AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ

ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ
ನಾಯಿImage Credit source: Shutterstock
ನಯನಾ ರಾಜೀವ್
|

Updated on: Feb 16, 2026 | 11:31 AM

Share

ಜೈಪುರ, ಫೆಬ್ರವರಿ 16: ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ(Dog Attack) ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಭಾನುವಾರ ಮಧ್ಯಾಹ್ನ 2.20ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ವಿಮಾನದಿಂದ ಇಳಿದು ನಂತರ ಟರ್ಮಿನಲ್ 2ರಲ್ಲಿ ಹೊರ ಬರುತ್ತಿದ್ದರು. ಗೇಟ್​ನ ಹೊರಗೆ ನಾಯಿಯೊಂದು ಇದ್ದಕ್ಕಿದ್ದಂತೆ ಅವರ ಮೇಲೆ ದಾಳಿ ಮಾಡಿತ್ತು. ದಾಳಿಯಿಂದ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ನೋವಿನಿಂದ ಅವರು ಕಿರುಚಿದ್ದಾರೆ.

ಈ ಘಟನೆಯಿಂದ ಇತರೆ ಪ್ರಯಾಣಿಕರು ದಿಗ್ಭ್ರಮೆಗೊಂಡರು, ಪ್ರತ್ಯಕ್ಷದರ್ಶಿಗಳ ಪ್ರಕಾರ ನೋಡ ನೋಡುತ್ತಿದ್ದಂತೆ ಘಟನೆ ನಡೆದೇ ಹೋಗಿತ್ತು. ಮಹಿಳೆಯರ ಕಿರುಚಾಟ ಕೇಳಿದ ತಕ್ಷಣ ಜನರು ಅವರ ಸಹಾಯಕ್ಕೆ ಮುಂದಾದರು, ಆಕೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದರು.

ಮತ್ತಷ್ಟು ಓದಿ: Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ

ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಗಾಯಗೊಂಡಿದ್ದ ಮಹಿಳೆಯನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಘಟನೆಯ ನಂತರ ವಿಮಾನ ನಿಲ್ದಾಣದ ಆಡಳಿತ ಕೂಡ ಜಾಗರೂಕವಾಗಿದೆ. ಮಹಿಳೆ ಮೇಲೆ ದಾಳಿ ಮಾಡಿದ್ದ ನಾಯಿಗೆ ಈಗಾಗಲೇ ಲಸಿಕೆ ನೀಡಲಾಗಿತ್ತು ಎಂಬುದು ತಿಳಿದುಬಂದಿದೆ. ಆದ್ದರಿಂದ ಯಾವುದೇ ಆರೋಗ್ಯ ಸಮಸ್ಯೆಗಳಾಗದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ