ ಗೋವಾ ಬದಲು ಅಯೋಧ್ಯೆಗೆ ಕರೆದೊಯ್ದ ಪತಿ; ವಿಚ್ಛೇದನ ಕೋರಿದ ಪತ್ನಿ

ಫ್ರೀ ಪ್ರೆಸ್ ಜರ್ನಲ್‌ನ ವರದಿಯ ಪ್ರಕಾರ, ದಂಪತಿ ತಮ್ಮ ಪ್ರವಾಸದಿಂದ ಹಿಂದಿರುಗಿದ 10 ದಿನಗಳ ನಂತರ, ಜನವರಿ 19 ರಂದು ಭೋಪಾಲ್ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.. ತನ್ನ ಪತಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದಾರೆ ಎಂದು ಮಹಿಳೆ ವಿಚ್ಛೇದನ ಅರ್ಜಿಯಲ್ಲಿ ತಿಳಿಸಿದ್ದಾರೆ. ಆದರೆ ಅಯೋಧ್ಯೆಯನ್ನೇ ಹನಿಮೂನ್​​ಗಾಗಿ ಆಯ್ಕೆ ಮಾಡಿದ್ದೇಕೆ? ಮಹಿಳೆ ಕೊಟ್ಟ ಕಾರಣ ಈ ರೀತಿ ಇದೆ.

ಮಧ್ಯ ಪ್ರದೇಶ: ಹನಿಮೂನ್​​​ಗೆ ಗೋವಾ ಬದಲು ಅಯೋಧ್ಯೆಗೆ ಕರೆದೊಯ್ದ ಪತಿ; ವಿಚ್ಛೇದನ ಕೋರಿದ ಪತ್ನಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Jan 25, 2024 | 2:06 PM

Share

ದೆಹಲಿ ಜನವರಿ 25: ಮಧ್ಯಪ್ರದೇಶದ (Madhya pradesh) ಮಹಿಳೆಯೊಬ್ಬರು ವಿವಾಹವಾದ ಐದು ತಿಂಗಳ ನಂತರ ಪತಿಯಿಂದ ವಿಚ್ಛೇದನ (Divorce) ಕೋರಿದ್ದಾರೆ. ಈ ವಿಚ್ಛೇದನಕ್ಕೆ ಕಾರಣ ಆಕೆಯ ಪತಿ ಹನಿಮೂನ್​​ಗಾಗಿ ಅಯೋಧ್ಯೆಗೆ (Ayodhya)ಕರೆದೊಯ್ದಿದ್ದು. ಮಹಿಳೆಯ ಪ್ರಕಾರ ಆಕೆಯ ಪತಿ ಹನಿಮೂನ್​​ಗೆ ಗೋವಾ(Goa) ಹೋಗುವುದಾಗಿ ಭರವಸೆ ನೀಡಿದ್ದರು. ಆದರೆ ಆ ಪ್ಲಾನ್ ಬದಲಿಸಿ ಆಕೆಯನ್ನ ಅಯೋಧ್ಯೆ, ವಾರಣಾಸಿಗೆ ಕರೆದೊಯ್ದಿದ್ದಾರೆ.

ಫ್ರೀ ಪ್ರೆಸ್ ಜರ್ನಲ್‌ನ ವರದಿಯ ಪ್ರಕಾರ, ದಂಪತಿ ತಮ್ಮ ಪ್ರವಾಸದಿಂದ ಹಿಂದಿರುಗಿದ 10 ದಿನಗಳ ನಂತರ, ಜನವರಿ 19 ರಂದು ಭೋಪಾಲ್ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತನ್ನ ಪತಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದಾರೆ ಎಂದು ಮಹಿಳೆ ವಿಚ್ಛೇದನ ಅರ್ಜಿಯಲ್ಲಿ ತಿಳಿಸಿದ್ದಾರೆ. ಆಕೆಯೂ ದುಡಿಯುವ ಮಹಿಳೆ, ಚೆನ್ನಾಗಿ ಸಂಪಾದಿಸುತ್ತಾಳೆ. ಹೀಗಿರುವಾಗ ಹನಿಮೂನ್​​ಗೆ ವಿದೇಶಕ್ಕೆ ಹೋಗುವುದು ಅವರಿಗೆ ದೊಡ್ಡ ವಿಷಯವಾಗಿರಲಿಲ್ಲ.

ಯಾವುದೇ ಹಣಕಾಸಿನ ತೊಂದರೆ ಇಲ್ಲದಿದ್ದರೂ, ಮಹಿಳೆಯ ಪತಿ ಅವಳನ್ನು ವಿದೇಶಕ್ಕೆ ಕರೆದೊಯ್ಯಲು ನಿರಾಕರಿಸಿದ್ದು, ಭಾರತದಲ್ಲಿಯೇ ಒಂದು ಸ್ಥಳಕ್ಕೆ ಭೇಟಿ ನೀಡುವಂತೆ ಒತ್ತಾಯಿಸುತ್ತಿದ್ದ. ತಮ್ಮ ಹೆತ್ತವರನ್ನು ನೋಡಿಕೊಳ್ಳಬೇಕು ಎಂದು ಆತ ಹೇಳಿದ್ದ. ನಂತರ ಈ ದಂಪತಿ ತಮ್ಮ ಹನಿಮೂನ್‌ಗಾಗಿ ಗೋವಾ ಅಥವಾ ದಕ್ಷಿಣ ಭಾರತಕ್ಕೆ ಭೇಟಿ ನೀಡುವ ವಿಷಯದಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿದ್ದರು.

ಆದಾಗ್ಯೂ, ಆತ ತನ್ನ ಹೆಂಡತಿಗೆ ಹೇಳದೆಯೇ ಅಯೋಧ್ಯೆ ಮತ್ತು ವಾರಣಾಸಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದು ಬದಲಾದ ಪ್ರಯಾಣದ ಯೋಜನೆಗಳ ಬಗ್ಗೆ ಪತ್ನಿಗೆ ಒಂದು ದಿನದ ಮುಂಚೆ ತಿಳಿಸಿದ್ದರು. ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದ ಮೊದಲು ತಮ್ಮ ತಾಯಿ ನಗರಕ್ಕೆ ಭೇಟಿ ನೀಡಲು ಬಯಸಿದ್ದರಿಂದ ನಾವು ಅಯೋಧ್ಯೆಗೆ ಹೋಗುತ್ತಿದ್ದೇವೆ ಎಂದು ಹೇಳಿ ಇವರು ಪ್ರವಾಸ ಹೊರಟಿದ್ದರು.

ಆ ಸಮಯದಲ್ಲಿ ಪತ್ನಿ ಪ್ರವಾಸಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಮತ್ತು ಯಾವುದೇ ತಕರಾರು ಮಾಡದೆ ಗಂಡನ ಜತೆ ಹೊರಟಿದ್ದರು. ಆದರೆ, ಯಾತ್ರಾ ಸ್ಥಳಗಳಿಂದ ಹಿಂತಿರುಗಿದ ಕೂಡಲೇ ಆಕೆ ತನ್ನ ಪತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದನ್ನೂ ಓದಿರಾಮನ ವಿಗ್ರಹ ಅರ್ಪಿಸಿ ಅಯೋಧ್ಯೆಯಿಂದ ಬೆಂಗಳೂರಿಗೆ ಬಂದ ಅರುಣ್ ಯೋಗಿರಾಜ್​ಗೆ ಭವ್ಯ ಸ್ವಾಗತ

ತನ್ನ ಪತಿ ತನ್ನ ಕುಟುಂಬ ಸದಸ್ಯರಿಗೆ ತನಗಿಂತ ಹೆಚ್ಚು ಕಾಳಜಿ ತೋರುತ್ತಿದ್ದಾರೆ ಎಂದು ಆಕೆ ಹೇಳಿಕೆಯಲ್ಲಿ ಹೇಳಿಕೊಂಡಿದ್ದಾಳೆ. ಇದೇ ವೇಳೆ ಪತ್ನಿ ಸುಮ್ಮನೆ ಗಲಾಟೆ ಮಾಡುತ್ತಿದ್ದಾಳೆ ಎಂದು ಪತಿ ದೂರಿದ್ದಾರೆ. ಸದ್ಯ ದಂಪತಿಗೆ ಭೋಪಾಲ್ ಕೌಟುಂಬಿಕ ನ್ಯಾಯಾಲಯದಲ್ಲಿ ಕೌನ್ಸೆಲಿಂಗ್ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ