Tiger Attack: ಮಧ್ಯಪ್ರದೇಶದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ಹುಲಿ ದಾಳಿಯಿಂದ ಮಹಿಳೆ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕನ್ಹಾ ಹುಲಿ ಸಂರಕ್ಷಿತಾರಣ್ಯದಲ್ಲಿ ಈ ಘಟನೆ ನಡೆದಿದೆ. ಮಹಿಳೆ ತನ್ನ ಮಗಳು ಹಾಗೂ ನೆರೆಹೊರೆಯವರೊಂದಿಗೆ ಕಾಡಿಗೆ ತೆರಳಿದ್ದಾಗ ಹುಲಿ ದಾಳಿ ಮಾಡಿದೆ. ಉಳಿದವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Tiger Attack: ಮಧ್ಯಪ್ರದೇಶದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ
ಹುಲಿ-ಸಾಂದರ್ಭಿಕ ಚಿತ್ರ
Image Credit source: Firstcry

Updated on: Aug 07, 2024 | 1:57 PM

ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿ ದಾಳಿಗೆ 56 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಕಲಾವತಿ ಧುರ್ವೆ ತನ್ನ ಮಗಳು ಮತ್ತು ಅಕ್ಕಪಕ್ಕದ ಮನೆಯವರೊಂದಿಗೆ ಕಾಡಿಗೆ ಹೋದಾಗ ಹುಲಿ ದಾಳಿ ಮಾಡಿದೆ. ಹುಲಿ ಅವರ ದೇಹದ ಕೆಲವು ಭಾಗಗಳನ್ನು ತಿಂದಿದೆ, ಆಕೆಯ ಮಗಳು ಮತ್ತು ನೆರೆಹೊರೆಯವರು ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಘಟನೆಯ ಬಗ್ಗೆ ಇತರ ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ.

ಮಾಹಿತಿ ಪಡೆದ ನಂತರ ಕೆಟಿಆರ್ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ತಂಡ ಹುಡುಕಾಟ ನಡೆಸಿತು ಮತ್ತು ಮಹಿಳೆಯ ವಿರೂಪಗೊಂಡ ದೇಹದ ಭಾಗಗಳು ಮಂಗಳವಾರ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅರಣ್ಯ ಪ್ರದೇಶಗಳಿಗೆ ತೆರಳದಂತೆ ಸ್ಥಳೀಯರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹುಲಿಗಳ ಸಂಖ್ಯೆ 700ರಷ್ಟು ಹೆಚ್ಚಾಗಿದೆ. ಒಟ್ಟು ಹುಲಿಗಳ ಸಂಖ್ಯೆ 3682ಕ್ಕೆ ಏರಿದೆ. 563 ಹುಲಿಗಳನ್ನು ಹೊಂದುವ ಮೂಲಕ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಮತ್ತಷ್ಟು ಓದಿ: ಮೈಸೂರಲ್ಲಿ ಹುಲಿ ದಾಳಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ತಿಂದು ತೇಗಿದ ವ್ಯಾಘ್ರ

2018ರ ಗಣತಿಯಲ್ಲಿ ಕರ್ನಾಟಕದಲ್ಲಿ 524 ಹುಲಿಗಳಿದ್ದವು, ಮೊದಲ ಸ್ಥಾನದಲ್ಲಿ ಮಧ್ಯಪ್ರದೇಶವಿದ್ದು ಅಲ್ಲಿ 526 ಹುಲಿಗಳು ಇದ್ದವು. 2023ರ ವರದಿ ಪ್ರಕಾರ ಮಧ್ಯಪ್ರದೇಶದಲ್ಲಿ ಅವುಗಳ ಸಂಖ್ಯೆ 785ಕ್ಕೆ ಜಿಗಿದಿದೆ. ಮೂರನೇ ಸ್ಥಾನದಲ್ಲಿ ಉತ್ತಾರಖಂಡವಿದ್ದು, 2018ರಲ್ಲಿ 444 ಹುಲಿಗಳಿದ್ದವು, ಈಗ ಅವುಗಳ ಸಂಖ್ಯೆ 560ಕ್ಕೆ ಏರಿದೆ. ಸಣ್ಣ ರಾಜ್ಯವಾದ ಉತ್ತರಾಖಂಡವು ಕರ್ನಾಟಕದ ಸಮೀಪವಿತ್ತು.

ಮಧ್ಯಭಾರತ, ಶಿವಾಲಿಕ್ ಬೆಟ್ಟ, ಗಂಗಾ ಬಯಲು ಪ್ರದೇಶಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯ ಹೆಚ್ಚಳವಾಗಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡದಲ್ಲಿ ಅವುಗಳ ಸಂಖ್ಯೆ ಗಮನಾರ್ಹ ಹೆಚ್ಚಳವಾಗಿತ್ತು. ಆದರೆ ಪಶ್ಚಿಮ ಘಟ್ಟದಲ್ಲಿ ಅವುಗಳ ಸಂಖ್ಯೆ ಕುಸಿದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us