ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ

ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ
ನಾಯಿ
Image Credit source: Shutterstock

Updated on: Feb 16, 2026 | 11:31 AM

ಜೈಪುರ, ಫೆಬ್ರವರಿ 16: ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ(Dog Attack) ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಭಾನುವಾರ ಮಧ್ಯಾಹ್ನ 2.20ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ವಿಮಾನದಿಂದ ಇಳಿದು ನಂತರ ಟರ್ಮಿನಲ್ 2ರಲ್ಲಿ ಹೊರ ಬರುತ್ತಿದ್ದರು. ಗೇಟ್​ನ ಹೊರಗೆ ನಾಯಿಯೊಂದು ಇದ್ದಕ್ಕಿದ್ದಂತೆ ಅವರ ಮೇಲೆ ದಾಳಿ ಮಾಡಿತ್ತು. ದಾಳಿಯಿಂದ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ನೋವಿನಿಂದ ಅವರು ಕಿರುಚಿದ್ದಾರೆ.

ಈ ಘಟನೆಯಿಂದ ಇತರೆ ಪ್ರಯಾಣಿಕರು ದಿಗ್ಭ್ರಮೆಗೊಂಡರು, ಪ್ರತ್ಯಕ್ಷದರ್ಶಿಗಳ ಪ್ರಕಾರ ನೋಡ ನೋಡುತ್ತಿದ್ದಂತೆ ಘಟನೆ ನಡೆದೇ ಹೋಗಿತ್ತು. ಮಹಿಳೆಯರ ಕಿರುಚಾಟ ಕೇಳಿದ ತಕ್ಷಣ ಜನರು ಅವರ ಸಹಾಯಕ್ಕೆ ಮುಂದಾದರು, ಆಕೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದರು.

ಮತ್ತಷ್ಟು ಓದಿ: Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ

ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಗಾಯಗೊಂಡಿದ್ದ ಮಹಿಳೆಯನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಘಟನೆಯ ನಂತರ ವಿಮಾನ ನಿಲ್ದಾಣದ ಆಡಳಿತ ಕೂಡ ಜಾಗರೂಕವಾಗಿದೆ.
ಮಹಿಳೆ ಮೇಲೆ ದಾಳಿ ಮಾಡಿದ್ದ ನಾಯಿಗೆ ಈಗಾಗಲೇ ಲಸಿಕೆ ನೀಡಲಾಗಿತ್ತು ಎಂಬುದು ತಿಳಿದುಬಂದಿದೆ. ಆದ್ದರಿಂದ ಯಾವುದೇ ಆರೋಗ್ಯ ಸಮಸ್ಯೆಗಳಾಗದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us