ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು

Crime News: ನನ್ನ ತಲೆಗೆ ಬಂದೂಕು ಹಿಡಿದು, ಇಬ್ಬರು ಅತ್ಯಾಚಾರ ಮಾಡಿದರು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ. 

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಪತಿ ಹೆದರಿ ಓಡಿ ಹೋಗಿದ್ದ, ಮಕ್ಕಳು ಕಂಗಾಲಾಗಿ ನೋಡುತ್ತಲೇ ಇದ್ದರು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Mar 20, 2022 | 12:55 PM

ರಾಜಸ್ಥಾನದಲ್ಲಿ (Rajasthan Crime News) 26ವರ್ಷದ ದಲಿತ ಮಹಿಳೆಯನ್ನು ಆಕೆಯ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಧೋಲ್​​ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಬಂದೂಕಿನ ಗುರಿಯಿಟ್ಟು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ಕಾಂಚನ್​​ಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಗಳವಾರ ಸಂಜೆ 6ಗಂಟೆಯ ಹೊತ್ತಿಗೆ ನಾನು ಹೊಲದಿಂದ ನನ್ನ ಪತಿ ಮತ್ತು ಮಕ್ಕಳೊಂದಿಗೆ ವಾಪಸ್ ಹೊರಟಿದ್ದೆ. ಈ ವೇಳೆ ಆರು ಮಂದಿ ನಮ್ಮನ್ನು ತಡೆದರು. ಮೊದಲು ನನ್ನ ಪತಿಗೆ ಹೊಡೆದರು. ಪಿಸ್ತೂಲ್​​ನಿಂದಲೂ ಏಟು ಕೊಟ್ಟರು. ಆತ ತನ್ನ ಜೀವರಕ್ಷಣೆಗಾಗಿ ಓಡಿ ಹೋದ. ನಂತರ ನನಗೂ ಪಿಸ್ತೂಲ್​ ತೋರಿಸಿ ಕೊಲೆ ಮಾಡುವುದಾಗಿ ಹೆದರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇವರೆಲ್ಲ ನಮ್ಮ ಹಳ್ಳಿಯ ಅಕ್ಕಪಕ್ಕದವರೇ ಆಗಿದ್ದಾರೆ ಎಂದೂ ಹೇಳಿದ್ದಾರೆ. 

ಲಾಲು, ಧನ್ ಸಿಂಗ್​, ವಿಪಿನ್​ ಮೋಹಿತ್​, ಸಚಿನ್​ ಮತ್ತು ಲೋಕೇಂದ್ರ ಸಿಂಗ್ ಠಾಕೂರ್​ ಎಂಬುವರು ಸೇರಿ ತನ್ನ ಪತಿ ಮತ್ತು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಲಾಲು ಮತ್ತು ಧನ್​ಸಿಂಗ್​ ನನ್ನ ಮೇಲೆ ರೇಪ್​ ಮಾಡಿದ್ದಾರೆ. ಈ ವೇಳೆ ನನ್ನ ತಲೆಗೆ ಬಂದೂಕು ಹಿಡಿಯಲಾಗಿತ್ತು. ಅಲ್ಲೇ ನನ್ನ ಮಕ್ಕಳೂ ಇದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.  ಪ್ರಕರಣದ ಬಗ್ಗೆ ಧೋಲ್​​ಪುರ ವೃತ್ತ ನಿರೀಕ್ಷಕ ಅಧಿಕಾರಿ ವಿಜಯ್​ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರ ವರದಿ ಬರಬೇಕು. ನಂತರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಮಹಿಳೆ ಆರೋಪ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇದು ಭೂಮಿ ವಿವಾದದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂಬ ಬಲವಾದ ಅನುಮಾನವಿದೆ. ಈ ಮಹಿಳೆಯ ಪತಿ ಮತ್ತು ಆರೋಪಿಗಳ ಮಧ್ಯೆ ಜಮೀನು ವಿಚಾರಕ್ಕೆ ಗಲಾಟೆ ನಡೆದಿತ್ತು. ಅದೇ ಸಿಟ್ಟಿನಲ್ಲಿ ಆರೋಪಿಗಳು ಮಹಿಳೆಯನ್ನು ಟಾರ್ಗೆಟ್​ ಮಾಡಿದ್ದಾರೆ. ಆದರೆ ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆಯಾದ ವಿನಃ ಸ್ಪಷ್ಟವಾಗಿ ಹೇಳಲಾಗದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್