Mumbai: ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರಹಿಂಸೆ

ಈಗಾಗಲೇ ಒಂದು ಸರ್ಜರಿ ಆಗಿದೆ. ಆದರೆ ಮಹಿಳೆ ಚೇತರಿಸಿಕೊಳ್ಳುತ್ತಿಲ್ಲ. ಅವರ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಶಿವಸೇನೆ ಎಂಎಲ್​ಸಿ ತಿಳಿಸಿದ್ದಾರೆ.

Mumbai: ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರಹಿಂಸೆ
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on: Sep 11, 2021 | 11:44 AM

ಮುಂಬೈ: ಇಲ್ಲಿನ ಸಾಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ, ಟೆಂಪೋದ ಮೇಲೆ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಲಾಗಿದೆ. ರೇಪ್​ ಮಾಡಿದ್ದಷ್ಟೇ ಅಲ್ಲದೆ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರ ಹಿಂಸೆ ನೀಡಲಾಗಿದೆ. ರೇಪ್​ ನಡೆದ ಕೆಲವೇ ಹೊತ್ತಲ್ಲಿ ಆರೋಪಿ ಮೋಹನ್​ ಚೌಹಾಣ್​​ (45)ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ನಿನ್ನೆಯೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಪ್ರಜ್ಞೆ ಬಂದಿಲ್ಲ. ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ಖೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಥಳಿಸುತ್ತಿದ್ದಾನೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಅವರು ಹೋಗುವಷ್ಟರಲ್ಲಿ ಆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಗಲೇ ಎಚ್ಚರ ತಪ್ಪಿದ್ದರು. ಕೂಡಲೇ ಮಹಿಳೆಯನ್ನು ರಾಜ್ವಾಡಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.  ಆ ಮಹಿಳೆ ಮೇಲೆ ಅತ್ಯಾಚಾರ ಆಗಿದ್ದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ. ಅಲ್ಲಿಯೇ ನಿಂತಿದ್ದ ಟೆಂಪೋ ಮೇಲೆ ಕೂಡ ರಕ್ತದ ಕಲೆ ಇದೆ ಎಂದು ಪೊಲೀಸರು ವರದಿ ನೀಡಿದ್ದಾರೆ.   ಈ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿರುವುದು ಗೊತ್ತಾಗಿದೆ. ಸದ್ಯ ಅರೆಸ್ಟ್ ಆಗಿರುವ ಆರೋಪಿಯೊಬ್ಬನೇ ಆತ್ಯಾಚಾರ ಮಾಡಿದ್ದಾನೋ, ಗ್ಯಾಂಗ್​ ರೇಪ್​ ಆಗಿದೆಯೋ ಎಂಬುದಿನ್ನೂ ಸ್ಪಷ್ಟವಾಗಿಲ್ಲ. ತನಿಖೆ ನಡೆಸಲಾಗುವುದು ಎಂದೂ ಹೇಳಿದ್ದಾರೆ.

ಶಿವಸೇನೆ ಎಂಎಲ್​ಸಿ ಮನಿಶಾ ಕಯಂದೆ ಸಂತ್ರಸ್ತೆಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈಗಾಗಲೇ ಒಂದು ಸರ್ಜರಿ ಆಗಿದೆ. ಆದರೆ ಮಹಿಳೆ ಚೇತರಿಸಿಕೊಳ್ಳುತ್ತಿಲ್ಲ. ಅವರ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮನಿಶಾ ತಿಳಿಸಿದ್ದಾರೆ. ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಬಿಜೆಪಿ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್​, ಈ ಘಟನೆ ಬಗ್ಗೆ ತುಂಬ ಶಾಕ್​ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಂಡನಿಗೆ 2 ಡೋಸ್​ ಲಸಿಕೆ ಆಗಿದೆ, ಇನ್ನೂ ಮನೆಯಲ್ಲಿದ್ದರೆ ನನಗೆ ಕಷ್ಟ; ವರ್ಕ್​ ಫ್ರಂ ಹೋಮ್​ ನಿಲ್ಲಿಸಿ ಎಂದು ಮನವಿ ಮಾಡಿದ ಹೆಂಡತಿ

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ