AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿಯಲ್ಲಿ ಮಹಿಳೆಯ ತಲೆಯಿಲ್ಲದ ಬೆತ್ತಲೆ ಶವ ಪತ್ತೆ; ಬೆಚ್ಚಿಬಿದ್ದ ನೊಯ್ಡಾ

ನೊಯ್ಡಾ ಸೆಕ್ಟರ್‌ 108ರ ಐಷಾರಾಮಿ ಪ್ರದೇಶದ ಚರಂಡಿಯಲ್ಲಿ ಮಹಿಳೆಯೊಬ್ಬರ ತಲೆಯಿಲ್ಲದ, ಬೆತ್ತಲೆ ಶವ ಪತ್ತೆಯಾಗಿದೆ. ಈ ಘಟನೆ ಇಡೀ ದೇಶಕ್ಕೇ ಆಘಾತಕವನ್ನುಂಟುಮಾಡಿದೆ. ಆ ಅಪರಿಚಿತ ಮಹಿಳೆಯ ತಲೆ ಹಾಗೂ ಕೈಗಳನ್ನು ಕೂಡ ಕತ್ತರಿಸಲಾಗಿದೆ. ಆ ಮಹಿಳೆ ಯಾರೆಂಬುದನ್ನು ಗುರುತಿಸಲು ಇನ್ನೂ ಪೊಲೀಸರಿಗೆ ಸಾಧ್ಯವಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಚರಂಡಿಯಲ್ಲಿ ಮಹಿಳೆಯ ತಲೆಯಿಲ್ಲದ ಬೆತ್ತಲೆ ಶವ ಪತ್ತೆ; ಬೆಚ್ಚಿಬಿದ್ದ ನೊಯ್ಡಾ
Noida Horror
ಸುಷ್ಮಾ ಚಕ್ರೆ
|

Updated on: Nov 06, 2025 | 3:39 PM

Share

ನೊಯ್ಡಾ, ನವೆಂಬರ್ 6: ಭಾರತದಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅದರಲ್ಲೂ ಅಕ್ರಮ ಸಂಬಂಧದಿಂದ (Extramarital Affair) ಕೊಲೆ ಪ್ರಕರಣಗಳು, ಮಹಿಳೆಯರ ಮೇಲಿನ ಅತ್ಯಾಚಾರ (Physical Abuse) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೀಗ ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida News) ನಡೆದಿರುವ ಕೊಲೆ ಪ್ರಕರಣ ಎಷ್ಟು ಅಮಾನವೀಯವಾಗಿದೆ ಎಂದರೆ ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಹಿಳೆಯ ಶವವೊಂದು ಪತ್ತೆಯಾಗಿದ್ದು, ಆ ದೇಹದ ಮೇಲೆ ಒಂದು ತುಂಡು ಬಟ್ಟೆಯೂ ಇಲ್ಲ, ರುಂಡವೂ ಇಲ್ಲ!

ನೊಯ್ಡಾ ಸೆಕ್ಟರ್ 108ರ ಚರಂಡಿಯಲ್ಲಿ ಅಂಗೈಗಳನ್ನು ಕತ್ತರಿಸಿರುವ, ತಲೆಯನ್ನು ಕತ್ತರಿಸಿರುವ ಮಹಿಳೆಯ ಬೆತ್ತಲೆ ದೇಹವು ಪತ್ತೆಯಾಗಿದೆ. ಮೃತ ಮಹಿಳೆ ಯಾರು, ಆಕೆಯ ವಯಸ್ಸೇನು, ಆಕೆಯನ್ನು ಕೊಲೆ ಮಾಡಿದ್ದು ಯಾರು? ಎಂಬುದರ ಬಗ್ಗೆ ತಿಳಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ 15 ವರ್ಷದ ಬಾಲಕ

ನೊಯ್ಡಾದ ಐಷಾರಾಮಿ ಪ್ರದೇಶದ ಚರಂಡಿಯಲ್ಲಿ ತಲೆಯಿಲ್ಲದ ಮತ್ತು ಬೆತ್ತಲೆ ಶವ ಪತ್ತೆಯಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ತಲೆ ಮತ್ತು ಅಂಗೈಗಳನ್ನು ಕತ್ತರಿಸಲ್ಪಟ್ಟಿರುವ ಶವ ಇಂದು ಬೆಳಿಗ್ಗೆ ಚರಂಡಿಯಲ್ಲಿ ತೇಲುತ್ತಿರುವುದು ಕಂಡುಬಂದಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆ ಮಹಿಳೆಯ ಗುರುತನ್ನು ತಕ್ಷಣ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಮಹಿಳೆಯನ್ನು ಕೊಲೆ ಮಾಡಿ, ಬೇರೆ ಪ್ರದೇಶದಲ್ಲಿ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ಆಕೆಯ ರುಂಡ ಕತ್ತರಿಸಿದ ದೇಹವನ್ನು ನೊಯ್ಡಾ ಸೆಕ್ಟರ್ 108ರಲ್ಲಿ ಎಸೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ದೃಶ್ಯ ಸಿನಿಮಾ ಶೈಲಿಯ ಕೊಲೆ; ಅಡುಗೆಮನೆ ಅಡಿಯಲ್ಲಿತ್ತು ಗಂಡನ ಶವ!

ಈ ಬಗ್ಗೆ ಮಾಹಿತಿ ಪಡೆದ ನಂತರ, ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡವು ಆ ಶವವನ್ನು ಚರಂಡಿಯನ್ನು ಹೊರಗೆ ತೆಗೆದು, ಶಿರಚ್ಛೇದಿತ ದೇಹವನ್ನು ಶವಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದೆ. ಆ ಮಹಿಳೆಯನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ. ಇತರ ಕಾನೂನು ಕ್ರಮಗಳನ್ನು ಸಹ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ತನಿಖೆ ನಡೆಸಲು ತಂಡವನ್ನು ರಚಿಸಲಾಗಿದೆ. ಪ್ರಕರಣದ ಸುಳಿವುಗಳಿಗಾಗಿ ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ