ಮೀನು ತರಲೆಂದು ಹೊರಗೆ ಹೋಗಿದ್ದ ಮಹಿಳೆಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು

|

Updated on: Jul 07, 2024 | 1:22 PM

ಮಹಿಳೆಯೊಬ್ಬರು ಮೀನು ತರಲೆಂದು ಪತಿಯ ಜತೆ ಬೈಕ್​ನಲ್ಲಿ ತೆರಳಿದ್ದಾಗ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡದ ಪರಿಣಾಮ ಪತಿ ಹೇಗೋ ಪಚಾವಾಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮೀನು ತರಲೆಂದು ಹೊರಗೆ ಹೋಗಿದ್ದ ಮಹಿಳೆಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು
Image Credit source: NDTV
Follow us on

ಮೀನು ತರಲೆಂದು ಪತಿಯ ಜತೆ ಬೈಕ್​ನಲ್ಲಿ ತೆರಳಿದ್ದಾಗ ಬಿಎಂಡಬ್ಲ್ಯೂ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವರ್ಲಿಯ ಕೋಳಿವಾಡ ಪ್ರದೇಶದಲ್ಲಿ ಮಹಿಳೆ ಮೀನು ಖರೀದಿ ಮಾಡಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.ಪರಿಣಾಮ ಅವರ ಬೈಕ್ ಪಲ್ಟಿಯಾಗಿ ಪತಿ-ಪತ್ನಿ ಇಬ್ಬರೂ ಕಾರಿನ ಬಾನೆಟ್​ ಮೇಲೆ ಬಿದ್ದಿದ್ದರು.

ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಪತಿ ಬಾನೆಟ್​ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ, ಆದರೆ ಮಹಿಳೆಗೆ ಸಾಧ್ಯವಾಗಲಿಲ್ಲ. ಗಾಯಗೊಂಡ ಮಹಿಳೆಯನ್ನು ಸ್ಥಳದಲ್ಲೇ ಬಿಟ್ಟು ಕಾರಿನ ಚಾಲಕ ಪರಾರಿಯಾಗಿದ್ದಾನೆ.ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟೊರೊಳಗೆ ಅವರು ಸಾವನ್ನಪ್ಪಿದ್ದರು.

ಸದ್ಯ ಪತಿ ಚಿಕಿತ್ಸೆ ಪಡೆಯುತ್ತಿದ್ದು, ಹಿಟ್ ಅಂಡ್ ರನ್ ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ 17 ವರ್ಷದ ಬಾಲಕನೊಬ್ಬ ಪುಣೆಯಲ್ಲಿ ತನ್ನ ದುಬಾರಿ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸಿಕೊಂಡು ಬಂದು ಹಿನ್ನೆಲೆ ಬೈಕ್​ಗೆ ಡಿಕ್ಕಿ ಹೊಡೆದಿದ್ದು ಇಬ್ಬರು ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ; ಅಪ್ರಾಪ್ತ ಚಾಲಕನ ಜಾಮೀನು ರದ್ದು

ಈ ಪ್ರಕರಣದಲ್ಲಿ ಆತನ ತಾಯಿ, ಅಜ್ಜ ಹಾಗೂ ಅಮ್ಮನನ್ನು ಪೊಲೀಸರು ಬಂಧಿಸಿದ್ದಾರೆ, ಆರೋಪಿ ವೇದಾಂತ್ ಅಗರ್ವಾಲ್​ಗೆ ಜಾಮೀನು ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:22 pm, Sun, 7 July 24