ಬಸ್ಸಿನಲ್ಲಿ ಹೋಗುತ್ತಿರುವಾಗಲೇ ಕಾಣಿಸಿಕೊಂಡ ಹೆರಿಗೆ ನೋವು, ಅಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಮಹಿಳೆಯೊಬ್ಬರು ಬಸ್​ನಲ್ಲಿ ಜನ್ಮ ನೀಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಹಿಳೆ ತ್ರಿಶೂರ್​ನಿಂದ ತೊಟ್ಟಿಲ್‌ಪಾಲಮ್‌ಗೆ ಹೊರಟಿದ್ದರು, ಮಾರ್ಗಮಧ್ಯೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಬಸ್​ ಡ್ರೈವರ್ ಬಸ್ಸನ್ನು ಮಾರ್ಗ ಬದಲಾಯಿಸಿ ಆಸ್ಪತ್ರೆ ಕಡೆಗೆ ಓಡಿಸಿದ್ದಾರೆ.

ಬಸ್ಸಿನಲ್ಲಿ ಹೋಗುತ್ತಿರುವಾಗಲೇ ಕಾಣಿಸಿಕೊಂಡ ಹೆರಿಗೆ ನೋವು, ಅಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಬಸ್Image Credit source: India Today
Follow us
ನಯನಾ ರಾಜೀವ್
|

Updated on: May 30, 2024 | 7:53 AM

ತುಂಬು ಗರ್ಭಿಣಿ(Pregnant)ಯೊಬ್ಬರು ತ್ರಿಶೂರ್​ನಿಂದ ಕೋಳಿಕ್ಕೋಡ್​ಗೆ ಬಸ್​ನಲ್ಲಿ ಪತಿಯೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ತೊಟ್ಟಿಲ್‌ಪಾಲಮ್‌ಗೆ ಪ್ರಯಾಣಿಸುತ್ತಿದ್ದಾಗ ನೋವು ಹೆಚ್ಚಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೆರಿಗೆ ಮಾಡಿಸಲಾಗಿದೆ. ಬಸ್ ಪೆರಮಂಗಲಂ ಮೂಲಕ ಹಾದು ಹೋಗುವಾಗ ಮಹಿಳೆಗೆ ಹೆರಿಗೆ ನೋವು ಜೋರಾಗಿತ್ತು.

ಬಸ್ ತ್ರಿಶೂರ್ ಜಿಲ್ಲೆಯ ಪೆರಮಂಗಲಂ ದಾಟುತ್ತಿದ್ದಂತೆ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು. ತ್ವರಿತವಾಗಿ ಯೋಚಿಸಿದ ಬಸ್ ಚಾಲಕ ತಕ್ಷಣ ಮಾರ್ಗವನ್ನು ಬದಲಿಸಿ ಅಮಲಾ ಆಸ್ಪತ್ರೆಯ ಕಡೆಗೆ ಹೊರಟರು. ಕೂಡಲೇ ಹೆರಿಗೆ ಬಗ್ಗೆ ಬಸ್ ಸಿಬ್ಬಂದಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ.

ಅಷ್ಟೊತ್ತಿಗಾಗಲೇ ಮಹಿಳೆ ಹೆರಿಗೆಯ ಹಂತದಲ್ಲಿದ್ದಳು. ಆಸ್ಪತ್ರೆಯನ್ನು ತಲುಪಿದ ನಂತರ, ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಲಾಯಿತು, ವೈದ್ಯರು ಮತ್ತು ದಾದಿಯರು ತಕ್ಷಣವೇ ಬಸ್​ ಏರಿದ್ದರು.

ಮತ್ತಷ್ಟು ಓದಿ: ಕೆಎಸ್​ಆರ್​​ಟಿಸಿ ಬಸ್​​ನಲ್ಲಿಯೇ ಹೆರಿಗೆ, ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಶ್ಲಾಘನೆ

ಅಮಲಾ ಆಸ್ಪತ್ರೆಯ ಬಸ್ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರ ಸಕಾಲಿಕ ನೆರವಿನಿಂದ ಅವರು ಬಸ್‌ನೊಳಗೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮಹಿಳೆಗೆ ಅಗತ್ಯ ವೈದ್ಯಕೀಯ ನೆರವು ಸಿಗುವಂತೆ ಮತ್ತು ಆ ಸಂದರ್ಭದಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಲು ಸಾಧ್ಯವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿ ಮತ್ತು ವೈದ್ಯಕೀಯ ತಂಡವು ಕೆಲಸ ಮಾಡುವುದುದನ್ನು ವಿಡಿಯೋ ತೋರಿಸಿದೆ. ತಾಯಿ ಮತ್ತು ಅವರ ನವಜಾತ ಶಿಶುವನ್ನು ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ