Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ

Salem Gas Cylinder Blast: ಅಗ್ನಿಶಾಮಕದಳದ ಸಿಬ್ಬಂದಿ ಹತ್ತುವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸಿದ ವಿಡಿಯೋ ಕೂಡ ವೈರಲ್ ಆಗಿದೆ.

Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ
ಸ್ಫೋಟಕ್ಕೆ ಛಿದ್ರಗೊಂಡ ಮನೆಗಳು, ರಕ್ಷಣಾ ಕಾರ್ಯಾಚರಣೆ
Follow us
TV9 Web
| Updated By: Lakshmi Hegde

Updated on:Nov 23, 2021 | 1:29 PM

ಅಡುಗೆ ಅನಿಲದ ಸಿಲಿಂಡರ್ ಸ್ಫೋಟವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 10 ಮಂದಿ ಗಾಯಗೊಂಡ ಘಟನೆ ಸೇಲಂನ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ. ಪಾಂಡುರಂಗನ್​ ರಸ್ತೆಯಲ್ಲಿರುವ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು 80 ವರ್ಷದ ರಾಜಲಕ್ಷ್ಮೀ ಎಂಬುವರು ಮೃತಮಹಿಳೆ. ಇವರು ಚಹಾ ಮಾಡಲೆಂದು ಗ್ಯಾಸ್​ ಆನ್​ ಮಾಡುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಸ್ಫೋಟವುಂಟಾಗಿದೆ. ಸ್ಥಳಕ್ಕೆ ಶೇವಾಪೇಟ್​ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಹಾಗೇ, ಅಗ್ನಿಶಾಮಕದಳದ ಸಿಬ್ಬಂದಿಯೂ ಧಾವಿಸಿದ್ದರು. 

ಸಿಲಿಂಡರ್ ಸ್ಫೋಟಗೊಂದ ಮನೆಯಲ್ಲಿದ್ದ ಗೋಪಿ (52) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು ಶೇ.90ರಷ್ಟು ಗಾಯಗೊಂಡಿದ್ದು ಬದುಕುವ ಸಾಧ್ಯತೆ ತುಂಬ ಕಡಿಮೆಯಿದೆ ಎಂದು ವೈದ್ಯರು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಇನ್ನು ಸುತ್ತಲಿದ್ದ ನಾಲ್ಕು ಮನೆಗಳಿಗೆ ತೀವ್ರ ಹಾನಿಯಾಗಿದ್ದು, ವೆಂಕಟರಾಜನ್​, ಇಂದಿರಾಣಿ, ಮೋಹನ್​ ರಾಜ್​, ನಾಗಸುತ, ಗೋಪಾಲ್​, ಧನಲಕ್ಷ್ಮೀ, ಸುದರ್ಶನ್​, ಗಣೇಶನ್​, ಉಷಾರಾಣಿ, ಲೋಕೇಶ್​ ಗಾಯಗೊಂಡವರು.

ಘಟನೆ ಬಗ್ಗೆ ಸೇಲಂ ಜಿಲ್ಲಾ ಅಧಿಕಾರಿ ಎಂ.ವೇಲು ಮಾತನಾಡಿ, ಇಂದು ಮುಂಜಾನೆ 6.30ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಸೇಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇನ್ನು 10ವರ್ಷದ ಬಾಲಕಿಯೊಬ್ಬಳು ಸ್ಫೋಟದಿಂದ ಕುಸಿದ ಮನೆಯ ಅವಶೇಷಗಳಡಿ ಸಿಲುಕಿದ್ದಳು. ಆಕೆಯನ್ನು ರಕ್ಷಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನ ನೀಡಲು ಆನಂದ್ ಸಿಂಗ್ ಕೋರಿಕೆ

Published On - 1:19 pm, Tue, 23 November 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ