Uri: ಉರಿಯಲ್ಲಿ ಪಾಕ್​ನಿಂದ ಶೆಲ್ ದಾಳಿ, ಓರ್ವ ಮಹಿಳೆ ಸಾವು, ಮತ್ತೋರ್ವನಿಗೆ ಗಾಯ

ಜಮ್ಮು ಕಾಶ್ಮೀರದಲ್ಲಿ ಉಗ್ರರು ಅಮಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ದಿನದಿಂದ ಇಲ್ಲಿಯವರೆಗೆ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ರಝರ್ವಾನಿಯಿಂದ ಬಾರಾಮುಲ್ಲಾಗೆ ಹೋಗುತ್ತಿದ್ದ ವಾಹನವು ಮೊಹುರಾ ಬಳಿ ಶೆಲ್ ದಾಳಿಗೆ ತುತ್ತಾಗಿದೆ.

Uri: ಉರಿಯಲ್ಲಿ ಪಾಕ್​ನಿಂದ ಶೆಲ್ ದಾಳಿ, ಓರ್ವ ಮಹಿಳೆ ಸಾವು, ಮತ್ತೋರ್ವನಿಗೆ ಗಾಯ
ಪಾಕಿಸ್ತಾನ
Image Credit source: Daily Excelsior

Updated on: May 09, 2025 | 8:05 AM

ಉರಿ, ಮೇ 09: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ(Uri) ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ರಝರ್ವಾನಿಯಿಂದ ಬಾರಾಮುಲ್ಲಾಗೆ ಹೋಗುತ್ತಿದ್ದ ವಾಹನವು ಮೊಹುರಾ ಬಳಿ ಶೆಲ್ ದಾಳಿಗೆ ತುತ್ತಾಗಿದೆ.

ಘಟನೆಯಲ್ಲಿ, ಬಶೀರ್ ಖಾನ್ ಅವರ ಪತ್ನಿ ರಝರ್ವಾನಿ ನಿವಾಸಿ ನರ್ಗೀಸ್ ಬೇಗಂ ಪ್ರಾಣ ಕಳೆದುಕೊಂಡಿದ್ದಾರೆ. ರಝರ್ವಾನಿ ನಿವಾಸಿಯಾಗಿರುವ ಮತ್ತೊಬ್ಬ ಮಹಿಳೆ ಹಫೀಜಾ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ತಕ್ಷಣ ಜಿಎಂಸಿ ಬಾರಾಮುಲ್ಲಾಗೆ ಕರೆದೊಯ್ಯಲಾಯಿತು.

ಕಳೆದ ಕೆಲವು ದಿನಗಳಿಂದ ಪಾಕಿಸ್ತಾನವು ಉತ್ತರ ಕಾಶ್ಮೀರದ ಉರಿ ಮತ್ತು ಕುಪ್ವಾರಾ ಭಾಗಗಳ ಗಡಿ ಪ್ರದೇಶಗಳ ಮೇಲೆ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದೆ. ಗುರುವಾರ ರಾತ್ರಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನದಾದ್ಯಂತ ಗಡಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದೆ.

ಇದನ್ನೂ ಓದಿ
ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು
ಮತ್ತೆ ಪಾಕಿಸ್ತಾನದೊಳಗೆ ನುಗ್ಗಿದ ಭಾರತ; ಇಸ್ಲಮಾಬಾದ್, ಲಾಹೋರ್ ಮೇಲೆ ದಾಳಿ
ಚೀನಾ ಜೆಟ್‌ ಬಳಸಿದ್ದೇವೆಂಬ ಪಾಕ್ ಹೇಳಿಕೆಗೆ ಬೀಜಿಂಗ್ ಪ್ರತಿಕ್ರಿಯೆ
ದಾಳಿಗೆ ಯತ್ನ: ಪಾಕ್​​​ ಫೈಟರ್​ ಜೆಟ್ ಧ್ವಂಸಗೊಳಿಸಿದ​ ಭಾರತೀಯ ಸೇನಾಪಡೆ

ಇಂದು ಸಂಜೆ ಯುದ್ಧದ ತೀವ್ರ ಉಲ್ಬಣದಲ್ಲಿ, ಪಾಕಿಸ್ತಾನಿ ಸೇನೆಯು ಜಮ್ಮು, ಪಂಜಾಬ್‌ನ ಪಠಾಣ್‌ಕೋಟ್ ಮತ್ತು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಫಿರಂಗಿ ಗುಂಡಿನ ದಾಳಿ ನಡೆಸಿತು. ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಭಾರತೀಯ ವಾಯು ರಕ್ಷಣಾ ವ್ಯವಸ್ಥೆಗಳು ತಟಸ್ಥಗೊಳಿಸಿದವು. ಜೈಸಲ್ಮೇರ್‌ನಲ್ಲಿ ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತೀಯ ವಾಯು ರಕ್ಷಣಾ ಪಡೆಗಳು ಸಹ ತಡೆಹಿಡಿದವು. ಸ್ಫೋಟಗಳು ಕೇಳಿಬಂದವು ಮತ್ತು ಆಕಾಶದಲ್ಲಿ ಮಿಂಚುಗಳು ಕಂಡುಬಂದವು.

ಮತ್ತಷ್ಟು ಓದಿ: ಇತ್ತ ಭಾರತ, ಅತ್ತ ಬಲೂಚ್ ದಾಳಿಗೆ ಕಂಗೆಟ್ಟ ಪಾಕಿಸ್ತಾನ: ಗ್ಯಾಸ್ ಪೈಪ್​ಲೈನ್ ಸ್ಫೋಟಿಸಿದ ಬಿಎಲ್​ಎ

ಏಪ್ರಿಲ್ 22 ರಂದು 26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಒಂದು ದಿನದ ನಂತರ ಇದು ಸಂಭವಿಸಿದೆ. ಮೇ 7-8 ರಂದು, ಭಾರತದ 15 ನಗರಗಳನ್ನು ಗುರಿಯಾಗಿಸುವ ಪಾಕಿಸ್ತಾನದ ಪ್ರಯತ್ನವನ್ನು ಭಾರತ ಭಾರತ ವಿಫಲಗೊಳಿಸಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ