ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಜನರು ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯನ್ನು ಆಕೆಯ ಪಕ್ಕದ ಮನೆಯ ವ್ಯಕ್ತಿಯೊಬ್ಬರು ಪಟಾಶ್‌ಪುರದ ಆಕೆಯ ಮನೆಯಿಂದ ಕರೆದೊಯ್ದಿದ್ದಾನೆ ಎಂದು ವರದಿಯಾಗಿದೆ.
ಆ ವ್ಯಕ್ತಿ ತನ್ನ ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ, ನಂತರ ಆಕೆಗೆ ಬಲವಂತವಾಗಿ ವಿಷ ಕುಡಿಸಿ ಹೊರಗೆ ಬಿಟ್ಟಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಗ್ರಾಮದಾದ್ಯಂತ ಆಕೆಯ ಸಾವಿನ ಸುದ್ದಿ ಹರಡಿದ ನಂತರ ಗ್ರಾಮಸ್ಥರು ಆರೋಪಿಯ ಮನೆಗೆ ತೆರಳಿ ಬಿದಿರಿನ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಘಟನೆ
ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ
ಅಪ್ರಾಪ್ತ ಬಾಲಕನೊಬ್ಬ ತನ್ನ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಈಗ ಗರ್ಭಿಣಿ ಎನ್ನುವ ಮಾಹಿತಿ ಲಭ್ಯವಾಗಿದೆ. ಆತ 16 ವರ್ಷದವನಾಗಿದ್ದು, ತಂಗಿಗಿನ್ನು 13 ವರ್ಷ ವಯಸ್ಸು, ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ.
ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ. ಬಾಲಕಿ ನಿರಾಕರಿಸಿದಾಗ ಆತ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ ಇಬ್ಬರೂ ಮಕ್ಕಳು ಮನೆಯಲ್ಲಿ ಇರುತ್ತಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ