Delhi: ಫಾರ್ಮ್​ಹೌಸ್​ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರ

ದೆಹಲಿಯ ಫಾರ್ಮ್​ಹೌಸ್​ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಆರೋಪಿ ಧರ್ಮಿಂದರ್ ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆಸುವ ಮೊದಲು ತಾಯಿ ಮತ್ತು ಮಗಳ ಕೈಕಾಲುಗಳನ್ನು ಕಟ್ಟಿಹಾಕಿದ್ದಾನೆ .ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಆರೋಪಿ ಧರ್ಮಿಂದರ್ ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆಸುವ ಮೊದಲು ತಾಯಿ ಮತ್ತು ಮಗಳ ಕೈಕಾಲುಗಳನ್ನು ಕಟ್ಟಿಹಾಕಿದ್ದಾನೆ.

Delhi: ಫಾರ್ಮ್​ಹೌಸ್​ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರ
ಕ್ರೈಂ
Image Credit source: Taylor & Ring

Updated on: Apr 25, 2025 | 2:33 PM

ದೆಹಲಿ, ಏಪ್ರಿಲ್ 25: ಫಾರ್ಮ್​ಹೌಸ್​ನಲ್ಲಿ ಮಗಳ ಎದುರೇ ತಾಯಿ(Mother) ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸ್ವರೂಪ್​ ನಗರದಲ್ಲಿ ನಡೆದಿದೆ. ಫಾರ್ಮ್​ಹೌಸ್​ನ ಮೇಲ್ವಿಚಾರಕಿ ಮೇಲೆ ಪಕ್ಕದ ಮನೆಯವನು ಅತ್ಯಾಚಾರವೆಸಗಿದ್ದಾನೆ. ಬಿಹಾರದ ಮುಜಫರ್‌ಪುರ ಮೂಲದ 35 ವರ್ಷದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಬುಧವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಆರೋಪಿ ಧರ್ಮಿಂದರ್ ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆಸುವ ಮೊದಲು ತಾಯಿ ಮತ್ತು ಮಗಳ ಇಬ್ಬರ ಕೈಕಾಲುಗಳನ್ನು ಕಟ್ಟಿಹಾಕಿದ್ದ.

ಕಾದಿಪುರದ ತೋಟದ ಮನೆಯ ವರಾಂಡಾದಲ್ಲಿ ತಾನು ಮತ್ತು ತನ್ನ 11 ವರ್ಷದ ಮಗಳು ಮಲಗಿದ್ದಾಗ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಅವರು ಕೂಡ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಏಪ್ರಿಲ್ 20 ಮತ್ತು 21 ರ ಮಧ್ಯರಾತ್ರಿ 2 ರಿಂದ 2.30 ರ ಸುಮಾರಿಗೆ, ಅದೇ ಪ್ರದೇಶದಲ್ಲಿ ವಾಸಿಸುವ ಆರೋಪಿ, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ತೋಟದ ಮನೆಯ ಗೋಡೆಯನ್ನು ಹತ್ತಿ, ಮಹಿಳೆ ಆಕೆಯ ಮಗಳ ಜತೆ ಮಲಗಿದ್ದಾಗ ಕೈಕಾಲುಗಳನ್ನು ಕಟ್ಟಿ, ಬೆದರಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ದಿನಗೂಲಿ ಕಾರ್ಮಿಕ ಧರ್ಮಿಂದರ್ ಹಲ್ಲೆಯ ನಂತರ ತೋಟದ ಮನೆಯ ಗೋಡೆ ಹಾರಿ ಪರಾರಿಯಾಗಿದ್ದಾನೆ. ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಮನೆ ಅತಿಕ್ರಮಣ ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಮತ್ತಷ್ಟು ಓದಿ: ಸ್ನೇಹಿತೆ ಮೇಲಾಗುತ್ತಿದ್ದ ಲೈಂಗಿಕ ಕಿರುಕುಳ ತಡೆಯಲು ಹೋದ ವ್ಯಕ್ತಿಯನ್ನು ಹೊಡೆದು ಕೊಂದ ಗುಂಪು

ಈ ತಿಂಗಳ ಆರಂಭದಲ್ಲಿ ದೆಹಲಿಯ ಮಹಿಪಾಲ್‌ಪುರದ ಹೋಟೆಲ್‌ನಲ್ಲಿ ಬ್ರಿಟಿಷ್ ಮಹಿಳೆಯ ಮೇಲೆ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆರೋಪಿಗಳಲ್ಲಿ ಒಬ್ಬ ಸಾಮಾಜಿಕ ಮಾಧ್ಯಮ ವೇದಿಕೆಯಾದ ಇನ್‌ಸ್ಟಾಗ್ರಾಮ್‌ನಲ್ಲಿ ಸಂತ್ರಸ್ತೆಯ ಸ್ನೇಹ ಬೆಳೆಸಿಕೊಂಡಿದ್ದ. ಹೋಟೆಲ್‌ನ ಲಿಫ್ಟ್‌ನಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯೊಬ್ಬರು ಆಕೆಯನ್ನು ಮೊದಲು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ, ಸಾಮಾಜಿಕ ಮಾಧ್ಯಮ ಸಂವಹನಗಳಿಂದ ಆಕೆಗೆ ಪರಿಚಿತನಾಗಿದ್ದ ವ್ಯಕ್ತಿಯೇ ಹೋಟೆಲ್ ಕೋಣೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ದೆಹಲಿಯ ಸದರ್ ಬಜಾರ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮಾರ್ಚ್ 8 ರಂದು ಬಾಲಕಿಯ ತಾಯಿ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ