ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮಹಿಳೆಗೆ ಕಿರುಕುಳ, ಆರೋಪಿಯ ಬಂಧನ
ಪುಣೆ-ನಾಗ್ಪುರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಸಹ ಪ್ರಯಾಣಿಕ ಕಿರುಕುಳ ನೀಡಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರದಂದು ನಡೆದಿದ್ದರು. ನೆನ್ನೆ (ಮಂಗಳವಾರ) ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ನಾಗ್ಪುರ, ಅ.11: ಪುಣೆ-ನಾಗ್ಪುರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಸಹ ಪ್ರಯಾಣಿಕ ಕಿರುಕುಳ ನೀಡಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರದಂದು ನಡೆದಿದ್ದರು. ನೆನ್ನೆ (ಮಂಗಳವಾರ) ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಪುಣೆಯ ಕೊಂಡ್ವಾ ಪ್ರದೇಶದ ನಿವಾಸಿ ಫಿರೋಜ್ ಶೇಖ್ ಎಂದು ಗುರುತಿಸಲಾಗಿದ್ದು. ಇವರು ಇಂಜಿನಿಯರ್ ವೃತ್ತಿ ಮಾಡುತ್ತಿದ್ದಾರೆ. ಮಹಿಳೆಯನ್ನು ಚಂದ್ರಾಪುರ ನಿವಾಸಿ ಎಂದು ಹೇಳಲಾಗಿದೆ. ಈಕೆ ತಮ್ಮ ತಂದೆಯ ಅಂತಿಮ ಸಂಸ್ಕಾರಕ್ಕಾಗಿ ನಾಗ್ಪುರಕ್ಕೆ ತೆರಳುತ್ತಿದ್ದರು ಎಂದು ಸೋನೆಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ವಿಮಾನವು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಆರೋಪಿಯು ಈ ಮಹಿಳೆಯನ್ನು ಅನಪೇಕ್ಷಿತವಾಗಿ ಹಿಂಬಾಲಿಸಿ, ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಮಾನ ನಿಲ್ದಾಣದಲ್ಲಿರುವ ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಮುಂಬೈ-ಗುವಾಹಟಿ ಇಂಡಿಗೋ ವಿಮಾನದಲ್ಲಿ ಸಹ ಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಪೊಲೀಸರು ಫಿರೋಜ್ ಶೇಖ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಯಾವುದೇ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವನ್ನು ಬಳಸುವುದು, ಆಕೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶ), 354 (ಎ) (ಲೈಂಗಿಕ ಕಿರುಕುಳ) ಮತ್ತು 509 (ಪದ, ಹಾವಭಾವ ಅಥವಾ ನಡವಳಿಕೆಯನ್ನು ಅವಮಾನಿಸುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:03 am, Wed, 11 October 23