Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ

Chennai Rains: ಚೆನ್ನೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಈಗಾಗಲೇ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲಿ ನೋಡಿದರೂ ರಸ್ತೆಗಳು ಜಲಾವೃತಗೊಂಡಿವೆ. ವಾಹನ, ಜನ ಸಂಚಾರ ಸ್ಥಗಿತಗೊಂಡಿದೆ.

Video: ಸ್ಮಶಾನದಲ್ಲಿ ಎಚ್ಚರವಿಲ್ಲದೆ ಬಿದ್ದಿದ್ದವನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​ ಅಧಿಕಾರಿ; ಚೆನ್ನೈ ಮಳೆ ಮಧ್ಯೆ ಮನಕಲಕುವ ದೃಶ್ಯ
ಎಚ್ಚರವಿಲ್ಲದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಪೊಲೀಸ್​
Follow us
TV9 Web
| Updated By: Lakshmi Hegde

Updated on:Nov 11, 2021 | 3:01 PM

ಚೆನ್ನೈನಲ್ಲಿ ವಿಪರೀತ ಮಳೆ..(Chennai Rains)ಅನಾಹುತಗಳು ಸೃಷ್ಟಿಯಾಗುತ್ತಿವೆ. ಮಾಧ್ಯಮಗಳಲ್ಲಿ, ಸೋಷಿಯಲ್​ ಮೀಡಿಯಾಗಳಲ್ಲಿ ಚೆನ್ನೈನ ಈಗಿನ ಸನ್ನಿವೇಶದ ಹಲವು ವಿಡಿಯೋಗಳು ವೈರಲ್​ ಆಗುತ್ತಿವೆ. ಆದರೆ ಈ ಮಧ್ಯೆ, ಪ್ರಜ್ಞೆ ತಪ್ಪಿ ಬಿದ್ದಿರುವ ವ್ಯಕ್ತಿಯೊಬ್ಬನನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರು ಹೆಗಲ ಮೇಲೆ ಹೊತ್ತುಕೊಂಡು ಬಂದು ರಕ್ಷಿಸಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರಂತೂ ಕೊಂಡಾಡಿದ್ದಾರೆ. ಟಿಪಿ ಚತ್ರಂ ಎಂಬ ಪ್ರದೇಶದಲ್ಲಿರುವ ಸ್ಮಶಾನದಲ್ಲಿ ವ್ಯಕ್ತಿಯೊಬ್ಬ ಎಚ್ಚರವಿಲ್ಲದೆ ಬಿದ್ದಿದ್ದ. ಆತನನ್ನು ಮಹಿಳಾ ಅಧಿಕಾರಿ ಸ್ವತಃ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಆಟೋದಲ್ಲಿ ಮಲಗಿಸಿದ್ದಾರೆ. ನಂತರ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

ಸುರಿಯುತ್ತಿರುವ ಮಳೆಯ ಮಧ್ಯೆ ಆ ವ್ಯಕ್ತಿ ಅಸ್ವಸ್ಥನಾಗಿ ಬಿದ್ದಿದ್ದಾನೆ. ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಮತ್ತು ಕೆಲವರು ಅವನ ಬಳಿ ಹೋಗುತ್ತಾರೆ. ನಂತರ ರಾಜೇಶ್ವರಿಯವರು ಆತನನ್ನು ಎತ್ತಿ ತಮ್ಮ ಹೆಗಲ ಮೇಲೆ ಹಾಕಿಕೊಳ್ಳುತ್ತಾರೆ. ಅಲ್ಲಿಂದ ಕೆಲ ಮಾರು ದೂರ ಅವನನ್ನು ಹಾಗೇ ಹೊತ್ತುಕೊಂಡೇ ನಡೆಯುತ್ತಾರೆ. ಬಳಿಕ ಆಟೋದಲ್ಲಿ ಮಲಗಿಸುತ್ತಾರೆ. ಈತನ ಪ್ರಾಣವನ್ನು ಹೇಗಾದರೂ ರಕ್ಷಿಸಬೇಕು ಎಂದು ಅವರು ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ.  ವಿಡಿಯೋ ನೋಡಿದ ನೆಟ್ಟಿಗರಂತೂ ರಾಜೇಶ್ವರಿಯವರನ್ನು ಪರಿಪರಿಯಾಗಿ ಹೊಗಳಿದ್ದಾರೆ.

ಚೆನ್ನೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಈಗಾಗಲೇ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲಿ ನೋಡಿದರೂ ರಸ್ತೆಗಳು ಜಲಾವೃತಗೊಂಡಿವೆ. ವಾಹನ, ಜನ ಸಂಚಾರ ಸ್ಥಗಿತಗೊಂಡಿದೆ. ರಾಜ್ಯಾದ್ಯಂತ ಸುಮಾರು 11 ಎನ್​ಡಿಆರ್​ಎಫ್​ ಮತ್ತು 7 ಎಸ್​ಡಿಆರ್​ಎಫ್​ ತಂಡಗಳು ಸನ್ನದ್ಧರಾಗಿ ನಿಂತಿದ್ದಾರೆ. ಇಂದು ಸಂಜೆ ಕೂಡ ಚೆನ್ನೈನ ಉತ್ತರ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ರೆಡ್​ ಅಲರ್ಟ್ ಘೋಷಣೆಯಾಗಿದೆ.

ಇದನ್ನೂ ಓದಿ: Kuvempu Death Anniversay : ಕುವೆಂಪು ಅವರ ಮಕ್ಕಳ ಕಥೆ ‘ನರಿಗಳಿಗೇಕೆ ಕೋಡಿಲ್ಲ?’; ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ನೋಟ

Published On - 2:56 pm, Thu, 11 November 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ